• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿಕೆ ಶಿವಕುಮಾರ್ ಮನೆ, ಈಗಲ್ಟನ್ ರೆಸಾರ್ಟ್ ಮೇಲೆ ಐಟಿ ದಾಳಿ

By Sachhidananda Acharya
|
Google Oneindia Kannada News

ಬೆಂಗಳೂರು, ಆಗಸ್ಟ್ 2: ಇಂಧನ ಸಚಿವ ಡಿಕೆ ಶಿವಕುಮಾರ್ ಮನೆ ಹಾಗೂ ಗುಜರಾತ್ ನ 44 ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದ 'ಈಗಲ್ಟನ್ - ದಿ ಗಾಲ್ಫ್ ವಿಲೇಜ್' ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ರೆಸಾರ್ಟ್ ನಲ್ಲಿ ಗುಜರಾತಿನ ಶಾಸಕರಿಗೆ ವಾಂತಿ ಬೇಧಿ ರೆಸಾರ್ಟ್ ನಲ್ಲಿ ಗುಜರಾತಿನ ಶಾಸಕರಿಗೆ ವಾಂತಿ ಬೇಧಿ

ಡಿಕೆ ಶಿವಕುಮಾರ್, ಅವರ ಸಹೋದರ ಹಾಗೂ ಸಂಸದ ಡಿಕೆ ಸುರೇಶ್ ಹಾಗೂ ಅವರ ಆಪ್ತ ವಿಧಾನ ಪರಿಷತ್ ಸದಸ್ಯ ಎಸ್ ರವಿ ಮನೆ ಮೇಲೆ ಇಂದು ಬೆಳಿಗ್ಗೆ 7ಗಂಟೆಗೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಶಿವಕುಮಾರ್ ಗೆ ಸೇರಿದ ಕನಕಪುರ ಮತ್ತು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದರೆ, ಕನಕಪುರದಲ್ಲಿರುವ ಡಿ.ಕೆ ಸುರೇಶ್ ಮತ್ತು ರವಿ ನಿವಾಸದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಡಿಕೆಶಿ ಅವರ ಆಪ್ತ ಜ್ಯೋತಿಷಿ ದ್ವಾರಕಾನಾಥ್ ಅವರ ನಿವಾಸದ ಮೇಲೂ ಐಟಿ ದಾಳಿ ನಡೆದಿದೆ ಎಂಬ ಮಾಹಿತಿಯೂ ಲಭ್ಯವಾಗುತ್ತಿದೆ.

ಕರ್ನಾಟಕದ 'ಪವರ್' ಫುಲ್ ಸಚಿವ ಡಿಕೆ ಶಿವಕುಮಾರ್ ಪರಿಚಯಕರ್ನಾಟಕದ 'ಪವರ್' ಫುಲ್ ಸಚಿವ ಡಿಕೆ ಶಿವಕುಮಾರ್ ಪರಿಚಯ

 IT raid on DK Shivakumar's residence and ‘Eagleton’ resort

ರೆಸಾರ್ಟ್ ಮೇಲೆ ಸಿಆರ್'ಪಿಎಫ್ ಭದ್ರತೆಯೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ರೆಸಾರ್ಟ್ ನಿಂದ ಹೊರ ಹೋಗುವ ಪ್ರತಿ ವಾಹನಗಳನ್ನೂ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಉಳಿದುಕೊಂಡಿರುವ ಪ್ರತಿ ಕೋಣೆಯಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ರೆಸಾರ್ಟ್ ನಲ್ಲಿರುವ ಗುಜರಾತ್ ಕಾಂಗ್ರೆಸ್ ಶಾಸಕರ ಉಸ್ತುವಾರಿಯನ್ನು ಡಿಕೆ ಶಿವಕುಮಾರ್ ವಹಿಸಿದ್ದರು. ಈ ಹಿನ್ನಲೆಯಲ್ಲಿ ಅವರ ನಿವಾಸ ಮತ್ತು ರೆಸಾರ್ಟ್ ಎರಡೂ ಕಡೆಗಳಲ್ಲೂ ದಾಳಿ ನಡೆದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

English summary
Income Tax Department officials conduct raid at Karnataka energy minister DK Shivakumar's residence and ‘Eagleton- The Golf Village’ resort where Congress Gujarat MLAs are staying.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X