ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್. ಪಿ. ಶರ್ಮಾಗೆ ಗುಂಡೇಟು; ಪೊಲೀಸರು ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 02: ಕರ್ನಾಟಕ ಕೆಡರ್‌ನ ಹಿರಿಯ ಐಪಿಎಸ್ ಅಧಿಕಾರಿ ಆರ್. ಪಿ. ಶರ್ಮಾ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಘಟನೆ ಬಗ್ಗೆ ಪೊಲೀಸರು ಹೇಳಿಕೆ ನೀಡಿದ್ದಾರೆ.

ಬೆಂಗಳೂರು ನಗರದ ಈಶನ್ಯ ವಿಭಾಗ ಡಿಸಿಪಿ ಭೀಮಾ ಶಂಕರ್ ಗುಳೇದ್ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. "ಆರ್. ಪಿ. ಶರ್ಮಾ ಅವರ ವೆಪನ್ ನಿಂದಲೇ ಆಕಸ್ಮಿಕವಾಗಿ ಗುಂಡು ಹಾರಿದೆ. ಸಂಜೆ 4.30ಕ್ಕೆ ಈ ಘಟನೆ ನಡೆದಿದೆ" ಎಂದು ಹೇಳಿದ್ದಾರೆ.

ಐಪಿಎಸ್ ಅಧಿಕಾರಿ ಆರ್. ಪಿ. ಶರ್ಮಾಗೆ ಗುಂಡೇಟು; ಆಸ್ಪತ್ರೆಗೆ ದಾಖಲು ಐಪಿಎಸ್ ಅಧಿಕಾರಿ ಆರ್. ಪಿ. ಶರ್ಮಾಗೆ ಗುಂಡೇಟು; ಆಸ್ಪತ್ರೆಗೆ ದಾಖಲು

"ಕುಟುಂಬಸ್ಥರು ಆರ್. ಪಿ. ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವೈದ್ಯರ ಸಮ್ಮುಖದಲ್ಲಿಯೇ ಆರ್. ಪಿ. ಶರ್ಮಾ ಅವರ ಹೇಳಿಕೆ ದಾಖಲಿಸಿಕೊಂಡಿದ್ದೇವೆ. ಆರೋಗ್ಯ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ವೈದ್ಯರು ಹೇಳಿದ್ದಾರೆ" ಎಂದು ಡಿಸಿಪಿ ತಿಳಿಸಿದ್ದಾರೆ.

ಐದು ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆಐದು ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

IPS Officer RP Sharma Injured As Gun Misfires Police Clarification

"ಆರ್. ಪಿ. ಶರ್ಮಾ ಅವರ ಹೃದಯ, ಶ್ವಾಸಕೋಶಕ್ಕೆ ಯಾವುದೇ ಹಾನಿಯಾಗಿಲ್ಲ. ಎರಡು ರೌಂಡ್ ಗುಂಡು ಹಾರಿದ್ದು, ಎದೆ ಮತ್ತು ಕುತ್ತಿನ ಭಾಗದಲ್ಲಿ ಗಾಯವಾಗಿದೆ" ಎಂದು ಭೀಮಾ ಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಜನರಿಗೆ ಬರೆದ ಪತ್ರಬಿಜೆಪಿಗೆ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಜನರಿಗೆ ಬರೆದ ಪತ್ರ

"ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ, ಆಕಸ್ಮಿಕವಾಗಿ ಗುಂಡು ಹಾರಿರುವುದಕ್ಕೂ ಇದಕ್ಕೂ ಸಂಬಂಧವಿಲ್ಲ" ಎಂದು ಭೀಮಾ ಶಂಕರ್ ಗುಳೇದ್ ಸ್ಪಷ್ಟಪಡಿಸಿದ್ದಾರೆ.

English summary
Police clarification on the issue of IPS officer Dr. R.P. Sharma injured after his service weapon misfired. He is in private hospital at Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X