ಆನ್‌ಲೈನ್ ಆಪ್‌ಗಳಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಬುಕ್ಕಿ ಸಿಕ್ಕಿಬಿದ್ದ !
ಬೆಂಗಳೂರು, ಏಪ್ರಿಲ್ 21: ಐಪಿಎಲ್ ಕ್ರಿಕೆಟ್ ಪಂದ್ಯಗಳಿಗೆ ಸಂಬಂಧಿಸಿದಂತೆ ಆನ್‌ಲೈನ್ ಆಪ್ ಗಳ ಮೂಲಕ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಬುಕ್ಕಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಎಚ್.ಆರ್. ಬಿ.ಆರ್ . ಲೇಔಟ್ ನಿವಾಸಿ ಜುನೆಬ್ ಯೂನಿಸ್ ಬಂಧಿತ ಆರೋಪಿ. ಈತನಿಂದ 86 ಸಾವಿರ ರೂ. ನಗದು ಹಣ ಮತ್ತು ಮೊಬೈಲ್ ಪೋನ್ ವಶಪಡಿಸಿಕೊಂಡಿದ್ದಾರೆ.
ಐಪಿಎಲ್ ಆವೃತ್ತಿಯ ಕ್ರಿಕೆಟ್ ಪಂದ್ಯಗಳಿಗೆ ಸಂಬಂಧಿಸಿದಂತೆ ಆನ್‌ಲೈನ್ ಆಪ್ ಗಳ ಮೂಲಕ ಗ್ರಾಹಕರನ್ನು ಸೆಳೆದು ಬೆಟ್ಟಿಂಗ್ ದಂಧೆ ನಡೆಸಲಾಗುತ್ತಿದೆ. ರಾಜಸ್ತಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಮುಂಬಯಿ ಇಂಡಿಯನ್ಸ್, ಚೆನ್ನೈ ಸೂಪರ್ಸ್ ಕಿಂಗ್ಸ್ ತಂಡಗಳ ನಡುವೆ ನಡೆಯಬೇಕಿದ್ದ ತಂಡಗಳ ಬಗ್ಗೆ ಬೆಟ್ಟಿಂಗ್ ಆಡಿಸುತ್ತಿದ್ದ. ಆನ್‌ಲೈನ್ ಮೂಲಕವೇ ಗ್ರಾಹಕರನ್ನು ಸೆಳೆದು ಜೂಜಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದ.
ಮೊಬೈಲ್ ಪೋನ್ ಮೂಲಕವೇ ಕ್ರಿಕೆಟ್ ಪಂದ್ಯಾವಳಿಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ. ಮೊಬೈಲ್ ನಲ್ಲಿ ಜೂಜುಕೋರರನ್ನು ಸಂಪರ್ಕಿಸಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಬಾಣಸವಡಿ ಪೊಲೀಸರು ಜುನೆಬ್ ಯೂನಿಸ್ ನನ್ನು ಬಂಧಿಸಿದ್ದಾರೆ. ಬಂಧಿತನಿಂದ ನಗದು ಹಣ ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ.



Click it and Unblock the Notifications








