IT Raid : ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಭಾಕರ ರೆಡ್ಡಿ ನಿವಾಸ, ಕಚೇರಿ ಮೇಲೆ ಐಟಿ ದಾಳಿ- ಮಾಹಿತಿ, ವಿಡಿಯೊ

ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಭಾಕರ ರೆಡ್ಡಿ ಅವರಿಗೆ ಸಂಬಂಧಿಸಿದ ನಿವಾಸ, ಕಚೇರಿ ಹಾಗೂ ಅಪಾರ್ಟ್‌ಮೆಂಟ್‌ ಸಮುಚ್ಚಯಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಇಲ್ಲಿದೆ ವಿಡಿಯೊ, ಮಾಹಿತಿ

ಬೆಂಗಳೂರು, ಫೆಬ್ರವರಿ 15: ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಭಾಕರ ರೆಡ್ಡಿ ಅವರಿಗೆ ಸಂಬಂಧಿಸಿದ ನಿವಾಸ, ಕಚೇರಿ ಹಾಗೂ ಅಪಾರ್ಟ್‌ಮೆಂಟ್‌ ಸಮುಚ್ಚಯಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಅವರ ನಿವಾಸದ ಮೇಲೆ 10 ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಪ್ರಭಾಕರ ರೆಡ್ಡಿ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಗಿದ್ದು, ರಿಯಲ್‌ ಎಸ್ಟೇಟ್‌, ಬಿಲ್ಡಿಂಗ್‌, ಫೈನಾನ್ಸ್‌ ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದಾರೆ. ಕರ್ನಾಟಕ ವಿಧಾನಸಭೆಗೆ ಜೆಡಿಎಸ್‌ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಪ್ರಭಾಕರ ರೆಡ್ಡಿ ಅವರ ಹೆಸರಿದೆ. ಅವರು ನೂರಾರು ಕೋಟಿ ಆಸ್ತಿಯನ್ನು ಹೊಂದಿದ್ದಾರೆಂದು ವರದಿಯಾಗಿದೆ.

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಜನತಾ ದಳ (ಜಾತ್ಯತೀತ) ಡಿಸೆಂಬರ್‌ನಲ್ಲೇ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್‌ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಇನ್ನೂ ಕಸರತ್ತು ನಡೆಸುತ್ತಲೇ ಇವೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕ್ಷೇತ್ರದ ಅಭ್ಯರ್ಥಿಗಳು ಪಕ್ಷಕ್ಕಾಗಿ ಕೆಲಸ ಮಾಡುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

IT Raid on JDS Bengaluru South candidate Prabhakar Reddys residence and office

ಅಭ್ಯರ್ಥಿಗಳು ಪಕ್ಷದ ಸೂಚನೆಯಂತೆ ಕೆಲಸ ಮಾಡದಿದ್ದರೆ ಅಥವಾ ಪಕ್ಷದ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಭ್ಯರ್ಥಿಗಳ ಹೆಸರನ್ನು ಬದಲಾಯಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪುತ್ರ ಸಿಎಂ ಫಯಾಜ್ ಅವರಿಗೂ ಹುಮನಾಬಾದ್‌ನಿಂದ ಟಿಕೆಟ್ ನೀಡಲಾಗಿದೆ. ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡರಿಗೂ ಟಿಕೆಟ್ ನೀಡಲಾಗಿದ್ದು, ಅವರು ಪಕ್ಷ ತೊರೆಯುತ್ತಾರೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಿದೆ. 224 ಸ್ಥಾನಗಳ ಕರ್ನಾಟಕ ವಿಧಾನಸಭೆಗೆ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದೆ.

IT Raid on JDS Bengaluru South candidate Prabhakar Reddys residence and office

2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ ಬಹುಮತದ ಕೊರತೆಯನ್ನು ಎದುರಿಸಿತು. ಕಾಂಗ್ರೆಸ್ 78 ಸ್ಥಾನಗಳನ್ನು ಗೆದ್ದರೆ, ಜೆಡಿಎಸ್ 37 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ, ಒಂದು ವರ್ಷದ ನಂತರ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಂಡಿತು ಮತ್ತು ಬಿಜೆಪಿ ಸರ್ಕಾರ ರಚಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+