IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ
IPL 2026 Ticket: ಬಹುನಿರೀಕ್ಷಿತ ಐಪಿಎಲ್ ಕ್ರಿಕೆಟ್ ಹಬ್ಬ ಆರಂಭಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆಯೇ, ಟಿಕೆಟ್ ಬುಕಿಂಗ್ ಕುರಿತು ಪೊಲೀಸರು ಮಹತ್ವದ ಸಂದೇಶವನ್ನು ಹೊರಡಿಸಿದ್ದಾರೆ. ಅಮಾಯಕರನ್ನು ಗುರಿಯಾಗಿಸಿಕೊಂಡು ಐಪಿಎಲ್ ಟಿಕೆಟ್ ಕೊಡುವ ನೆಪದಲ್ಲಿ ಸೈಬರ್ ವಂಚಕರು ಮೋಸ ಮಾಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ವಂಚನೆಗೆ ಒಳಗಾಗದಂತೆ ಪೊಲೀಸ್ ಇಲಾಖೆ ಮಹತ್ವದ ಮುನ್ನೆಚ್ಚರಿಕೆ ನೀಡಿದೆ.
ಪಂದ್ಯಗಳನ್ನು ವೀಕ್ಷಿಸಲು ಇರುವ ಕ್ರೇಜ್ ಬಳಸಿಕೊಳ್ಳುವ ಕಿಡಿಗೇಡಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮೆಸೇಜಿಂಗ್ ಆ್ಯಪ್ಗಳಲ್ಲಿ ನಕಲಿ ಲಿಂಕ್ಗಳನ್ನು ಹರಿಬಿಡುತ್ತಿದ್ದಾರೆ. ಅಧಿಕೃತ ವೆಬ್ಸೈಟ್ಗಳಂತೆಯೇ ಕಾಣುವ ಈ ಪೋರ್ಟಲ್ಗಳ ಮೂಲಕ ಹಣ ಪಡೆದು ಟಿಕೆಟ್ ನೀಡದೆ ವಂಚಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಕೆಟ್ ಖರೀದಿ ಕುರಿತು ಪೊಲೀಸರ ಪ್ರಮುಖ ಸಲಹೆಗಳು
* ಐಪಿಎಲ್ ಟಿಕೆಟ್ಗಳನ್ನು ಕೇವಲ ಅಧಿಕೃತ ವೆಬ್ಸೈಟ್ಗಳು ಅಥವಾ ನಿಗದಿಪಡಿಸಿದ ಕೌಂಟರ್ಗಳ ಮೂಲಕವೇ ಖರೀದಿಸಿ.
* ವಾಟ್ಸಾಪ್ ಅಥವಾ ಎಸ್ಎಂಎಸ್ ಮೂಲಕ ಬರುವ ಆಕರ್ಷಕ ರಿಯಾಯಿತಿಯ ಲಿಂಕ್ಗಳನ್ನು ಕ್ಲಿಕ್ ಮಾಡಬೇಡಿ.
* ಯಾವುದೇ ವೈಯಕ್ತಿಕ ಖಾತೆಗೆ ಹಣ ವರ್ಗಾಯಿಸುವ ಮೊದಲು ಆ ತಾಣದ ನೈಜತೆಯನ್ನು ಖಚಿತಪಡಿಸಿಕೊಳ್ಳಿ.
* ಅಪರಿಚಿತ ವ್ಯಕ್ತಿಗಳಿಂದ ಕೊನೆ ಕ್ಷಣದಲ್ಲಿ ಟಿಕೆಟ್ ಪಡೆಯಲು ಹೋಗಿ ಹಣ ಕಳೆದುಕೊಳ್ಳಬೇಡಿ.
* ಟಿಕೆಟ್ ವಂಚನೆಗೆ ಸಂಬಂಧಿಸಿದಂತೆ ಯಾವುದೇ ಶಂಕೆ ಬಂದಲ್ಲಿ ಅಥವಾ ಮೋಸಕ್ಕೊಳಗಾದಲ್ಲಿ ತಕ್ಷಣವೇ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ದೂರು ದಾಖಲಿಸಿ ಎಂದು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications