ಬೆಂಗಳೂರಲ್ಲಿ 'ಡಿಜಿಟಲ್' ಭಯೋತ್ಪಾದಕ? ಬಂಧಿತ ವ್ಯಕ್ತಿಗೆ ಪಾಕ್ ನಂಟು
ಬೆಂಗಳೂರು, ಜನವರಿ 24: ಭಾರತೀಯ ರೈಲ್ವೆಗೆ ಡಿಜಿಟಲ್ ಭಯೋತ್ಪಾದಕರ ಕಾಟ ಎದುರಾಗಿರುವ ಅನುಮಾನ ಉದ್ಭವಿಸಿದೆ.
ಐಆರ್ಸಿಟಿಸಿ ವೆಬ್ತಾಣವನ್ನು ಹ್ಯಾಕ್ ಮಾಡಿ ನಕಲಿ ಇ-ಬುಕಿಂಗ್ ಮಾಡುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ಆತನಿಗೆ ಭಯೋತ್ಪಾದಕ ಸಂಘಟನೆಯ ನಂಟು ಇರುವ ಬಗ್ಗೆ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಭಾರತೀಯ ರೈಲ್ವೆಯ ವೆಬ್ಸೈಟ್ (ಐಆರ್ಸಿಟಿಸಿ) ಖನ್ನ ಹಾಕಿ ಇ-ಟಿಕೆಟ್ ಬುಕಿಂಗ್ ಮಾಡಿ ಇಲಾಖೆಗೆ ನಷ್ಟ ಮಾಡುತ್ತಿದ್ದ ಗುಲಾಮ್ ಮುಸ್ತಫಾ ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದು, ಈತನಿಂದ ಲ್ಯಾಪ್ ಟಾಪ್, ಮೊಬೈಲ್ ಸೇರಿ ಇನ್ನೂ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಜಗೋಪಾಲನಗರದ ಮಸೀದಿ ಒಂದರಿಂದ ಈತ ಈ ಚಟುವಟಿಕೆಗಳನ್ನು ನಡೆಸಿದ್ದನಂತೆ. ಕಳೆದ ಎರಡು ವರ್ಷಗಳಿಂದ ಐಆರ್ಸಿಟಿಸಿ ವೆಬ್ಸೈಟ್ ಬಗ್ಗೆ ಮತ್ತು ಅದರಲ್ಲಿರುವ ಕೊರತೆಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾನೆ.
ಈತನು ಡಾರ್ಕ್ವೆಬ್ ಮೂಲಕ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಕೆಲವರೆಡೆ ಸಂಪರ್ಕ ಹೊಂದಿದ್ದು, ಭಯೋತ್ಪಾದನೆ ಸಂಘಟನೆಗಳೊಂದಿಗೂ ಲಿಂಕ್ ಹೊಂದಿದ್ದ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ಒಡಿಸ್ಸಾದಲ್ಲಿ ಭಯೋತ್ಪಾದಕ ಕೃತ್ಯ ನಡೆಸಿದವರ ಜೊತೆ ಈತ ನಂಟು ಹೊಂದಿದ್ದಾನೆ ಎನ್ನಲಾಗಿದೆ. ಈತನ ಡಿಜಿಟಲ್ ಫುಟ್ ಪ್ರಿಂಟ್ ನ ತನಿಖೆ ನಡೆಸಲಾಗುತ್ತಿದೆ.
-
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ?











Click it and Unblock the Notifications