Bengaluru Metro Fare Hike: ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಕೊನೆಗೂ ಸ್ಪಷ್ಟನೆ ಕೊಟ್ಟ ಬಿಎಂಆರ್‌ಸಿಎಲ್
Bengaluru Metro Fare Hike: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಬಿಎಂಆರ್‌ಸಿಎಲ್ ಪರಿಷ್ಕೃತ ದರವನ್ನು ಪ್ರಕಟಿಸಿತ್ತು. ಈ ಪರಿಷ್ಕೃತ ದರವು ಫೆಬ್ರವರಿ 9ರಿಂದ ಜಾರಿಗೆ ಬರಬೇಕಾಗಿತ್ತು. ಇದೀಗ ಬೆಂಗಳೂರು ಮೆಟ್ರೋ ಪ್ರಯಾಣ ದರದಲ್ಲಿ ಎದುರಾಗಿದ್ದ ಎಲ್ಲಾ ಗೊಂದಲಗಳಿಗೂ ತೆರೆಬಿದ್ದಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್)ವು ದಿನಾಂಕ 5ನೇ ಫೆಬ್ರವರಿ 2026ರಂದು ಪ್ರಕಟಿಸಿದ್ದ ಮಾಧ್ಯಮ ಪ್ರಕಟಣೆಯಲ್ಲಿ ದಿನಾಂಕ 9ನೇ ಫೆಬ್ರವರಿ 2026ರಿಂದ ವಾರ್ಷಿಕ ಸ್ವಯಂಚಾಲಿತ ದರ ಜಾರಿಗೆ ಬರಲಿದೆ / ಪರಿಷ್ಕೃತ ಮೆಟ್ರೋ ಪ್ರಯಾಣ ದರ ಜಾರಿಗೆ ಬರಲಿದೆ ಎಂದು ತಿಳಿಸಲಾಗಿತ್ತು. ಆದರೆ ಈ ನಿರ್ಧಾರವನ್ನು ಮುಂದಿನ ಆದೇಶಗಳ ತನಕ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪರಿಷ್ಕೃತ ದರದ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು.

ಬಿಎಂಆರ್‌ಸಿಎಲ್ ಬೆಂಗಳೂರು ನಾಗರಿಕರಿಗೆ ಸುರಕ್ಷಿತ, ನಂಬಿಗಸ್ತ ಮತ್ತು ಕೈಗೆಟುಕುವ ಮೆಟ್ರೋ ಸೇವೆಗಳನ್ನು ಒದಗಿಸಲು ಸದಾ ಬದ್ಧವಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಪ್ರಕಟಣೆಯಲ್ಲಿ ತಿಳಿಸಿದೆ.
ಸಂಸದ ತೇಜಸ್ವಿ ಸೂರ್ಯ ಟ್ವೀಟ್
ಖಚಿತವಾಗಿ ಹೇಳಿದಂತೆ ಬಿಎಂಆರ್‌ಸಿಎಲ್ ಪ್ರಸ್ತಾವಿತ ಮೆಟ್ರೋ ದರ ಏರಿಕೆಯನ್ನು ನಾಳೆಯಿಂದ ತಡೆಹಿಡಿಯಲಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಟ್ವೀಟ್ ಮಾಡಿದ್ದಾರೆ. ಬಿಎಂಆರ್‌ಸಿಎಲ್‌ನ ಪ್ರಕಟಣೆ ಹಂಚಿಕೊಂಡು ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ ಅವರು, ಒಂದು ವರ್ಷಕ್ಕೂ ಹೆಚ್ಚು ಕಾಲ ಈ ಅನ್ಯಾಯದ ಹೆಚ್ಚಳವನ್ನು ವಿರೋಧಿಸುತ್ತಿರುವ ಬೆಂಗಳೂರಿನ ಜನರಿಗೆ ಸಿಕ್ಕ ಜಯ ಇದಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಪ್ರಸ್ತಾವನೆಯನ್ನು ತಡೆಹಿಡಿಯಲು ಸಕಾಲಿಕ ಮಧ್ಯಪ್ರವೇಶ ಮಾಡಿದ್ದಕ್ಕಾಗಿ ನಾನು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸಚಿವರಾದ ಖಟ್ಟರ್ ಜಿ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ.
ಇದು ಕೇವಲ ತಾತ್ಕಾಲಿಕ ಪರಿಹಾರ ಮಾತ್ರ. ರಾಜ್ಯ ಸರ್ಕಾರವು ಹಿಂದಿನ ಸರ್ಕಾರಗಳಂತೆ ಶಾಡೋ ಕ್ಯಾಶ್ ಬೆಂಬಲವನ್ನು ರಾಜ್ಯ ಸರ್ಕಾರ ಮರುಸ್ಥಾಪಿಸಬೇಕು.
ಅದೇ ರೀತಿ, ನ್ಯಾಯಸಮ್ಮತ, ವೈಜ್ಞಾನಿಕ ಮತ್ತು ಪಾರದರ್ಶಕ ದರ ಪರಿಷ್ಕರಣೆಗೆ ಹೊಸ ದರ ನಿಗದಿ ಸಮಿತಿಯನ್ನು ರಚಿಸಬೇಕು. ಬೆಂಗಳೂರಿನಲ್ಲಿ ಕೈಗೆಟುಕುವ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಹೋರಾಟ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ - ರಾಜ್ಯ ಸರ್ಕಾರದ ನಡುವೆ ಜಟಾಪಟಿ
ಇನ್ನು ಬೆಂಗಳೂರಿನ ನಮ್ಮ ಮೆಟ್ರೋದ ಪ್ರಯಾಣ ದರ ಹೆಚ್ಚಳವು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. ಬೆಲೆ ಏರಿಕೆಯನ್ನು ನಾವು ಮಾಡಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರವು ವಾದ ಮಾಡಿದ್ದರೆ, ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಪಿ.ಸಿ ಮೋಹನ್ ಅವರು ಬೆಂಗಳೂರು ನಮ್ಮ ಮೆಟ್ರೋದ ಪ್ರಯಾಣ ದರ ಹೆಚ್ಚಳವಾಗುವುದಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ದೂರಿದ್ದರು.
-
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ -
Namma Metro: ಐಪಿಎಲ್ ಪಂದ್ಯದ ದಿನ ದಟ್ಟಣೆ ಇಲ್ಲದೇ ಓಡಾಡಿ, ಮೆಟ್ರೋ ಸೇವಾವಧಿ ವಿಸ್ತರಣೆ -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications