IPL Match in Bengaluru: ಬಿಎಂಟಿಸಿ ಸೇವೆ ಅವಧಿ ವಿಸ್ತರಣೆ-ಸಮಯ, ಮಾರ್ಗಗಳ ವಿವರ ತಿಳಿಯಿರಿ
ಬೆಂಗಳೂರು, ಮೇ, 04: ಇಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ & ಗುಜರಾತ್ ಟೈಟನ್ ನಡುವೆ ಪಂದ್ಯ ಇರುವ ಹಿನ್ನೆಲೆ, ಮೆಟ್ರೋ, ಬಿಎಂಟಿಸಿ ಸೇವೆಯ ಅವಧಿ ವಿಸ್ತರಣೆ ಮಾಡಲಾಗಿದೆ. ಹಾಗಾದರೆ ಸಮಯಗಳ ವಿವರವನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಆಡಿರುವ 10ರಲ್ಲಿ 7 ಸೋತು, 3 ಪಂದ್ಯಗಳಲ್ಲಿ ಮಾತ್ರ ಗೆದ್ದಿರುವ ಆರ್‌ಟಿಸಿ ತಂಡ ಇಂದು ಗುಜರಾಜ್ ಟೈಟಾನ್ ವಿರುದ್ದ ನಡೆಯಲಿತುವ 11ನೇ ಪಂದ್ಯದಲ್ಲಿ ಗೆಲ್ಲುವ ತವಕದಲ್ಲಿದೆ. ಇನ್ನು ಗುಜರಾತ್ ಟೈಟಾನ್ಸ್, 10ರಲ್ಲಿ 6 ಸೋತು, 4 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ. ಇಂದಿನ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಹಿನ್ನೆಲೆ ಮೆಟ್ರೋ, ಬಿಎಂಟಿಸಿ ಸೇವೆಯ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯ ವೀಕ್ಷಣೆಗೆ ಬರುವವರ ಅನುಕೂಲಕ್ಕೆ ತಕ್ಕಂತೆ ಬಿಎಂಟಿಸಿ ಬಸ್ ಸೇವೆಯ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಮತ್ತೊಂದೆಡೆ ಮೆಟ್ರೋ ಸೇವೆಯ ಅವಧಿಯನ್ನೂ ಕೂಡ ವಿಸ್ತರಣೆ ಮಾಡಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ 4, 12 ಮತ್ತು 18ರಂದು ಆಯೋಜನೆ ಆಗಿರುವ ಎಲ್ಲ ಪಂದ್ಯಗಳ ವೀಕ್ಷಣೆಗೆ ಬರುವ ಹಾಗೂ ವಾಪಸ್ ಹೋಗುವ ಎರಡು ಅವಧಿಯಲ್ಲಿ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿದ್ದು, ಅಂದು ಎಲ್ಲಾ ನಿಲ್ದಾಣಗಳಿಂದ ರಾತ್ರಿ 1 ಗಂಟೆವರೆಗೆ ಬಿಎಂಟಿಸಿ ಬಸ್‌ಗಳ ಸೇವೆ ಇರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ ಬಸ್ ನಿಲ್ದಾಣ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ಮೃಗಾಲಯ, ಕೆಂಗೇರಿ ಕೆಎಚ್‌ಬಿ ಕ್ವಾರ್ಟರ್ಸ್, ಮಾಗಡಿ ರಸ್ತೆ, ಯಲಹಂಕ 5ನೇ ಹಂತ, ಆರ್.ಕೆ.ಹೆಗಡೆ ನಗರ, ಬಾಗಲೂರು, ಹೊಸಕೋಟೆ ಹಾಗೂ ಬನಶಂಕರಿ ನಡುವೆ ಬಸ್‌ಗಳು ಕಾರ್ಯಾಚರಣೆ ಮಾಡಲಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಬಸ್ ಸಂಚರಿಸುವ ಮಾರ್ಗಗಳ ವಿವರ
SBS-1K -ಕಾಡುಗೋಡಿ ಬಸ್ ನಿಲ್ದಾಣ-ಎಚ್.ಎ.ಎಲ್ ರಸ್ತೆ, SBS-13K-ಕಾಡುಗೋಡಿ ಬಸ್ ನಿಲ್ದಾಣ-ಹೂಡಿ ರಸ್ತೆ, KBS-12HK-ಹೊಸಕೋಟೆ-ಟಿನ್ ಫ್ಯಾಕ್ಟರಿ, G-6-ಕೆಂಗೇರಿ ಕೆ.ಎಚ್.ಬಿ.ಕ್ವಾಟ್ರಸ್-ಎಂ.ಸಿ.ಟಿ.ಸಿ ನಾಯಂಡನಹಳ್ಳಿ,
G-7-ಜನಪ್ರಿಯ ಟೌನಷಿಪ್-ಮಾಗಡಿ ರಸ್ತೆ, G-8- ನೆಲಮಂಗಲ-ಯಶವಂತಪುರ, G-2-ಸರ್ಜಾಪುರ ಅಗರ-ದೊಮ್ಮಸಂದ್ರ ಮಾರ್ಗದಲ್ಲಿ ಬಸ್‌ಗಳು ಸಂಚರಿಸಲಿವೆ.
ಅಲ್ಲದೆ G-3-ಎಲೆಕ್ಟ್ರಾನಿಕ್ ಸಿಟಿ-ಹೊಸೂರು ರಸ್ತೆ, G-4-ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್-ಜಯದೇವ
ಆಸ್ಪತ್ರೆ, G-9-ಯಲಹಂಕ 5ನೇ ಹಂತ-ಹೆಬ್ಬಾಳ, G-10-ಆರ್.ಕೆ.ಹೆಗಡೆ ನಗರ-ಯಲಹಂಕ ನಾಗವಾರ, ಟ್ಯಾನರಿ ರಸ್ತೆ
G-11-ಬಾಗಲೂರು -ಹೆಣ್ಣೂರು ರಸ್ತೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್‌ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್‌ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
IPL 2026: RCB ಫ್ಯಾನ್ಸ್ಗಾಗಿ ಬಿಎಂಟಿಸಿ ಬಸ್‌ಗಳ ಕಾರ್ಯಾಚರಣೆ, ಎಲ್ಲಿಂದ ಎಲ್ಲಿಗೆ? ಮಾರ್ಗ ಡಿಟೇಲ್ಸ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್‌ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್‌ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್‌ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications