Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ

ಬಾಗಲಕೋಟೆ: ನನ್ನ ಆತ್ಮೀಯರೂ-ಪಕ್ಷ ನಿಷ್ಠೆ ಇದ್ದವರಾಗಿದ್ದ ಎಚ್.ವೈ. ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಗೆಲ್ಲಬೇಕು. ನಾನೇ ಚುನಾವಣೆಗೆ ನಿಂತಿದ್ದೇನೆ ಎಂದುಕೊಂಡು ಮತ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮನವಿ ಮಾಡಿದರು.

ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಬಾಗಲಕೋಟೆ ಕ್ಷೇತ್ರದ ರಾಂಪುರ ಹಾಗೂ ಬೇವೂರ ಗ್ರಾಮದಲ್ಲಿ‌ ಮತದಾರರನ್ನು ಉದ್ದೇಶಿಸಿ ಪ್ರಚಾರ ಕಾರ್ಯ ನಡೆಸಿ ಅವರು ಮಾತನಾಡಿದರು. ನುಡಿದಂತೆ ನಡೆದು ಕೆಲಸ ಮಾಡುತ್ತಿರುವ ನಮ್ಮ ಸರ್ಕಾರದ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆದರೆ, ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ಬಾಕಿ ಉಳಿಸಿದ್ದ 30 ಸಾವಿರ ಕೋಟಿಯಲ್ಲಿ ನಮ್ಮ ಸರ್ಕಾರ 24 ಸಾವಿರ ಕೋಟಿ ರೂಪಾಯಿ ಬಾಕಿ ತೀರಿಸಿದೆ. ಹಣ ಇಲ್ಲದಿದ್ದರೂ ಬಿಜೆಪಿಯವರು ಗುತ್ತಿಗೆ ನೀಡಿ ಹೋದರು.

Veeranna Charantimath

ಚರಂತಿಮಠ್ ಶಾಸಕರಾಗಲು ಲಾಯಕ್ಕಾ?

ಆಲಮಟ್ಟಿ ಅಣೆಕಟ್ಟನ್ನು 524 ಮೀಟರ್ ಗೆ ಎತ್ತರಿಸುವ ಹಾಗೂ ರೈತರಿಗೆ ಪರಿಹಾರ ಕೊಡುವ ಕೆಲಸ ಮಾಡದ ಬಿಜೆಪಿ ಈ ಭಾಗದ ಅಭಿವೃದ್ಧಿಯನ್ನೇ ಮಾಡಲಿಲ್ಲ. ವೀರಣ್ಣ ಚರಂತಿಮಠ್ ಅವರನ್ನು ನೋಡುವುದೇ ಕಷ್ಟ, ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ್ ಅವರು ಶಾಸಕರಾಗಲು ಲಾಯಕ್ಕಾ ಎನ್ನುವುದನ್ನು ಯೋಚಿಸಿ. ಮೇಟಿ ಅವರು ಅತ್ಯಂತ ಸರಳ ಮತ್ತು ಜನಪರ ವ್ಯಕ್ತಿ ಆಗಿದ್ದರು. ಇವರ ಮಗ ಉಮೇಶ್ ಮೇಟಿ ಅವರನ್ನು ಗೆಲ್ಲಿಸಿದರೆ ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದರು.

ಎಲ್ಲರ ಹಿತ ಮತ್ತು ಸರ್ವ ಜನಾಂಗದ ಏಳಿಗೆಯನ್ನು ಬಯಸುವ ಪಕ್ಷ ಕಾಂಗ್ರೆಸ್ ಪಕ್ಷ. ಬಿಜೆಪಿಯವರು ಕೃಷ್ಣಾ ಮೇಲ್ದಂಡೆ ಜಾರಿ ಮಾಡಲಿಲ್ಲ. 13 ವರ್ಷದಿಂದ ಈ ಬಗ್ಗೆ ಗೆಜೆಟ್ ನೋಟಿಫಿಕೇಶನ್ ಮಾಡಲಿಲ್ಲ. ಕೇಂದ್ರದಲ್ಲಿ ಇರುವುದು ಚರಂತಿಮಠ್ ಅವರ ಪಕ್ಷ. ನಾವು ಹಲವು ಬಾರಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ನೀರಾವರಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರೂ ನಮ್ಮ ಮನವಿಯನ್ನು ಈಡೇರಿಸಲಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.

ಇವತ್ತು ಬಾಗಲಕೋಟೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಬರುತ್ತಿರುವುದಕ್ಕೆ ಮೇಟಿಯವರ ಶ್ರಮ ಕಾರಣ. ಹೀಗಾಗಿ ಉಮೇಶ್ ಮೇಟಿಯವರನ್ನೂ ಗೆಲ್ಲಿಸಿ ಕಳುಹಿಸಿದರೆ ನನ್ನ ಕೈ ಬಲಪಡಿಸಿದಂತಾಗುತ್ತದೆ ಎಂದು ತಿಳಿಸಿದರು.

ಬಿಜೆಪಿ ಜನವಿರೋಧಿ ನಿಲುವು

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಆಲಮಟ್ಟಿ ವಿಚಾರದಲ್ಲಿ ಜನವಿರೋಧಿ ನಿಲುವು ಹೊಂದಿದೆ. ಹದಿಮೂರು ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಲಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗಲೂ ಭೂ ಪರಿಹಾರ ಘೋಷಿಸಿದರೂ ಹಣ ನೀಡಲಿಲ್ಲ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದೇ ಒಂದು ರೂಪಾಯಿ ರೈತರ ಸಾಲ ಮನ್ನಾ ಮಾಡಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ದೂರಿದರು.

ಅಧಿಕಾರದಲ್ಲಿದ್ದಾಗ ಜನರಿಗೆ ಸ್ಪಂದಿಸದೆ, ಈಗ ನಮ್ಮ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಮತ ಕೇಳುವ ಯಾವ ನೈತಿಕತೆ ಇದೆ? ಎಂದು ಕಿಡಿ ಕಾರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+