• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಿಮಗೆ ಮುಂದೆ ಕಷ್ಟದ ದಿನಗಳು ಕಾದಿವೆ: ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ!

|

ಬೆಂಗಳೂರು, ಅ. 30: ಉಪ ಚುನಾವಣೆ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರ ವ್ತಾಪ್ತಿಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಸಂಚರಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಪೊಲೀಸರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಚ್ಚರಿಕೆ ಕೊಟ್ಟಿರುವುದು ಕುತೂಹಲ ಮೂಡಿಸಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದವರು. ಯಾವಾಗಲೂ ಮುಖ್ಯಮಂತ್ರಿಗಳ ಬಳಿಯೆ ಗೃಹ ಸಚಿವಾಲಯದ ಗುಪ್ತಚರ ಇಲಾಖೆ ಇರುತ್ತದೆ. ರಾಜ್ಯದಲ್ಲಿ ನಡೆಯುವ ಪ್ರತಿಯೊಂದು ಬೆಳವಣಿಗೆಯನ್ನು ಗುಪ್ತಚರ ಇಲಾಖೆಯ ಐಡಿಜಿಪಿ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತಾರೆ. ಹೀಗಾಗಿ ಪೊಲೀಸ್ ಇಲಾಖೆಯ ಒಳ ಹಿರಗುಗಳನ್ನು ಮುಖ್ಯಮಂತ್ರಿ ಹುದ್ದೆ ನಿಭಾಯಿಸಿದವರು ತಿಳಿದಿರುತ್ತಾರೆ. ಹೀಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಎಚ್ಚರಿಕೆ ಕೊಟ್ಟಿರುವುದು ಮಹತ್ವ ಪಡೆದುಕೊಂಡಿದೆ.

ನಿಮಗೆ ಮುಂದೆ ಕಷ್ಟದ ದಿನಗಳು ಕಾದಿವೆ

ನಿಮಗೆ ಮುಂದೆ ಕಷ್ಟದ ದಿನಗಳು ಕಾದಿವೆ

ಬಿಜೆಪಿ ಸರ್ಕಾರ ಇದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ನಿಮಗೆ ಕಷ್ಟದ ದಿನಗಳು ಕಾದಿವೆ ಎಂದು ಪೊಲೀಸರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಚ್ಚರಿಕೆ ಕೊಟ್ಟಿದ್ದಾರೆ.

ಕುತೂಹಲ ಮೂಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ದೂರವಾಣಿ ಕರೆ!

ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರದ ಜಾಲಹಳ್ಳಿ, ಪೀಣ್ಯ ಮತ್ತಿತರ ವಾರ್ಡ್ ನಲ್ಲಿ ಇಂದು ರೋಡ್‌ ಶೋ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಮತ ಯಾಚನೆ ಮಾಡಿ ಮಾತನಾಡಿದ ಅವರು, ಪೊಲೀಸರು ಒಂದು ಪಕ್ಷದ ಪರ ಕೆಲಸ ಮಾಡಿದರೆ ಸಹಿಸುವುದಿಲ್ಲ ಎಂದರು.

ಮುನಿರತ್ನರಂಥ ಮೂರ್ಖ ಬೇರೊಬ್ಬರಿಲ್ಲ

ಮುನಿರತ್ನರಂಥ ಮೂರ್ಖ ಬೇರೊಬ್ಬರಿಲ್ಲ

ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತೆ. ಮುನಿರತ್ನ ಅವರು ಎರಡು ಬಾರಿ ಗೆದ್ದು ಶಾಸಕನಾಗಲು ಕಾರಣ ಕಾಂಗ್ರೆಸ್ ಪಕ್ಷವೇ ಹೊರತು ಅವರ ವೈಯಕ್ತಿಕ ವರ್ಚಸ್ಸಲ್ಲ ಎಂದು ಎಚ್ಚರಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಆರ್.ಆರ್. ನಗರ ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿ ರೂಪಾಯಿಗಳ ಅನುದಾನ ನೀಡಿದ್ದೆ, ಆದರೂ ನಮಗೆ ದ್ರೋಹ ಮಾಡಿದ್ರಲ್ಲ ಮುನಿರತ್ನ ಅವರೇ, ಅಂಥಾ ಅನ್ಯಾಯ ನಾವೇನು ಮಾಡಿದ್ವಿ ನಿಮ್ಗೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಕಾಂಗ್ರೆಸ್‌ ಎಂದು, ಅದೇ ತಾಯಿಗೆ ಮೋಸ

