ವಿಜಯ್ ಮುಳಗುಂದ ಸೇರಿ 10 ಕಡೆಗಳಲ್ಲಿ ಡಿಕೆಶಿ ಆಪ್ತರ ಮೇಲೆ ಐಟಿ ದಾಳಿ
Recommended Video

ಬೆಂಗಳೂರು, ಆಗಸ್ಟ್ 30: ಇಂಧನ ಸಚಿವ ಡಿಕೆ ಶಿವಕುಮಾರ್ ಆಪ್ತ ವಿಜಯ್ ಮುಳಗುಂದ ಮನೆ ಮೇಲೆ ಇಂದು ಬೆಳಿಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸುಬ್ರಹ್ಮಣ್ಯನಗರ ಹಾಗೂ ರಾಜಾಜಿನಗರದಲ್ಲಿರುವ ವಿಜಯ್ ಮುಳಗುಂದ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯ್ ಮುಳಗುಂದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ವಿಲಾಸ್ ರಾವ್ ದೇಶ್ ಮುಖ್ ಅವರಿಗೂ ಆಪ್ತರಾಗಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ರೆಸಾರ್ಟ್ ರಾಜಕಾರಣಕ್ಕೆ ಬಂದಾಗಿ ಡಿಕೆ ಶಿವಕುಮಾರ್ ಅವರಿಗೆ ವಿಜಯ್ ಮುಳಗುಂದ ಪರಿಚಯವಾಗಿದ್ದರು.

ಇದಾದ ನಂತರ ವಿಜಯ್ ಮುಳಗುಂದ ಡಿಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆಗಸ್ಟ್ 3ರಂದು ಡಿಕೆ ಶಿವಕುಮಾರ್, ಅವರ ಕುಟುಂಬಸ್ಥರು ಮತ್ತು ಆಪ್ತರ ಮೇಲೆ ಐಟಿ ದಾಳಿ ನಡೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಇದೀಗ ಮತ್ತೋರ್ವ ಆಪ್ತ ವಿಜಯ್ ಮುಳಗುಂದ ಮನೆ ಸೇರಿದಂತೆ ಹಲವು ಆಪ್ತರ ಮನೆಗಳ ಮೇಲೆ ದಾಳಿ ನಡೆದಿದೆ.
ವಿಜಯ್ ಮುಳಗುಂದ ಮನೆ ಮೇಲೆ ದಾಳಿ ಸೇರಿದಂತೆ ಡಿಕೆ ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಒಟ್ಟು 10 ಕಡೆಗಳಲ್ಲಿ ದಾಳಿ ನಡೆದಿದೆ. ಬೆಂಗಳೂರಿನ ಜಯನಗರದಲ್ಲಿರುವ ಡಿಕೆಶಿ ಆಪ್ತ ಕಾರ್ಯದರ್ಶಿ ಬಿಎಸ್ ಶ್ರೀಧರ್ ಮನೆ, ದೆಹಲಿ ಮತ್ತು ಚೆನ್ನೈನಲ್ಲಿರುವ ಆಪ್ತರ ಕಚೇರಿ ಮತ್ತು ಮನೆಗಳ ಮೇಲೆಯೂ ದಾಳಿ ನಡೆದಿದೆ.
Karnataka: IT raid at residence of Congress leader Vijay Mulgund in Bengaluru pic.twitter.com/hwqC5EukNj
— ANI (@ANI) August 30, 2017
ಮಾಹಿತಿ ಪಡೆದುಕೊಂಡ ಸಿಎಂ
ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಐಟಿ ದಾಳಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications