ಬೆಂಗಳೂರು: ಕೆಲಸ ನಿರ್ವಹಿಸುತ್ತಿದ್ದ ಕಂಪನಿಯಲ್ಲೇ ಐಟಿ ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು,ಮಾರ್ಚ್ 10: ಕೆಲಸ ನಿರ್ವಹಿಸುತ್ತಿದ್ದ ಕಂಪನಿಯಲ್ಲೇ ಐಟಿ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Recommended Video

      HDK ಮಾತಿಗೆ ದಿನೇಶ್ ಗಡ ಗಡ | Dinesh Kallahalli | Oneindia Kannada

      ಆರ್ಥಿಕ ಸಮಸ್ಯೆಯಿಂದ ನೊಂದಿದ್ದ ಐಟಿ ಉದ್ಯೋಗಿಯೊಬ್ಬರು ಕೆಲಸ ಮಾಡುತ್ತಿದ್ದ ಕಂಪನಿಯ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

      ಚಿಕ್ಕಜಾಲದ ಎಂವಿ ಸೋಲಾರ್ ಕಂಪನಿಯ ನೌಕರ ಶಾಂತಕುಮಾರ್ ಆತ್ಮಹತ್ಯೆಗೆ ಶರಣಾದ ಉದ್ಯೋಗಿ. ಶಾಂತಕುಮಾರ್ ನಿನ್ನೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ರಾತ್ರಿ 9.30ರ ಸುಮಾರಿಗೆ ಕಂಪನಿಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

      IT Employee Commits Suicide In His Company At Bengaluru

      ಕಳೆದ ನಾಲ್ಕು ವರ್ಷಗಳಿಂದ ಸಂಬಳವನ್ನು ಹೆಚ್ಚು ಮಾಡಿರಲಿಲ್ಲ. ಅಷ್ಟೇ ಅಲ್ಲದೆ ಆರ್ಥಿಕವಾಗಿ ಸಮಸ್ಯೆ ಎದುರಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

      ಆತ್ಮಹತ್ಯೆಗೂ ಮುನ್ನ ಶಾಂತಕುಮಾರ್ ಬರೆದಿದ್ದ ಡೆತ್‍ನೋಟ್ ಸ್ಥಳದಲ್ಲಿ ಪತ್ತೆಯಾಗಿದೆ. ಆರ್ಥಿಕ ಸಮಸ್ಯೆ ಹಾಗೂ ಸಂಬಳ ಹೆಚ್ಚಾಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

      ಮೂಲತಃ ಹಿರಿಯೂರಿನವರಾದ ಶಾಂತಕುಮಾರ್, ಐಟಿಐ ಮುಗಿಸಿ ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+