ಇತರ ನಗರಗಳಿಗೂ ಐಟಿ-ಬಿಟಿ ಉದ್ಯಮ ವಿಸ್ತರಣೆ
ಬೆಂಗಳೂರು, ಜ.8 : ಕರ್ನಾಟಕದ ಇತರ ನಗರಗಳಿಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರವನ್ನು ವಿಸ್ತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜಧಾನಿ ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿ ಉದ್ಯಮ ಆರಂಭಿಸುವವರಿಗೆ ವಿಶೇಷ ಸೌಲಭ್ಯ ನೀಡಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿ ಸಚಿವ ಎಸ್.ಆರ್.ಪಾಟೀಲ್, ರಾಜ್ಯದ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಐಟಿ-ಬಿಟಿ ಕಂಪನಿಗಳನ್ನು ಸ್ಥಾಪಿಸುವ ಮೂಲಕ ರಾಜಧಾನಿ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು. ಬೆಂಗಳೂರು ಹೊತರು ಪಡಿಸಿ ಇತರೆ ನಗರ ಮತ್ತು ಪಟ್ಟಣಗಳಲ್ಲಿ ಕಂಪನಿಗಳನ್ನು ಆರಂಭಿಸುವವರಿಗೆ ವಿಶೇಷ ಸೌಲಭ್ಯ ನೀಡಲಾಗುವುದು ಎಂದರು. [ಐಟಿ ಕ್ರಾಂತಿ ಇತರ ನಗರ ತಲುಪಬೇಕು]

ಹೊಸ ಐಟಿ ನೀತಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದು, ಇದರ ಮೂಲಕ ಎರಡನೇ ಮತ್ತು ಮೂರನೇ ಹಂತದ ನಗರಗಳಿಗೆ ಆದ್ಯತೆ ನೀಡಲಾಗುತ್ತದೆ. ಹೊಸ ನೀತಿಯಂತೆ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಲಾಗುವುದು. ಅದರಂತೆ ಐಟಿ-ಬಿಟಿ ಕಂಪನಿಗಳನ್ನು ಸ್ಥಾಪಿಸುವುದು, ಜಮೀನು ನೀಡಿಕೆ ಮುಂತಾದ ವಿಚಾರಗಳ ಕುರಿತಾಗಿ ತ್ವರಿತವಾಗಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. [ಗ್ರಾಮ ಪಂಚಾಯಿತಿಗೆ ಬರುತ್ತೆ ವೈಫೈ]
ಬೆಳಗಾವಿಯಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ಸ್ಥಾಪಿಸುವ ಕಾರ್ಯವನ್ನು ತ್ವರಿತಗೊಳಿಸಲಾಗುವುದು. ಇದರ ಜತೆಗೆ ಇತರೆ ನಗರಗಳಲ್ಲಿ ಕಂಪನಿಗಳನ್ನು ಆರಂಭಿಸುವವರಿಗೆ ವಿಶೇಷ ಪ್ರೋತ್ಸಾಹ ನೀಡಲಾಗುವುದು. ಅಲ್ಲದೆ, ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ಮಾಹಿತಿ ತಂತ್ರಜ್ಞಾನ ಬಂಡವಾಳ ವಲಯ ಸ್ಥಾಪಿಸಲಾಗುವುದು ಎಂದು ಹೇಳಿದರು.
ಐಟಿ-ಬಿಟಿ ವಲಯ ಬೆಂಗಳೂರಿಗೆ ಮಾತ್ರ ಸೀಮಿತವಾಗಿದೆ. ಆದ್ದರಿಂದ ಜನದಟ್ಟಣೆ, ವಾಹನ ದಟ್ಟಣೆ ಹೆಚ್ಚಾಗಿದೆ. ಮಾತ್ರವಲ್ಲ, ಮನೆ ಬಾಡಿಗೆಯೂ ದುಬಾರಿಯಾಗಿದೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದ್ದು, ಇತರ ನಗರಗಳಿಗೂ ಉದ್ಯಮ ವಿಸ್ತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈಗಾಗಲೇ ಕೆಲವು ಕಂಪನಿಗಳು ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ಬೆಳಗಾವಿ, ಮಂಗಳೂರಿನಲ್ಲಿ ಕಂಪನಿಗಳನ್ನು ಆರಂಭಿಸಲು ಉತ್ಸಾಹ ತೋರಿವೆ. ಹುಬ್ಬಳ್ಳಿಯಲ್ಲಿ ಐಟಿ ಕಂಪನಿಗಳ ಸ್ಥಾಪನೆಗಾಗಿ 50 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಇನ್ಫೋಸಿಸ್ ಈ ಜಾಗದಲ್ಲಿ ಕಂಪನಿ ಆರಂಭಿಸಲು ಮುಂದಾಗಿದ್ದು, ಇದರಿಂದ 10 ಸಾವಿರ ಉದ್ಯೋಗ ದೊರೆಯಲಿದೆ ಎಂದು ಹೇಳಿದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications