IPS; ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ

ಬೆಂಗಳೂರು, ಫೆಬ್ರವರಿ 09: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದರು.

ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್​​ನ ಐಪಿಎಸ್​​ ಅಧಿಕಾರಿ. ಅವರು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.

IPS Officer Pratap Reddy Resigns

ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇಂತಹ ಸಂದರ್ಭದಲ್ಲಿಯೇ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ರಾಜೀನಾಮೆ ರಾಜ್ಯ ಪೊಲೀಸ್ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಕಮಲ್ ಪಂತ್ ಅವರ ಬಳಿಕ ಪ್ರತಾಪ್ ರೆಡ್ಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದರು. ಬಳಿಕ ಅವರನ್ನು ವರ್ಗಾವಣೆ ಮಾಡಿ ದಯಾನಂದ್ ಅವರನ್ನು ನಗರ ಪೊಲೀಸ್ ಆಯುಕ್ತರಾಗಿ ಸರ್ಕಾರ ನೇಮಕ ಮಾಡಿತ್ತು.

ಸೈಬರ್ ಕ್ರೈಂ ಸ್ಪೆಷಲಿಸ್ಟ್: ಸಿ. ಎಚ್. ಪ್ರತಾಪ್ ರೆಡ್ಡಿ ಅವರು ಸಿಬಿಐನಲ್ಲಿಯೂ ಕೆಲಸ ಮಾಡಿದ್ದಾರೆ. ಬ್ಯಾಂಕಿಂಗ್ ವಂಚನೆಗಳು, ಸೈಬರ್ ಕ್ರೈಂಗಳಲ್ಲಿ ಅವರು ಅಪಾರವಾದ ಜ್ಞಾನವನ್ನು ಹೊಂದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿತ್ತು.

ಜು. 1, 1964ರಲ್ಲಿ ಜನಿಸಿದ ಸಿ. ಎಚ್. ಪ್ರತಾಪ್ ರೆಡ್ಡಿ ಬಿ. ಟೆಕ್ ಪದವೀಧರರು. 1991ರಲ್ಲಿ ಕರ್ನಾಟಕ ಕೆಡರ್‌ನ ಐಪಿಎಸ್‌ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿದರು. ರಾಜ್ಯದ ಕೂಲ್‌ ಐಪಿಎಸ್‌ ಅಧಿಕಾರಿಗಳಲ್ಲಿ ಪ್ರತಾಪ್ ರೆಡ್ಡಿ ಅವರು ಸಹ ಒಬ್ಬರು.

ಸಿ. ಎಚ್. ಪ್ರತಾಪ್ ರೆಡ್ಡಿ ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಮುಂಬೈ ಮತ್ತು ಬೆಂಗಳೂರು ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಬ್ಯಾಂಕಿಂಗ್ ಮತ್ತು ಸೈಬರ್ ಸೆಕ್ಯುರಿಟಿ ವಿಭಾಗದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿಯೂ ಗುರುತಿಸಿಕೊಂಡಿದ್ದರು.

ಕರ್ನಾಟಕದಲ್ಲಿ ಹಾಸನ ಜಿಲ್ಲೆಯಲ್ಲಿ ಸಹಾಯಕ ಸೂಪರಿಟೆಂಡೆಂಟ್ ಆಗಿ ಪ್ರತಾಪ್ ರೆಡ್ಡಿ ಅವರು ಕೆಲಸ ಆರಂಭಿಸಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಪಿಯಾಗಿ, ಸಿಐಡಿಯ ಡಿಐಜಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಪತ್ತೆ ಹಚ್ಚಲು ಮಾರ್ಗದರ್ಶನ ನೀಡಿದ್ದಾರೆ.

ರಾಜೀನಾಮೆ ಪತ್ರವನ್ನು ಸಿ. ಎಚ್. ಪ್ರತಾಪ್ ರೆಡ್ಡಿ ಸರ್ಕಾರಕ್ಕೆ ಕಳಿಸಿದ್ದಾರೆ. ಏಪ್ರಿಲ್ 30ರಂದು ಸೇವೆಯಿಂದ ಬಿಡುಗಡೆ ಮಾಡಬೇಕು ಎಂದು ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+