ಡಿಕೆ ಶಿವಕುಮಾರ್ ಅವರ ಸ್ವಾಗತಕ್ಕೆ ಸಿದ್ದರಾಮಯ್ಯ ಬರ್ತಾರಾ?

Recommended Video

      Siddaramaiah is not attend the DK Shivakumar wellcome programme | Oneindia Kannada

      ಬೆಂಗಳೂರು, ಅಕ್ಟೋಬರ್ 26: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತಿಹಾರ್ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರ ಸ್ವಾಗತಕ್ಕೆ ಸಿದ್ದರಾಮಯ್ಯ ಬರುತ್ತಾರಾ ಎಂಬ ಪ್ರಶ್ನೆ ಮೂಡಿದೆ.

      ಸಮ್ಮಿಶ್ರ ಸರ್ಕಾರವನ್ನು ಪತನಗೊಳ್ಳಲು ಸಿದ್ದರಾಮಯ್ಯ ಕಾರಣ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇನ್ನೊಂದೆಡೆ ಸಮ್ಮಿಶ್ರ ಸರ್ಕಾರವನ್ನು ಉಳಿಸಲು ಡಿಕೆ ಶಿವಕುಮಾರ್ ಎಚ್‌ಡಿ ಕುಮಾರಸ್ವಾಮಿಯವರ ಜೊತೆ ಹೋರಾಡಿದ್ದರು, ಶಾಸಕರು ಮನವೊಲಿಸಲು ಕೂಡ ಪ್ರಯತ್ನಿಸಿದ್ದರು.

      siddaramaiah

      ಇದೀಗ ಡಿಕೆ ಶಿವಕುಮಾರ್ ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರನ್ನು ಬರಮಾಡಿಕೊಳ್ಳಲು ಸಿದ್ದರಾಮಯ್ಯ ಹೋಗುವುದಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

      ಡಿಕೆಶಿ ಬೆಂಗಳೂರಿಗೆ ಬರುತ್ತಿದ್ದರೆ ಸಿದ್ದರಾಮಯ್ಯ ಗದಗಕ್ಕೆ ತೆರಳಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ಸಿಎಂ ಹೊರಟು ನಿಂತಿದ್ದಾರೆ.

      ಎಐಸಿಸಿ ಮಾತನ್ನು ಮೀರಿದ ಸಿದ್ದರಾಮಯ್ಯರ ಈ ವರ್ತನೆ ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯ ವಿರೋಧಿ ಬಣದ ಕೈಗೆ ಹೊಸ ಅಸ್ತ್ರ ನೀಡಿದಂತಾಗಿದೆ ಎಂದು ಹೇಳಲಾಗುತ್ತಿದೆ.

      ಮಧ್ಯಾಹ್ನ 2 ಗಂಟೆಗೆ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಬರುವ ಸಮಯದಲ್ಲಿ ಅತ್ತ ಸಿದ್ದರಾಮಯ್ಯ ಗದಗದಲ್ಲಿ ಜಿಲ್ಲಾ ಕಾಂಗ್ರೆಸ್ ನಿಂದ ಸನ್ಮಾನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಹೀಗೆ ಡಿಕೆಶಿ ಸ್ವಾಗತ ಕಾರ್ಯಕ್ರಮದಿಂದ ಸಂಪೂರ್ಣ ಅಂತರ ಕಾಯ್ದುಕೊಳ್ಳಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+