ಮತ್ತೆ ವೈರಾಗ್ಯದ ಮಾತನಾಡಿದ ಡಿ.ಕೆ. ಸುರೇಶ್: ಅಶೋಕ್ ಪ್ರತಿಕ್ರಿಯೆ ಹೀಗಿತ್ತು
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಕಾಂಗ್ರೆಸ್ 2024ರ ಲೋಕಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿದೆ. ಈಗಾಗಲೇ ರಾಜ್ಯದಲ್ಲಿ ಕನಿಷ್ಠ 20 ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಣತೊಟ್ಟಿದ್ದಾರೆ. ಇದಕ್ಕಾಗಿ ಜಿಲ್ಲಾ ಉಸ್ತುವಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.
ಡಿಕೆ ಶಿವಕುಮಾರ್ ಅವರ ರಾಜಕೀಯ ಶಕ್ತಿಯಾಗಿರುವ ಸಂಸದ ಡಿಕೆ ಸುರೇಶ್ ಮಾತ್ರ ಯಾಕೋ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುವ ಸೂಚನೆ ನೀಡಿದ್ದಾರೆ. ಶನಿವಾರ ತಾನೆ ರಾಜಕೀಯ ಜೀವನ ಸಾಕಾಗಿದೆ ಎಂದಿದ್ದ ಅವರು, ಭಾನುವಾರ ಕೂಡ ವೈರಾಗ್ಯದ ಮಾತುಗಳನ್ನಾಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಗೆಲುವು ಸಾಧಿಸಿದ್ದ ಏಕೈಕ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ನೆಮ್ಮದಿ ಇಲ್ಲ, ರಾಜಕೀಯದಲ್ಲಿದ್ದಾಗ ಹೊರಗೆ ಜನರ ಬಳಿ ನೆಮ್ಮದಿಯಾಗಿ ಇರಲು ಆಗಲ್ಲ. ರಾಜಕಾರಣ ಸಾಕಾಗಿಹೋಗಿದೆ. ರಾಜಕೀಯದಿಂದ ದೂರ ಉಳಿಯುವ ಬಗ್ಗೆ ಚಿಂತಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಡಿ.ಕೆ. ಸುರೇಶ್‌ಗೆ ಯಾಕೀ ವೈರಾಗ್ಯ?
ಮಾತು ಮುಂದುವರೆಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಷ್ಟ ಪಟ್ಟವರು ಅಧಿಕಾರ ಅನುಭವಿಸುತ್ತಿದ್ದಾರೆ. ನನಗೆ ರಾಜಕಾರಣ ಬೇಡ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ. ನನ್ನ ಕ್ಷೇತ್ರದ ಕಾರ್ಯಕರ್ತರಿಗೆ ಈಗಾಗಲೇ ಈ ವಿಚಾರ ತಿಳಿಸಿದ್ದೇನೆ, ಹೊಸಬರಿಗೆ ಅವಕಾಶ ಸಿಗಲಿ ಎನ್ನುವುದು ನನ್ನ ಉದ್ದೇಶ. ಕಾಂಗ್ರೆಸ್‌ನಲ್ಲಿ ಸಾಕಷ್ಟು ನಾಯಕರಿದ್ದಾರೆ ನಾನು ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದರು.
ಲೋಕಸಭಾ ಚುನಾವಣೆಗೆ ಇನ್ನೂ 11 ತಿಂಗಳ ಅವಕಾಶ ಇದೆ, ಕ್ಷೇತ್ರದ ಜನತೆಗೆ ನ್ಯಾಯ ಒದಗಿಸಲು ಶ್ರಮಿಸುತ್ತೇನೆ. ಪಕ್ಷ ಸಂಘಟನೆ ಇಂದು ಭಾಗ, ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಬೇರೆ, ಕಾಂಗ್ರೆಸ್‌ನಲ್ಲಿ ಪಕ್ಷ ಸಂಘಟನೆ ಮಾಡಲು ಹಿರಿಯ ನಾಯಕರಿದ್ದಾರೆ, ಅವರಿಗೆ ಅವಕಾಶ ಸಿಗಬೇಕು, ನನಗೇನೂ ಬೇಸರವಿಲ್ಲ, ಖುಷಿಯಿಂದ ಕ್ಷೇತ್ರದ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಎಲ್ಲಾ ಸಚಿವರು, ಶಾಸಕರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಅವರು ಎಂಜಾಯ್ ಮಾಡಲಿ, ನನಗೆ ವಿಶ್ರಾಂತಿ ಬೇಕಿದೆ, ರಾಜಕೀಯ ನನಗೆ ಸರಿಹೊಂದುತ್ತಿಲ್ಲ, ರಾಜಕಾರಣಿಗಳ ಬಗ್ಗೆ ಜನರಲ್ಲಿ ಮರ್ಯಾದೆ ಇಲ್ಲ, ಪಕ್ಷದಲ್ಲೂ ಮರ್ಯಾದೆ ಇಲ್ಲ, ನೆಮ್ಮದಿಯಾಗಿ ಕೆಲಸ ಮಾಡಲೂ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆರ್. ಅಶೋಕ್ ಹೇಳಿದ್ದೇನು?
ಸಂಸದ ಡಿ.ಕೆ. ಸುರೇಶ್ ಅವರ ರಾಜಕೀಯ ನಿವೃತ್ತಿಯ ಮಾತುಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ, ಮಾಜಿ ಸಚಿವ ಆರ್. ಅಶೋಕ್, ಸಿಎಂ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರಿದಂದ ಡಿ.ಕೆ. ಸುರೇಶ್ ರಾಜಕೀಯ ನಿವೃತ್ತಿಯ ಮಾತುಗಳನ್ನಾಡುವಂತೆ ಮಾಡಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರು ಪಕ್ಷಕ್ಕಾಗಿ ದುಡಿದ ಡಿ.ಕೆ ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಅವರಿಗೆ ಸರಿಯಾದ ಸ್ಥಾನಮಾನ ಸಿಗಲು ಬಿಡುತ್ತಿಲ್ಲ ಎಂದು ಹೇಳಿದರು.












Click it and Unblock the Notifications