ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿಗಳು ರಿಯಾಯಿತಿ ದರದಲ್ಲಿ ಬಿಎಂಟಿಸಿ ಪಾಸ್ ಪಡೆಯುವುದು ಹೇಗೆ?

|
Google Oneindia Kannada News

ಬೆಂಗಳೂರು, ನವೆಂಬರ್ 11: ಸಿಲಿಕಾನ್ ಸಿಟಿಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಿಯಾಯಿತಿ ದರದಲ್ಲಿ ಬಿಎಂಟಿಸಿ ವಾರ್ಷಿಕ ಪಾಸ್ ವಿತರಿಸಲಾಗುವುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರದ ನಿರ್ದೇಶನದಂತೆ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಿಎಂಟಿಸಿ ಪಾಸ್ ವಿತರಣೆ ಮಾಡಲಾಗುತ್ತಿದೆ. 2021-22ನೇ ಸಾಲಿನ ವಿದ್ಯಾರ್ಥಿ ಪಾಸ್ ಪಡೆಯುವುದಕ್ಕೆ ನವೆಂಬರ್ 12ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗಿದೆ.

ಬೆಂಗಳೂರು: ಬೇಡಿಕೆ ಹೆಚ್ಚಾದ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಎಸಿ ಬಸ್ ಸಂಚಾರ ಹೆಚ್ಚಳ ಬೆಂಗಳೂರು: ಬೇಡಿಕೆ ಹೆಚ್ಚಾದ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಎಸಿ ಬಸ್ ಸಂಚಾರ ಹೆಚ್ಚಳ

ಸೇವಾ ಸಿಂಧು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕೃತ ವೆಬ್ ಸೈಟ್ ಮೂಲಕ ವಿದ್ಯಾರ್ಥಿಗಳು ರಿಯಾಯಿತಿ ಪಾಸಿಗಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ ಪಾಸಿನ ಅರ್ಜಿಗಳನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳಿಂದ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಅನುಮೋದಿಸಲಾಗುವುದು. ತದನಂತರ ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪಾಸ್ ವಿತರಣೆಗಾಗಿ ಬೆಂಗಳೂರು ಒನ್ ಕೇಂದ್ರ, ದಿನಾಂಕ ಹಾಗೂ ಸಮಯವನ್ನು ನಿಗದಿಪಡಿಸಿಕೊಳ್ಳಬೇಕು.

Issuance of student pass for the year 2021-22 from Bangalore Metropolitan Transport Corporation

ಪಾಸ್ ಪಡೆಯುವ ವೇಳೆ ದಾಖಲೆಗಳು ಅವಶ್ಯಕ:

2021-22ನೇ ಸಾಲಿನ ವಿದ್ಯಾರ್ಥಿ ಪಾಸ್ ಪಡೆಯುವುದಕ್ಕೆ ತೆರಳುವ ವೇಳೆಯಲ್ಲಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿರುತ್ತದೆ. ಪಾಸ್ ವಿತರಣಾ ಕೇಂದ್ರಕ್ಕೆ ತೆರಳುವ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಕೇಂದ್ರ, ದಿನಾಂಕ , ಸಮಯ ನಿಗದಿಪಡಿಸಿಕೊಂಡ ಸ್ವೀಕೃತಿ ಪತ್ರ, ಶಾಲೆ ಅಥವಾ ಕಾಲೇಜಿನ ಗುರುತಿನ ಚೀಟಿ, ಶುಲ್ಕ ರಶೀದಿ, ಶಾಲಾ ಮುಖ್ಯಸ್ಥರಿಂದ ದೃಢೀಕರಿಸಿದ ಪತ್ರವನ್ನು ಹಾಜರುಪಡಿಸಬೇಕು. ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸುಗಳನ್ನು 2021ರ ನವೆಂಬರ್ 14ರಿಂದ ಬೆಂಗಳೂರು ಒನ್ ಕೇಂದ್ರಗಳಲ್ಲಿ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಒಂದು ವೇಳೆ ವಿದ್ಯಾರ್ಥಿಗಳ ಅರ್ಜಿಯನ್ನು ಅನುಮೋದಿಸಲು ಶಿಕ್ಷಣ ಸಂಸ್ಥೆಯವರು ನೋಂದಣಿಯಾಗದೇ ಇದ್ದರೆ, ರಾಜ್ಯ ಪಠ್ಯಕ್ರಮ ಹೊಂದಿರುವ 1 ರಿಂದ 10ನೇ ತರಗತಿವರೆಗಿನ ಶಾಲೆಗಳನ್ನು ಹೊರತುಪಡಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕೃತ ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ.

ಬೆಂಗಳೂರು ಒನ್ ಕೇಂದ್ರದಲ್ಲಿ ಪಾಸ್ ವಿತರಣೆ:

ಬಿಎಂಟಿಸಿಯ ವಿದ್ಯಾರ್ಥಿ ಪಾಸುಗಳನ್ನು ಒಟ್ಟು 95 ಬೆಂಗಳೂರು ಒನ್ ಕೇಂದ್ರದಲ್ಲಿ ವಿತರಿಸಲಾಗುವುದು. ಬೆಳಗ್ಗೆ 8 ಗಂಟೆಯಿಂದ ಸಂಜೆ 6.30ರವರೆಗೂ ವಿದ್ಯಾರ್ಥಿಗಳು ಪಾಸ್ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

Recommended Video

ಕಂಗನಾ ಪ್ರಕಾರ ಸ್ವಾತಂತ್ರ್ಯ ಸಿಕ್ಕಿದ್ದು ಮೋದಿ ಅಧಿಕಾರಕ್ಕೆ ಬಂದ್ಮೇಲಂತೆ!! ನೀವೇನಂತೀರಾ? | Oneindia Kannada

English summary
Issuance of student pass for the year 2021-22 from Bangalore Metropolitan Transport Corporation. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X