IT kannada ಬೆಂಗಳೂರಿನ ಐಟಿ- ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಡ್ಡಾಯವಾಗಲಿ: ನೆಟ್ಟಿಗರ ಆಗ್ರಹ

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಕನ್ನಡಿಗರಿಗೆ ಆದ್ಯತೆ ಸಿಗುತ್ತಿಲ್ಲ ಎನ್ನುವ ಗಂಭೀರ ಆರೋಪ ಕೇಳಿ ಬಂದಿದ್ದು, ಈ ವಿಚಾರವಾಗಿ ಇದೀಗ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗಂಭೀರ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವು ಸೋಷಿಯಲ್ ಮೀಡಿಯಾದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನ ಪ್ರಮುಖ ಕಂಪನಿಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಅದರಲ್ಲೂ ಮುಖ್ಯವಾಗಿ ಐಟಿ - ಬಿಟಿ ಕಂಪನಿಗಳಲ್ಲಿ ಕನ್ನಡಿಗರೊಂದಿಗೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಇದೀಗ ಈ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಿಯಾಕ್ಟ್‌ ಮಾಡಿದ್ದಾರೆ. ಇದಕ್ಕೆ ಕನ್ನಡಿಗರು ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕ ಸರ್ಕಾರವು ಈ ವಿಚಾರದಲ್ಲಿ ನೀಡಿರುವ ಎಚ್ಚರಿಕೆ ಸಾಲದು ಗಂಭೀರವಾದ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

IT Kannada Kannadigas Concerns Non-Kannadigas Dominating HR Roles Bengaluru IT-BT Firms

ಕರ್ನಾಟಕದ ಪ್ರತಿಯೊಂದು ಕಂಪನಿಯು ಶೇ. 70 ರಷ್ಟು ಕನ್ನಡಿಗರು ಮತ್ತು ಶೇ. 30 ರಷ್ಟು ಕನ್ನಡೇತರರಿಗೆ ಉದ್ಯೋಗ ನೀಡಬೇಕು ಎಂಬ ನೀತಿಯನ್ನು ಪರಿಚಯಿಸುವುದು ಸುಲಭ ಪರಿಹಾರವಾಗಿದೆ. ಇದು ಕರ್ನಾಟಕದಲ್ಲಿ ನಿರುದ್ಯೋಗವನ್ನು ಕಡಿಮೆ ಮಾಡಲು ಮತ್ತು ಕರ್ನಾಟಕದ ಜನರಿಗೆ ನ್ಯಾಯಯುತ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ. ಅಷ್ಟೇ ಎಂದು ಕನ್ನಡಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಮೂರ್ತಿ ಎನ್ನುವವರು, ಸರೋಜಿ ಮಹಿಷಿ ವರದಿಯನ್ನು ಜಾರಿಗೊಳಿಸಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಡ್ಡಾಯಗೊಳಿಸಿ, ಅಂತೆಯೇ ಕಾರ್ಯಾಂಗ, ನ್ಯಾಯಾಂಗ ಹಾಗೂ ಶಾಸಕಾಂಗ ಆಡಳಿತ ವ್ಯವಹಾರದಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸಿ. ಆಗ ಎಲ್ಲರೂ ಕನ್ನಡಕ್ಕೆ ಪ್ರಾಧಾನ್ಯತೆ ಸಿಗುವುದಲ್ಲದೆ ಕನ್ನಡಿಗರಿಗೆ ಉದ್ಯೋಗ ಸಿಗುವುದು ಎಂದಿದ್ದಾರೆ.

ಮಂಜುನಾಥ ಗೌಡ ಎನ್ನುವವರು, ನಾನು ಕರ್ನಾಟಕದವನಾಗಿದ್ದು, ಕಳೆದ 15 ವರ್ಷಗಳಿಂದ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ದೀರ್ಘಕಾಲದ ವೃತ್ತಿಪರ ಅನುಭವದ ಆಧಾರದ ಮೇಲೆ, ಐಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಮತ್ತು ವೃತ್ತಿ ಬೆಳವಣಿಗೆಯಲ್ಲಿ ಸಮಾನ ಅವಕಾಶಗಳು ಸಿಗುತ್ತಿವೆಯೇ ಎಂಬ ಬಗ್ಗೆ ನನಗೆ ಗಂಭೀರ ಕಳವಳವಿದೆ.

ಕೆಲವು ಕಂಪನಿಗಳಲ್ಲಿ ಎಚ್‌ಆರ್ ವಿಭಾಗಗಳಲ್ಲಿ ತಮಿಳು ಮತ್ತು ಮಲಯಾಳಂ ಭಾಷಿಕರ ಪ್ರಾಬಲ್ಯ ಹೆಚ್ಚಿದೆ ಎಂಬ ಭಾವನೆ ಮೂಡಿದ್ದು, ನೇಮಕಾತಿ ಮತ್ತು ವೃತ್ತಿ ಬೆಳವಣಿಗೆಯ ಪ್ರಕ್ರಿಯೆಗಳಲ್ಲಿ ಕನ್ನಡಿಗರಿಗೆ ಸಮಾನ ಅವಕಾಶಗಳು ಸಿಗುತ್ತಿವೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ನನ್ನ ಉದ್ದೇಶ ಯಾವುದೇ ಭಾಷೆಯ ಜನರನ್ನು ವಿರೋಧಿಸುವುದಲ್ಲ.

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಕಂಪನಿಗಳು ಸ್ಥಳೀಯ ಕನ್ನಡಿಗರ ಪ್ರತಿಭೆ, ಅನುಭವ ಮತ್ತು ಅರ್ಹತೆಗಳಿಗೆ ಸೂಕ್ತ ಮನ್ನಣೆ ನೀಡಬೇಕು ಎಂಬುದಷ್ಟೇ ನನ್ನ ಆಶಯ. ಆದ್ದರಿಂದ, ಐಟಿ ಕಂಪನಿಗಳ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆಗಳಲ್ಲಿ ಯಾವುದೇ ರೀತಿಯ ಭಾಷಾ ಅಥವಾ ಪ್ರಾದೇಶಿಕ ಪಕ್ಷಪಾತವಿದೆಯೇ ಎಂಬುದನ್ನು ಪರಿಶೀಲಿಸಿ, ಕನ್ನಡಿಗರು ಸೇರಿದಂತೆ ಎಲ್ಲ ಅರ್ಹ ಅಭ್ಯರ್ಥಿಗಳಿಗೆ ಪಾರದರ್ಶಕವಾಗಿ ಮತ್ತು ಸಮಾನವಾಗಿ ಅವಕಾಶಗಳನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕೆಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದೇನು

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.

ಮುಂದುವರಿದು ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ.

ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+