IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್
IPL Tickets: 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಈ ಬಾರಿ ಹಲವು ಕಾರಣಗಳಿಗೆ ಸುದ್ದಿಯಲ್ಲಿದೆ. ಅದರಲ್ಲೂ ಮುಖ್ಯವಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ - KSCA)ಯಿಂದ ಕರ್ನಾಟಕದ ಶಾಸಕರು ಹಾಗೂ ಸಚಿವರಿಗೆ ಉಚಿತವಾಗಿ ಐಪಿಎಲ್ ಪಂದ್ಯಗಳಿಗೆ ಉಚಿತವಾಗಿ ಟಿಕೆಟ್ ನೀಡಬೇಕು ಎನ್ನುವ ವಿಚಾರವು ಸಹ ಭಾರೀ ಚರ್ಚೆಗೆ ಕಾರಣವಾಗಿದೆ.
ಇದೀಗ ನಾವು ವಿಐಪಿಗಳು, ನಾವು ಸರತಿ ಸಾಲಿನಲ್ಲಿ ನಿಲ್ಲಲು ಸಾಧ್ಯವಿಲ್ಲ: ಕೆಎಸ್‌ಸಿಎ ಕರ್ನಾಟಕದ ಪ್ರತಿಯೊಬ್ಬ ಶಾಸಕರು ಮತ್ತು ಸಚಿವರಿಗೆ 5 ಟಿಕೆಟ್‌ಗಳನ್ನು ನೀಡಬೇಕು ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ. ಈ ವಿಷಯವು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಈ ರೀತಿಯ ಬೇಡಿಕೆಯು ಹಾಸ್ಯಾಸ್ಪದ ಎಂದು ಸಾರ್ವಜನಿಕರು ಸಹ ಹೇಳಿದ್ದಾರೆ.

ಇದೇ ಮಾರ್ಚ್ 28 ರಿಂದ ಪ್ರಾರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳಿಗೆ ಶಾಸಕರು ಮತ್ತು ಸಚಿವರಿಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್‌ಸಿಎ)ವನ್ನು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ತೀವ್ರವಾಗಿ ಟೀಕಿಸಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು, ಭದ್ರತೆಯಂತಹ ಸರ್ಕಾರಿ ಸೌಲಭ್ಯಗಳನ್ನು ಪಡೆದಿದ್ದರೂ ಸಹ ಕೆಎಸ್‌ಸಿಎ ಚುನಾಯಿತ ಪ್ರತಿನಿಧಿಗಳಿಗೆ ಗೌರವ ಕೊಡುವುದರಲ್ಲಿ ವಿಫಲವಾಗಿದೆ ಎಂದಿದ್ದಾರೆ. ಶಾಸಕರು, ಸಚಿವರು ಅಥವಾ ಅವರ ಕುಟುಂಬಗಳಿಗೆ ಟಿಕೆಟ್‌ಗಳನ್ನು ನೀಡುತ್ತಿಲ್ಲ. ಬದಲಾಗಿ, ಅವರು ಜನರನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡಲು ಕೇಳುತ್ತಿದ್ದಾರೆ. ಆನ್‌ಲೈನ್ ಬುಕಿಂಗ್ ಹೇಗೆ ಕೆಲಸ ಮಾಡುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ, ಇದು ಬ್ಲ್ಯಾಕ್ ಮಾರ್ಕೆಟ್ / ಬ್ಲ್ಯಾಕ್ ಸೇಲ್‌ಗೆ ಕಾರಣವಾಗಿದೆ. ಅಲ್ಲದೆ 5,000 ರೂ. ಮೌಲ್ಯದ ಟಿಕೆಟ್‌ಗಳನ್ನು 35,000 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂದೂ ಅವರು ಆರೋಪ ಮಾಡಿದ್ದಾರೆ.
