Palestine supporters in Bengaluru: ಪ್ಯಾಲೆಸ್ತೀನ್ ಪರ ಪ್ರತಿಭಟಿಸಿದವರ ವಿರುದ್ಧ ಬೆಂಗಳೂರಲ್ಲಿ ಎಫ್‌ಐಆರ್, ವರದಿ, ವಿವರ

ಬೆಂಗಳೂರು, ಅಕ್ಟೋಬರ್‌ 17: ಇಸ್ರೇಲ್-ಹಮಾಸ್ ಯುದ್ಧದ ಆರಂಭವಾಗಿ ಹತ್ತು ದಿನಗಳು ಉರುಳಿವೆ. ಬೆಂಗಳೂರಿನಲ್ಲಿ ಕೆಲವರು ಪ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದ್ದಾರೆ.

ಅಕ್ಟೋಬರ್ 16 ರಂದು ನಗರದ ಎಂಜಿ ರೋಡ್‌ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

israel-hamas-war-in-bengaluru

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸೇರಿದಂತೆ ನೂರಾರು ನಾಗರಿಕರು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು ನಗರದಲ್ಲಿ ವಿವಿಧ ನಾಗರಿಕ ಸಂಘಟನೆಗಳು ಭಾನುವಾರ ಪ್ರತಿಭಟನೆಗೆ ಕರೆ ನೀಡಿದ್ದವು.

ಇಸ್ರೇಲ್‌ನೊಂದಿಗೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಲು ಪ್ರತಿಭಟನಾಕಾರರು ಎಂಜಿ ರಸ್ತೆ ಮೆಟ್ರೋ ಬಳಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದ್ದಾರೆ.

ವರದಿಗಳ ಪ್ರಕಾರ, ಫ್ರೀಡಂ ಪಾರ್ಕ್ ಹೊರತುಪಡಿಸಿ ನಗರದ ಯಾವುದೇ ಸ್ಥಳದಲ್ಲಿ ಪ್ರತಿಭಟನೆಗೆ ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಜಿ ರಸ್ತೆಯಲ್ಲಿ ಪ್ರತಿಭಟಿಸಿದ ಹಲವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

israel-hamas-war-in-bengaluru

ಮಂಗಳೂರಿನಲ್ಲಿ ಹಮಾಸ್ ಅನ್ನು ಹೊಗಳಿ ವಿಡಿಯೊ ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಜಾ ಪಟ್ಟಿ ಮೂಲದ ಭಯೋತ್ಪಾದಕ ಸಂಘಟನೆ ಹಮಾಸ್ ಅನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಪೋಸ್ಟ್ ಮಾಡಿದ ಆರೋಪದ ಮೇಲೆ 58 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿನ ಜೋಕಟ್ಟೆ ನಿವಾಸಿ ಝಾಕಿರ್ ಎಂಬಾತ ಹಮಾಸ್‌ ಉಗ್ರರರನ್ನು ದೇಶಪ್ರೇಮಿಗಳೆಂದು ಹಾಡಿ ಹೊಗಳಿದ್ದನೆಂದು ತಿಳಿದುಬಂದಿದೆ. ಹಮಾಸ್‌ಗಾಗಿ ಪ್ರಾರ್ಥಿಸುವಂತೆ ಒತ್ತಾಯಿಸಿ ವಿಡಿಯೊ ಹಂಚಿಕೊಂಡಿದ್ದರ ಬಗ್ಗೆ ವರದಿಯಾಗಿದೆ.

ಆರಂಭದಲ್ಲಿ ವಾಟ್ಸಾಪ್ ಗ್ರೂಪ್‌ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಆರೋಪಿಯು ಸ್ಮಶಾನದಲ್ಲಿ ಕೆಲಸ ಮಾಡುತ್ತಿದ್ದಾನೆ. ವಿಶ್ವ ಖಬರಸ್ತಾನ್ ಸಂಘದ ಸದಸ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಮಂಗಳೂರು ಉತ್ತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಝಾಕಿರ್ ಬಂಧನಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ನಗರ ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 153 (ಎ) (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+