IT Raid: ಚುನಾವಣೆ ಹೊತ್ತಲ್ಲೇ ಜಮೀರ್ ಅಹ್ಮದ್ಗೆ ಶಾಕ್: ಆಪ್ತನ ಮನೆ ಮೇಲೆ IT ದಾಳಿ
ಬೆಂಗಳೂರು, ಮೇ 02: ಕರ್ನಾಟಕದಲ್ಲಿ 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನದಕ್ಕೆ ದಿನಗಣನೆ ಆರಂಭವಾಗಿದೆ. ಈ ಸಮಯದಲ್ಲೇ ಕಾಂಗ್ರೆಸ್ ನಾಯಕ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತನ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಜಮೀರ್ ಅಹ್ಮದ್ ಖಾನ್ ಆಪ್ತ ಹಾಗೂ ಮಾಜಿ ಎಂಎಲ್ಸಿ ಎಂ.ಸಿ ವೇಣುಗೋಪಾಲ್ ಅವರ ಬೆಂಗಳೂರಿನ ಜೆಪಿ ನಗರದ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು (ಮೇ 02) ಗುರುವಾರ ದಾಳಿ ಮಾಡಿದ್ದಾರೆ. ಇಂದು ಬೆಳಗ್ಗೆ 6:10 ನಿಮಿಷಕ್ಕೆ ಎಂ.ಸಿ ವೇಣುಗೋಪಾಲ್ ಅವರ ನಿವಾಸಕ್ಕೆ ತೆರಳಿರಯವ ಆದಾಯ ತೆರಿಗೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

15 ಅಧಿಕಾರಿಗಳು ಒಟ್ಟು 4 ಇನ್ನೊವಾ ಕಾರುಗಳಲ್ಲಿ ಬಂದಿದ್ದು ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.












Click it and Unblock the Notifications