ಸಿಎಂ ಅವರ ಆಪ್ತ ಅಧಿಕಾರಿ ಮನೆ, ಕಚೇರಿ ಮೇಲೆ ಐಟಿ ದಾಳಿ!

ಬೆಂಗಳೂರಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ನಾಲ್ಕು ಕಡೆಗಳಲ್ಲಿ ದಾಳಿ, ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಎನ್ನಲಾದ ಐಎಎಸ್ ಅಧಿಕಾರಿ, ಬ್ಯಾಂಕ್ ಮ್ಯಾನೇಜರ್ ಹಾಗೂ ಸರ್ಕಾರಿ ಮನೆ, ಅಧಿಕಾರಿ ಕಚೇರಿಗಳ ಮೇಲೆ ಐಟಿ ದಾಳಿ

ಬೆಂಗಳೂರು, ನವೆಂಬರ್ 30: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಅಧಿಕಾರಿ, ಬ್ಯಾಂಕ್ ಮ್ಯಾನೇಜರ್ ಹಾಗೂ ಸರ್ಕಾರಿ ಉದ್ಯೋಗಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಇವರ ಪೈಕಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಇದ್ದಾರೆ ಎಂಬುದು ಗಮನಾರ್ಹ.

ಸಂಜಯ್ ನಗರದಲ್ಲಿರುವ ಅಧಿಕಾರಿಯೊಬ್ಬರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬ್ಯಾಂಕಿನ ಮ್ಯಾನೇಜರ್ ಹಾಗೂ ಕಾವೇರಿ ಬೋರ್ಡ್ ನ ಮುಖ್ಯ ಇಂಜಿನಿಯರ್ ಅವರ ಕಚೇರಿ ಮೇಲೆ ದಾಳಿ ನಡೆದಿದೆ.

IT raids across Bengaluru, IAS officer, bank manager, CM's aide raided

ಸರ್ಕಾರಿ ಅಧಿಕಾರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರು ಎಂಬುದು ಗುಟ್ಟಾದ ವಿಷಯವೇನಲ್ಲ. ಬಾಣಸವಾಡಿಯಲ್ಲಿರುವ ಅಧಿಕಾರಿ ಅವರ ಮನೆ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಅಘೋಷಿತ ಹಣ ಹೊಂದಿರುವ ಆರೋಪ ಹೊತ್ತಿರುವ ಬ್ಯಾಂಕ್ ಮ್ಯಾನೇಜರ್ ಮನೆ ಹಾಗೂ ಅಕ್ರಮ ಆಸ್ತಿ ಗಳಿಕೆ ಆರೋಪ ಹೊತ್ತಿರುವ ಅಧಿಕಾರಿ ಅವರ ಮನೆ ಮೇಲೆ ದಾಳಿ ನಡೆಸಿ ಹಲವಾರು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+