IPL Tickets: ಪ್ರತಿ ಶಾಸಕರಿಗೆ ಕನಿಷ್ಠ ಐದು ಟಿಕೆಟ್ - ಪ್ರತ್ಯೇಕ ಆಸನ ವ್ಯವಸ್ಥೆ ಮಾಡಿ
ಇನ್ನು ಪ್ರತಿ ಶಾಸಕರಿಗೆ ಕನಿಷ್ಠ ಐದು ಟಿಕೆಟ್‌ಗಳನ್ನು ಕೊಡಬೇಕು ಹಾಗೂ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ. ಪ್ರತಿ ಶಾಸಕರಿಗೆ ಕನಿಷ್ಠ ಐದು ಟಿಕೆಟ್‌ಗಳನ್ನು ಪ್ರತ್ಯೇಕ ಆಸನ ವ್ಯವಸ್ಥೆಯೊಂದಿಗೆ ಹಂಚಿಕೆ ಮಾಡಲಿ ಎಂದು ಒತ್ತಾಯಿಸಿರುವ ಅವರು, ನಾವು ವಿಐಪಿಗಳು; ನಾವು ಸರತಿ ಸಾಲಿನಲ್ಲಿ ನಿಲ್ಲಲು ಸಾಧ್ಯವಿಲ್ಲ. ಕಳೆದ ಬಾರಿ, ನಮ್ಮನ್ನು ಸಾರ್ವಜನಿಕರೊಂದಿಗೆ ಸಾಮಾನ್ಯ ಗ್ಯಾಲರಿಯಲ್ಲಿ ಕೂರಿಸಲಾಗಿತ್ತು. ಇದು ಮತ್ತೆ ಸಂಭವಿಸಬಾರದು ಎಂದೂ ಹೇಳಿದ್ದಾರೆ. ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಮತ್ತು ಸ್ಪೀಕರ್ ಅವರ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.
ಟಿಕೆಟ್ ವ್ಯವಸ್ಥೆ ಮಾಡುವ ಮೂಲಕ ಮತ್ತು ಸರಿಯಾದ ಆಸನಗಳನ್ನು ಖಚಿತಪಡಿಸಿಕೊಳ್ಳುವ ಮೂಲಕ ಈ ವಿಷಯವನ್ನು ಪರಿಹರಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶಾಸಕರಿಗೆ ಭರವಸೆ ನೀಡಿದ್ದಾರೆ ಎಂದು ಕಾಶಪ್ಪನವರ್ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
“We are VIPs, We Cannot Stand in Queues: KSCA Should Give 5 Tickets to Each MLA and Minister of Karnataka,” says Congress MLA Vijayananda Kashappanavar
— Yasir Mushtaq (@path2shah) March 26, 2026
Bengaluru
Congress MLA Vijayananda Kashappanavar has strongly criticized the Karnataka State Cricket Association (#KSCA) for… pic.twitter.com/hkG3UEhPb0
ಗೃಹ ಸಚಿವ ಜಿ. ಪರಮೇಶ್ವರ್ ಅವರು, ಕೆಎಸ್‌ಸಿಎ ಜೊತೆಗಿನ ಸಭೆಯ ಬಗ್ಗೆ, ಪರಿಣಾಮಕಾರಿ ಮಾರ್ಗಸೂಚಿಗಳನ್ನು ನೀಡಲಾಗುತ್ತಿದೆ ಎಂಬ ಹೇಳಿಕೆಗಳನ್ನು ಕಾಶಪ್ಪನವರ್ ತಳ್ಳಿಹಾಕಿದ್ದು, ಸರಿಯಾದ ಮಾರ್ಗಸೂಚಿಗಳಿಲ್ಲ. ಐಪಿಎಲ್ ಪಂದ್ಯಗಳು ನಡೆಯುತ್ತಿರುವುದರಿಂದ ಕೆಎಸ್‌ಸಿಎ ತುಂಬಾ ಶಕ್ತಿಶಾಲಿಯಾಗಿದೆ. ಅವರು ಹಣ ಮಾಡಿಕೊಂಡು ಅದನ್ನು ಆನಂದಿಸುತ್ತಿದ್ದಾರೆ. ಇದು ಮುಂದುವರಿದರೆ, ನಾವು ಅದರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications