ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫ್ಲಾಟ್‌ಗಳ ಮೇಲೆ ಐಟಿ ದಾಳಿ ಪ್ರಕರಣ: ಡಿಕೆಶಿಗೆ ಬಿಗ್ ರಿಲೀಫ್

|
Google Oneindia Kannada News

Recommended Video

D K ಶಿವಕುಮಾರ್ ಪರ ನಿಂತ ಹೈ ಕೋರ್ಟ್..? D K Shivakumar

ಬೆಂಗಳೂರು, ಆಗಸ್ಟ್ 20: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನವದೆಹಲಿಯಲ್ಲಿರುವ ಫ್ಲಾಟ್‌ಗಳ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಇದಕ್ಕೂ ಮೊದಲು ಈ ಪ್ರಕರಣದಿಂದ ತಮ್ಮ ಹೆಸರು ಕೈಬಿಡುವಂತೆ ಡಿಕೆ ಶಿವಕುಮಾರ್ ಸಲ್ಲಿಸಿದ್ದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಯಿತು. ಡಿಕೆ ಶಿವಕುಮಾರ್ ಒಡೆತನದ ದೆಹಲಿಯ ನಿವಾಸದಲ್ಲಿ ಅಕ್ರಮ ಹಣ ಪತ್ತೆ ಆರೋಪ ಸಂಬಂಧೈಟಿ ಇಲಾಖೆ ಪ್ರಕರ ದಾಖಲಿಸಿತ್ತು. ಇನ್ನೂ ಈ ಪ್ರಕರಣದಿಂದ ತಮ್ಮ ಹೆಸರನ್ನು ಕೈಬಿಡುವಂತೆ ಡಿಕೆ ಶಿವಕುಮಾರ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

IT Case On DK Shivakumar Flats Big relief To Him

ಕೋರ್ಟ್ ಶಿವಕುಮಾರ್ ಅರ್ಜಿಯನ್ನು ತಿರಸ್ಕರಿಸಿತ್ತು. ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಪ್ರಶ್ನಿಸಿ ಡಿಕೆಶಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ಎರಡನೇ ಆರೋಪಿ ಸಚಿನ್ ನಾರಾಯಣ್ ವಿಚಾರಣೆಗೆ ತಡೆ ನೀಡಿ ಎಂದು ವಕೀಲರು ಮನವಿ ಮಾಡಿದ್ದರು. ಇದೀಗ ಶಿವಕುಮಾರ್ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.

English summary
The High Court has blocked proceedings in the Special Representative Court of the People's Representatives for the IT attack on DK Shivakumar flats in New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X