ಐಪಿಎಸ್ v/s ಐಪಿಎಸ್: ಡಿ ರೂಪಾ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು
ಬೆಂಗಳೂರು, ಜೂ.15. ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ, ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ನಿವೃತ್ತ ಡಿಜಿಪಿ ಎಚ್.ಎನ್ ಸತ್ಯನಾರಾಯಣ ರಾವ್ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಹಾಲಿ ಮತ್ತು ನಿವೃತ್ತ ಐಪಿಎಸ್ ಅಧಿಕಾರಿಗಳ ನಡುವಿನ ಕಾದಾಟಕ್ಕೆ ಹೊಸ ತಿರುವು ಸಿಕ್ಕಿದೆ.
ಮಾನನಷ್ಟ ಮೊಕದ್ದಮೆ ಸಂಬಂಧ ತಮ್ಮ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಡಿ.ರೂಪಾ ಸಲ್ಲಿಸಿದ್ದ ಕ್ರಿಮಿನಲ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ರೂಪಾ ಅವರನ್ನು ಪ್ರಾಸಿಕ್ಯೂಷನ್‌ಗೆ ಒಳಪಡಿಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಜತೆಗೆ, ಸರ್ಕಾರಿ ಅಧಿಕಾರಿಯೊಬ್ಬರು ಮತ್ತೋರ್ವ ಅಧಿಕಾರಿಯ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸುವುದು ಮಾನನಷ್ಟ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಜೊತೆಗೆ ಈ ಹಿಂದೆ ಡಿ.ರೂಪಾ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸಂಬಂಧ ಅಧೀನ ನ್ಯಾಯಾಲಯದ ವಿಚಾರಣೆಗೆ ನೀಡಲಾಗಿದ್ದ ತಡೆಯಾಜ್ಞೆ ತೆರವುಗೊಳಿಸಿ ಇಡೀ ಪ್ರಕರಣ ರದ್ದು ಮಾಡಿದೆ.
ಇದರಿಂದಾಗಿ ಕಾನೂನು ಹೋರಾಟದಲ್ಲಿ ಡಿ.ರೂಪಾಗೆ ಗೆಲುವಾಗಿದ್ದು, ದೂರುದಾರ ಎಚ್. ಎನ್. ಸತ್ಯನಾರಾಯಣ ರಾವ್‌ಗೆ ತೀವ್ರ ಹಿನ್ನಡೆಯಾಗಿದೆ.
ಅರ್ಜಿದಾರರ ವಾದವೇನು? ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 199 ಪ್ರಕಾರ ಸರ್ಕಾರಿ ಸೇವಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಬೇಕಾದರೆ ವಿಶೇಷ ನಿಯಮ ಅನುಸರಿಸಬೇಕು. ಸರ್ಕಾರಿ ಅಭಿಯೋಜಕರ ಮೂಲಕವೇ ಸೆಷನ್ಸ್ ನ್ಯಾಯಾಲಯಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸಬೇಕು. ಮಾನಹಾನಿ ವರದಿ ಪ್ರಕಟಗೊಂಡ ಆರು ತಿಂಗಳ ಒಳಗೆ ಮೊಕದ್ದಮೆ ದಾಖಲಿಸಬೇಕು. ಸತ್ಯನಾರಾಯಣ ಅವರು ಸರ್ಕಾರಿ ಸೇವಕರಾಗಿರುವ ಡಿ.ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಾಗ ಈ ನಿಯಮ ಪಾಲಿಸಿಲ್ಲ ಎಂದು ಹೇಳಿದ್ದರು.
ಅಲ್ಲದೆ, ಸರ್ಕಾರಿ ಸೇವಕರೊಬ್ಬರು ಮತ್ತೋರ್ವ ಸರ್ಕಾರಿ ಸೇವಕರ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸುವುದು ಮಾನನಷ್ಟ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ. ತಮ್ಮ ಅಧಿಕೃತ ಕರ್ತವ್ಯದ ನಿರ್ವಹಣೆ ಭಾಗವಾಗಿ ವರದಿ ಸಲ್ಲಿಸಲಾಗಿರುತ್ತದೆ. ಆದರೂ ಸತ್ಯನಾರಾಯಣ ರಾವ್ ದಾಖಲಿಸಿದ ಮಾನನಷ್ಟ ಮೊಕದ್ದಮೆ ದೂರು ಪರಿಗಣಿಸಿ ಡಿ.ರೂಪಾ ವಿರುದ್ಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತನಿಖೆಗೆ ಆದೇಶಿಸಿರುವುದು, ಕಾಗ್ನಿಜೆನ್ಸ್ ತೆಗೆದುಕೊಂಡು ಸಮನ್ಸ್ ಜಾರಿ ಮಾಡಿರುವುದು ಕಾನೂನು ಬಾಹಿರವಾಗಿದೆ. ಹಾಗಾಗಿ. ಡಿ.ರೂಪಾ ವಿರುದ್ಧದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿದ್ದರು.
ಪ್ರಕರಣದ ಹಿನ್ನೆಲೆ: 2017ರ ಜು.13ರಂದು ರಾಜ್ಯ ಕಾರಾಗೃಹಗಳ ಇಲಾಖೆ ಡಿಜಿಐ ಆಗಿದ್ದ ಡಿ.ರೂಪಾ ಸರ್ಕಾರಕ್ಕೆ ವರದಿ ಸಲ್ಲಿಸಿ, ಕಾರಾಗೃಹ ಇಲಾಖೆ ಡಿಜಿಪಿಯಾಗಿದ್ದ ಎಚ್.ಎನ್. ಸತ್ಯನಾರಾಯಣ ರಾವ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತರಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ವಿಶೇಷ ಸೌಲಭ್ಯ ಕಲ್ಪಿಸಲು ಸತ್ಯನಾರಾಯಣ ರಾವ್ ಎರಡು ಕೋಟಿ ರು. ಲಂಚ ಪಡೆದಿದ್ದಾರೆ ಎಂದು ವರದಿಯಲ್ಲಿ ಆರೋಪಿಸಲಾಗಿತ್ತು. ಈ ಕುರಿತ ಸುದ್ದಿ ಮಾಧ್ಯಮದಲ್ಲಿ ಪ್ರಕಟವಾಗಿದ್ದವು.
2017ರ ಜು.31ರಂದು ಸೇವೆಯಿಂದ ನಿವೃತ್ತರಾಗಿದ್ದ ಸತ್ಯನಾರಾಯಣ ರಾವ್, ಡಿ.ರೂಪಾ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಇದರಿಂದ ತಮ್ಮ ಘನತೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ 2018ರ ಫೆ.5ರಂದು ನಗರದ 9ನೇ ಎಸಿಎಂಎಂ ನ್ಯಾಯಾಲಯಕ್ಕೆ 20 ಕೋಟಿ ರು. ಮೊತ್ತಕ್ಕೆ ಖಾಸಗಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ದೂರುದಾರರ ಪ್ರಮಾಣಿಕೃತ ಹೇಳಿಕೆ ದಾಖಲಿಸಿಕೊಡಿದ್ದ ಎಸಿಎಂಎಂ ನ್ಯಾಯಾಲಯ, 2021ರ ಆ.6ರಂದು ಡಿ.ರೂಪಾ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications