ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಖಾಸಗಿ ಹೋಟೆಲ್‌ ಮೇಲೆ ಐಟಿ ದಾಳಿ, 2 ಕೋಟಿ ವಶಕ್ಕೆ

|
Google Oneindia Kannada News

ಬೆಂಗಳೂರು, ಮಾರ್ಚ್ 15 : ಬೆಂಗಳೂರಿನ ಖಾಸಗಿ ಹೋಟೆಲ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಹೋಟೆಲ್‌ನ ಕೊಠಡಿಯಲ್ಲಿ ಕೂಡಿಟ್ಟಿದ್ದ 2 ಕೋಟಿ ರೂ. ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಆನಂದ್ ರಾವ್ ವೃತ್ತದ ಬಳಿ ಇರುವ ರಾಜಮಹಲ್ ಹೋಟೆಲ್‌ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯನಿರ್ವಹಾಹಕ ಇಂಜಿನಿಯರ್ ನಾರಾಯಣಗೌಡ ಬಿ.ಪಾಟೀಲ್ ಅವರು ಹೋಟೆಲ್‌ನಲ್ಲಿ ಮೂರು ರೂಂ ಬುಕ್ ಮಾಡಿದ್ದರು.

ಮದುವೆ, ಹುಟ್ಟುಹಬ್ಬ ಆಯೋಜಿಸಲು ಆಯೋಗದ ಅನುಮತಿ ಬೇಕಿಲ್ಲಮದುವೆ, ಹುಟ್ಟುಹಬ್ಬ ಆಯೋಜಿಸಲು ಆಯೋಗದ ಅನುಮತಿ ಬೇಕಿಲ್ಲ

ಕೊಠಡಿ ಸಂಖ್ಯೆ 104, 105 ಮತ್ತು 115ರಲ್ಲಿ ಹಣ ಸಂಗ್ರಹಣೆ ಮಾಡಿರುವ ಖಚಿತ ಮಾಹಿತಿ ಅನ್ವಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ವೇಳೆ 500 ರೂ. ಮತ್ತು 2 ಸಾವಿರ ರೂ. ನೋಟುಗಳ 2 ಕೋಟಿ ಹಣವನ್ನು ಸಂಗ್ರಹ ಮಾಡಿರುವುದು ಬೆಳಕಿಗೆ ಬಂದಿದೆ.

ಚುನಾವಣಾ ಅಕ್ರಮ ವರದಿ : ಸಿ-ವಿಜಿಲ್ ಆಪ್ ಬಳಸುವುದು ಹೇಗೆ?ಚುನಾವಣಾ ಅಕ್ರಮ ವರದಿ : ಸಿ-ವಿಜಿಲ್ ಆಪ್ ಬಳಸುವುದು ಹೇಗೆ?

IT raid on Rajmahal hotel Anand Rao Junction Bengaluru

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹಣ ಸಂಗ್ರಹಣೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಐಟಿ ದಾಳಿ ಮಾಹಿತಿ ತಿಳಿಯುತ್ತಿದ್ದಂತೆ ನಾರಾಯಣಗೌಡ ಬಿ.ಪಾಟೀಲ್ ಪರಾರಿಯಾಗಿದ್ದಾರೆ.

ಲೋಕಸಭಾ ಚುನಾವಣೆ ಘೋಷಣೆ : ಮಾದರಿ ನೀತಿ ಸಂಹಿತೆ ಎಂದರೇನು?ಲೋಕಸಭಾ ಚುನಾವಣೆ ಘೋಷಣೆ : ಮಾದರಿ ನೀತಿ ಸಂಹಿತೆ ಎಂದರೇನು?

ನಾರಾಯಣಗೌಡ ಬಿ.ಪಾಟೀಲ್ ಅವರು ಹಾವೇರಿಯಲ್ಲಿ ಕಳೆದ ನಾಲ್ಕು ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಹಾವೇರಿಯಲ್ಲಿ ಅವರು ಮೂರು ಮನೆಯನ್ನು ಕಟ್ಟಿಸಿದ್ದಾರೆ.

ಹಾವೇರಿಯಿಂದ ಅವರು ಬೆಂಗಳೂರಿಗೆ ಹಣವನ್ನು ಸಾಗಾಣೆ ಮಾಡಿದ್ದಾರೆ ಎಂಬ ಮಾಹಿತಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸಿಕ್ಕಿತ್ತು. ಈ ಮಾಹಿತಿ ಅನ್ವಯ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

English summary
The Income Tax department conduct a search and seize the unaccounted money in Rajmahal hotel Seshadri Road Near Anand Rao Junction in Bengaluru. Money belongs to Narayana Gowda and he escaped from the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X