ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆಶಿ ದೆಹಲಿ ನಿವಾಸದ ಮೇಲೆ ಐಟಿ ದಾಳಿ ಪ್ರಕರಣ: ಇಂದು ತೀರ್ಪು

|
Google Oneindia Kannada News

Recommended Video

ಇಂದು ಡಿಕೆಶಿ ದೆಹಲಿ ನಿವಾಸದ ಮೇಲೆ ಐಟಿ ದಾಳಿ ಪ್ರಕರಣದ ತೀರ್ಪು | DK Shivkumar | Oneindia Kannada

ನವದೆಹಲಿ, ಆಗಸ್ಟ್ 28: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಆಗಸ್ಟ್ 28)ತೀರ್ಪು ಪ್ರಕಟವಾಗಲಿದೆ.

ದೆಹಲಿಯ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ವೇಳೆ ಐಟಿ ಅಧಿಕಾರಿಗಳು 8.59 ಕೋಟಿ ಹಣ ಜಪ್ತಿ ಮಾಡಿದ್ದರು. ಹಣ ಮೂಲದ ಬಗ್ಗೆ ವಿವರಣೆ ನೀಡುವಂತೆ ಡಿಕೆಶಿ ಮತ್ತು ಆಪ್ತರಿಗೆ ಇಡಿ ಸಮನ್ಸ್ ನೀಡಿತ್ತು. ಇಡಿ ನೋಟಿಸ್ ಪ್ರಶ್ನಿಸಿ ಡಿಕೆಶಿ ಹಾಗೂ ಅವರ ತಂಡ ಹೈಕೋರ್ಟ್ ಮೇಟ್ಟಿಲೇರಿತ್ತು.

ಫ್ಲಾಟ್‌ಗಳ ಮೇಲೆ ಐಟಿ ದಾಳಿ ಪ್ರಕರಣ: ಡಿಕೆಶಿಗೆ ಬಿಗ್ ರಿಲೀಫ್ಫ್ಲಾಟ್‌ಗಳ ಮೇಲೆ ಐಟಿ ದಾಳಿ ಪ್ರಕರಣ: ಡಿಕೆಶಿಗೆ ಬಿಗ್ ರಿಲೀಫ್

ದೆಹಲಿಯ 4 ಫ್ಲಾಟ್‍ಗಳ ಮೇಲೆ ಐಟಿ ಇಲಾಖೆ ದಾಳಿ ವೇಳೆ ಫ್ಲಾಟ್‍ಗಳಲ್ಲಿ 8.59 ಕೋಟಿ ರೂ. ಹಣ ಪತ್ತೆಯಾಗಿದ್ದ ಸಂದರ್ಭದಲ್ಲಿ ಸಿಕ್ಕ 41 ಲಕ್ಷ ರೂ. ನನ್ನದೆಂದು ಡಿಕೆಶಿ ಒಪ್ಪಿಕೊಂಡಿದ್ದರು. ಹೀಗಾಗಿ ಉಳಿದ 8.18 ಕೋಟಿ ರೂಪಾಯಿ ಮೂಲದ ಬಗ್ಗೆ ಐಟಿ ತನಿಖೆ ನಡೆಸುತ್ತಿತ್ತು. ಹೀಗಾಗಿ ಡಿಕೆ ಶಿವಕುಮಾರ್ ಆತಂಕಕ್ಕೊಳಗಾಗಿದ್ದಾರೆ.

vIT Raid On DKS Delhi House Case Judgement in High Court Today

ಈ ಸಂಬಂಧ ತನಿಖೆ ನಡೆಸುತ್ತಿದ್ದ ಇಡಿ ಮತ್ತು ಐಟಿ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ನೀಡಿತ್ತು. ಈ ಸಮನ್ಸ್ ರದ್ದು ಮಾಡುವಂತೆ ಡಿ.ಕೆ.ಶಿವಕುಮಾರ್ ಅವರು ಅರ್ಜಿ ಸಲ್ಲಿಸಿದ್ದರು.

ಇದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಿದ್ದು, ಫ್ಲ್ಯಾಟ್‌ಗಳಲ್ಲಿ ಸಿಕ್ಕ ಹಣದ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

English summary
IT Raid On DK Shivakumar Delhi House Case High court Judgement Will Come On August 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X