ಆರ್.ಎಲ್.ಜಾಲಪ್ಪ ಆಸ್ಪತ್ರೆ, ಶಿಕ್ಷಣ ಸಮೂಹದ ಮೇಲೆ ಐಟಿ ದಾಳಿ

ಬೆಂಗಳೂರು, ಅಕ್ಟೋಬರ್ 10: ಆರ್.ಎಲ್.ಜಾಲಪ್ಪ ಆಸ್ಪತ್ರೆ ಸಮೂಹದ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಜ್ಯದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಸಮೂಹವಾಗಿರುವ ಆರ್‌.ಎಲ್.ಜಾಲಪ್ಪ ಆಸ್ಪತ್ರೆಯ ಮೇಲೆ ದಾಳಿ ನಡೆದಿದ್ದು, ದಾಖಲೆ ಪರಿಶೀಲನೆ ನಡೆಯುತ್ತಿದೆ.

ಕೋಲಾರದ ಹೊರವಲಯದಲ್ಲಿರುವ ಆರ್.ಎಲ್.ಜಾಲಪ್ಪ ಆಸ್ಪತ್ರೆ, ಬೆಂಗಳೂರು ನಗರದಲ್ಲಿನ ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆ ಮೇಲೆ ದಾಳಿ ನಡೆದಿದೆ. ಆರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆಗಳೂ ಸಾಕಷ್ಟಿದ್ದು ಅದರ ಮೇಲೂ ದಾಳಿ ನಡೆದಿರುವ ಮಾಹಿತಿ ಇದೆ.

IT Raid On RL Jalappa Medical College And Hospital

ದೊಡ್ಡಬಳ್ಳಾಪುರದಲ್ಲಿನ ಆರ್‌.ಎಲ್.ಜಾಲಪ್ಪ ಅವರ ಮಗ ರಾಜೇಂದ್ರ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ಆರ್.ಎಲ್.ಜಾಲಪ್ಪ ಅವರು ಕಾಂಗ್ರೆಸ್‌ನ ಮುಖಂಡರಾಗಿದ್ದು, ಅವರ ಮಕ್ಕಳು ಸಹ ಕಾಂಗ್ರೆಸ್‌ನ ಮುಂಚೂಣಿ ನಾಯಕರಾಗಿದ್ದಾರೆ.

ಇದೇ ದಿನ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಮೂಹದ ಮೇಲೂ ದಾಳಿ ನಡೆದಿದೆ. ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮಾಜಿ ಡಿಸಿಎಂ ಪರಮೇಶ್ವರ್ ಅವರ ಒಡೆತನದ್ದಾಗಿದ್ದು, ಪರಮೇಶ್ವರ್ ಅವರ ನಿವಾಸದ ಮೇಲೆಯೂ ದಾಳಿ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+