ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಇಲಾಖೆ ನೋಟಿಸ್
ಬೆಂಗಳೂರು, ಜನವರಿ 3: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಕಳುಹಿಸಿದೆ. ಒಂದೆಡೆ ಸ್ಯಾಂಡಲ್ ವುಡ್ ನಟ, ನಿರ್ದೇಶಕರ ಮೇಲೆ ಐಟಿ ದಾಳಿ ನಡೆಯುತ್ತಿದ್ದರೆ ಇನ್ನೊಂದೆಡೆ ಡಿಕೆ ಶಿವಕುಮಾರ್ ಅವರ ತಾಯಿಗೆ ನೋಟಿಸ್ ದೊರೆತಿದೆ.
ವಿಚಾರಣೆಗೆ ಹಾಜರಾಗುವಂತೆ ಕನಕಪುರ ದೊಡ್ಡ ಆವಲಹಳ್ಳಿಯ ನಿವಾಸದ ಮೇಲೆ ನೋಟಿಸ್ ಅಂಟಿಸಿದ್ದಾರೆ. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ. ಗೌರಮ್ಮ ಅವರು ಮನೆಯಲ್ಲಿಲ್ಲದ ಕಾರಣ ಅವರ ಮನೆಯ ಬಾಗಿಲಿನ ಮೇಲೆ ನೋಟಿಸ್ ಪ್ರತಿಯನ್ನು ಅಂಟಿಸಿ ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಾದ, ಪುನೀತ್ ರಾಜ್‌ಕುಮಾರ್, ಸುದೀಪ್, ಯಶ್, ರಾಕ್ಲೈನ್ ವೆಂಕಟೇಶ್, ಶಿವರಾಜ್‌ಕುಮಾರ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಪರಿಶೀಲನೆ ಮುಂದುವರೆದಿದೆ.












Click it and Unblock the Notifications