ರಾಸಲೀಲೆ ಪ್ರಕರಣದಲ್ಲಿ ಸಿಲುಕಿದ್ದ ಐಪಿಎಸ್ ಅಧಿಕಾರಿ ವರ್ಗಾವಣೆ

ಬೆಂಗಳೂರು, ಜುಲೈ 17: ರಾಸಲೀಲೆ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯನ್ನು ಎತ್ತಂಗಡಿ ಮಾಡಲಾಗಿದೆ.

ಬೆಂಗಳೂರು ಎಸ್‌ಪಿ ಸ್ಥಾನದಿಂದ ಆರೋಪಿ ಅಧಿಕಾರಿಯನ್ನು ತೆರವುಗೊಳಿಸಿ ಆ ಸ್ಥಾನಕ್ಕೆ ಪಶ್ಚಿಮ ಡಿಸಿಪಿ ಟಿ.ಪಿ.ಶಿವಕುಮಾರ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಐಪಿಎಸ್ ಅಧಿಕಾರಿ, ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಟೆಕಿಯೊಬ್ಬ ಖಾಸಗಿ ವಾಹಿನಿಯಲ್ಲಿ ಆರೋಪ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಸಹ ಬಿಡುಗಡೆ ಮಾಡಿದ್ದರು.

IPS officer who allegedly having Illegal relationship is tranferd

ವಿಡಿಯೋದಲ್ಲಿ ಸಮವಸ್ತ್ರದಲ್ಲಿದ್ದ ಐಪಿಎಸ್ ಅಧಿಕಾರಿ ಮಹಿಳೆಯೊಂದಿಗೆ ರಾಸಲೀಲೆ ತೊಡಗಿದ್ದ ದೃಶ್ಯಗಳಿದ್ದವು. ಈ ವಿಡಿಯೋಗಳು ಖಾಸಗಿ ಮಾಧ್ಯಮಗಳಲ್ಲಿ ಪ್ರಸಾರವಾದವು. ಇದರಿಂದ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಆ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ.

IPS officer who allegedly having Illegal relationship is tranferd

ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವ ಜಿ.ಪರಮೇಶ್ವರ್ ಅವರು, ' ಐಪಿಎಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವ ಅಧಿಕಾರ ಕೇಂದ್ರಕ್ಕೆ ಮಾತ್ರವೇ ಇದೆ ಹಾಗಾಗಿ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಐಜಿ ನೀಲಮಣಿ ರಾಜು ಅವರಿಗೆ ಸೂಚಿಸಿದ್ದೇನೆ, ವರದಿ ಆಧರಿಸಿ ಶಿಸ್ತುಕ್ರಮಕ್ಕೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು' ಎಂದಿದ್ದಾರೆ.

ಲೋಕಾಯುಕ್ತ ಎಸ್‌ಪಿ ಆಗಿದ್ದ ಡಾ.ಸುಮನ್ ಡಿ ಪೆನ್ನೇಕರ್ ಅವರನ್ನು ಕೊಡಗು ಜಿಲ್ಲಾ ಎಸ್‌ಪಿ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+