ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಇಸ್ಕಾನ್ ದೇವಾಲಯ ಅ.5 ರಿಂದ ಭಕ್ತರ ದರ್ಶನಕ್ಕೆ ಮುಕ್ತ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 03: ಸತತ ಆರು ತಿಂಗಳ ಬಳಿಕ ಬೆಂಗಳೂರಿನ ಇಸ್ಕಾನ್ ದೇವಾಲಯ ಬಾಗಿಲು ತೆರಲಿದೆ.

ಅಕ್ಟೋಬರ್ 5 ರಿಂದ ಇಸ್ಕಾನ್ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಕೊರೊನಾ ಸೋಂಕಿನಿಂದಾಗಿ ಮಾರ್ಚ್‌ ತಿಂಗಳಲ್ಲಿ ದೇವಸ್ಥಾನದ ಬಾಗಿಲು ಮುಚ್ಚಲಾಗಿತ್ತು.

 ಬೆಳಗಾವಿಯ ಈ ದೇಗುಲಗಳು ಮತ್ತೆ ಒಂದು ತಿಂಗಳ ಕಾಲ ಬಂದ್ ಬೆಳಗಾವಿಯ ಈ ದೇಗುಲಗಳು ಮತ್ತೆ ಒಂದು ತಿಂಗಳ ಕಾಲ ಬಂದ್

ಇದೀಗ ಇನ್ನೆರೆಡು ದಿನಗಳಲ್ಲಿ ದೇವಸ್ಥಾನದ ಬಾಗಿಲು ತೆರೆಯಲಿದ್ದು, ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30 ಮತ್ತು ಸಂಜೆ 4 ರಿಂದ 8ರವರೆಗೆ ತೆರೆದಿರಲಿದೆ. ವಾರಾಂತ್ಯದಲ್ಲಿ ಬೆಳಗ್ಗೆ 9.30ರಿಂದ ರಾತ್ರಿ 8ಗಂಟೆಯವರೆಗೂ ತೆರೆದಿರಲಿದೆ.

Iskcon Temple In Bengaluru To Open For Devotees From October 6

ದೇವಾಲಯಕ್ಕೆ ಬರುವವರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಹತ್ತು ವರ್ಷಕ್ಕಿಂತ ಕಡಿಮೆ ಇರುವವರು ಹಾಗೂ 65ಕ್ಕಿಂತ ಹೆಚ್ಚು ವರ್ಷದವರು ದೇವಸ್ಥಾನಕ್ಕೆ ಬರುವಂತಿಲ್ಲ. ಭಜನೆ, ಭಗವದ್ಗೀತೆ ಇನ್ನಿತರೆ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ.

ಕೇಂದ್ರ ಸರ್ಕಾರ ಅನ್‍ಲಾಕ್ 5 ಜಾರಿ ಮಾಡಿದ ಬೆನ್ನಲ್ಲೇ ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಬಹುತೇಕ ಪ್ರಸಿದ್ಧ ದೇವಸ್ಥಾನಗಳನ್ನು ತೆರೆಯಲಾಗುತ್ತಿದೆ. ಅಂತೆಯೇ ಇದೀಗ ನಗರದ ಪ್ರಸಿದ್ಧ ಇಸ್ಕಾನ್ ದೇವಾಲಯವನ್ನು ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲಾಗಿದೆ.

ಭಕ್ತರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ದೇವಸ್ಥಾನ ಆಡಳಿತ ಮಂಡಳಿ ಮನವಿ ಮಾಡಿದೆ.ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನ ಬಹುತೇಕ ದೇವಸ್ಥಾನಗಳ ಬಾಗಿಲು ಮುಚ್ಚಲಾಗಿತ್ತು.

English summary
One of Bengaluru's most popular temples has finally decided to open its doors to devotees after being closed from March this year due to the Covid-19 pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X