ಕಾಂಗ್ರೆಸ್‌ ಎಂದು, ಅದೇ ತಾಯಿಗೆ ಮೋಸ

ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷವನ್ನು ನನ್ನ ತಾಯಿ ಅಂತ ಹೇಳ್ತಿದ್ದ ಮುನಿರತ್ನ ಅದೇ ತಾಯಿಗೆ ದ್ರೋಹ ಬಗೆದು ಬಿಜೆಪಿ ಸೇರಿದರು. ನಾವು ಯಾಕಪ್ಪಾ ಪಕ್ಷನ ತಾಯಿ ಅಂತ ಕರೀತಿದ್ದಿ, ಈಗ ಅದೇ ತಾಯಿಗೆ ಮೋಸ ಮಾಡಿದ್ಯಲ್ಲ ಅಂದ್ರೆ ಕಾಂಗ್ರೆಸ್ ನಾಯಕರು ನನ್ನ ತಾಯಿಗೆ ಅವಮಾನ ಮಾಡ್ತಿದಾರೆಂದು ಗೊಳೋ ಅಂತ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ.

ಬಿಜೆಪಿ ಅಭ್ಯರ್ಥಿ ಮುನಿರತ್ನ ಕಣ್ಣೀರಿನ ಕಥೆ ಹೇಳಿದ ಡಿಕೆಶಿ!

ಕಾಂಗ್ರೆಸ್ ಅಭ್ಯರ್ಥಿ ಎಂಬ ಕಾರಣಕ್ಕೆ ಕ್ಷೇತ್ರದ ಜನತೆ ಮುನಿರತ್ನ ಅವರನ್ನು ಎರಡು ಬಾರಿ ಆಯ್ಕೆ ಮಾಡಿದರೇ ಹೊರತು ಅವರು ದೊಡ್ಡ ನಾಯಕರು‌ ಎಂದಲ್ಲ. ನಾವೇನೂ ಅವರ ಕುತ್ತಿಗೆ ಹಿಡಿದು‌ ಪಕ್ಷದಿಂದ ಹೊರ ದಬ್ಬಲಿಲ್ಲ. ಸ್ವಾರ್ಥಕ್ಕಾಗಿ ಅವರು ಬಿಜೆಪಿಗೆ ಹೋದರು. ಇಂಥವರು ರಾಜಕೀಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಸಿದ್ದರಾಮಯ್ಯ ಆರೋಪಿಸಿದರು.

  ಭಾರತದಿಂದ ಕೊರೊನಾ‌ ತವರಿಗೆ ಶುರುವಾಯ್ತು ವಿಮಾನಯಾನ | Oneindia Kannada
  ವಿಜೃಂಭಿಸುತ್ತಿದೆ ಲಂಚಾವತಾರ!

  ವಿಜೃಂಭಿಸುತ್ತಿದೆ ಲಂಚಾವತಾರ!

  ನಮ್ಮ ಸರ್ಕಾರದ ಅವಧಿಯಲ್ಲಿ ಆಡಳಿತದಲ್ಲಿ‌ ಪಾರದರ್ಶಕತೆ ಇತ್ತು. ಈಗ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತದಲ್ಲಿ ಲಂಚಾವತಾರ ವಿಜೃಂಭಿಸುತ್ತಿದ್ದು ಭ್ರಷ್ಟಾಚಾರ ಪಾರದರ್ಶಕವಾಗಿ ನಡೆಯುತ್ತಿದೆ. ಇಂಥ ಸರ್ಕಾರಕ್ಕೆ ಉಪ ಚುನಾವಣೆ ಫಲಿತಾಂಶ ಎಚ್ಚರಿಕೆಯ ಗಂಟೆ ಆಗಬೇಕು. ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಸಿದ್ದರಾಮಯ್ಯ ಅವರು‌ ಮನವಿ ಮಾಡಿದರು.

  English summary
  It is interesting that former CM Siddaramaiah had issued a warning to the Karnataka police. Siddaramaiah campaigns in Sira and RR Nagar by election, Know more.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X