ಆರ್. ಪಿ. ಶರ್ಮಾಗೆ ಗುಂಡೇಟು; ಪೊಲೀಸರು ಹೇಳಿದ್ದೇನು?

ಬೆಂಗಳೂರು, ಸೆಪ್ಟೆಂಬರ್ 02: ಕರ್ನಾಟಕ ಕೆಡರ್‌ನ ಹಿರಿಯ ಐಪಿಎಸ್ ಅಧಿಕಾರಿ ಆರ್. ಪಿ. ಶರ್ಮಾ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಘಟನೆ ಬಗ್ಗೆ ಪೊಲೀಸರು ಹೇಳಿಕೆ ನೀಡಿದ್ದಾರೆ.

ಬೆಂಗಳೂರು ನಗರದ ಈಶನ್ಯ ವಿಭಾಗ ಡಿಸಿಪಿ ಭೀಮಾ ಶಂಕರ್ ಗುಳೇದ್ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. "ಆರ್. ಪಿ. ಶರ್ಮಾ ಅವರ ವೆಪನ್ ನಿಂದಲೇ ಆಕಸ್ಮಿಕವಾಗಿ ಗುಂಡು ಹಾರಿದೆ. ಸಂಜೆ 4.30ಕ್ಕೆ ಈ ಘಟನೆ ನಡೆದಿದೆ" ಎಂದು ಹೇಳಿದ್ದಾರೆ.

"ಕುಟುಂಬಸ್ಥರು ಆರ್. ಪಿ. ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವೈದ್ಯರ ಸಮ್ಮುಖದಲ್ಲಿಯೇ ಆರ್. ಪಿ. ಶರ್ಮಾ ಅವರ ಹೇಳಿಕೆ ದಾಖಲಿಸಿಕೊಂಡಿದ್ದೇವೆ. ಆರೋಗ್ಯ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ವೈದ್ಯರು ಹೇಳಿದ್ದಾರೆ" ಎಂದು ಡಿಸಿಪಿ ತಿಳಿಸಿದ್ದಾರೆ.

IPS Officer RP Sharma Injured As Gun Misfires Police Clarification

"ಆರ್. ಪಿ. ಶರ್ಮಾ ಅವರ ಹೃದಯ, ಶ್ವಾಸಕೋಶಕ್ಕೆ ಯಾವುದೇ ಹಾನಿಯಾಗಿಲ್ಲ. ಎರಡು ರೌಂಡ್ ಗುಂಡು ಹಾರಿದ್ದು, ಎದೆ ಮತ್ತು ಕುತ್ತಿನ ಭಾಗದಲ್ಲಿ ಗಾಯವಾಗಿದೆ" ಎಂದು ಭೀಮಾ ಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.

"ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ, ಆಕಸ್ಮಿಕವಾಗಿ ಗುಂಡು ಹಾರಿರುವುದಕ್ಕೂ ಇದಕ್ಕೂ ಸಂಬಂಧವಿಲ್ಲ" ಎಂದು ಭೀಮಾ ಶಂಕರ್ ಗುಳೇದ್ ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+