ಕೋವಿಡ್ ಕೇಂದ್ರವಾಗಿ ಐಟಿಐ ಆಸ್ಪತ್ರೆ ಪರಿವರ್ತನೆ: ಸದಾನಂದ ಗೌಡ
ಬೆಂಗಳೂರು, ಮೇ 10: ಕೆ. ಆರ್. ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸರ್ಕಾರಿ (ಕೇಂದ್ರ) ಸ್ವಾಮ್ಯದ ಐಟಿಐ ಆಸ್ಪತ್ರೆಯನ್ನು ರಾಜ್ಯ ಸರ್ಕಾರದ ಸಹಕಾರದೊಂದಿಗೆ ಪುನಶ್ಚೇತನಗೊಳಿಸಿ ತಾತ್ಕಾಲಿಕವಾಗಿ ಕೋವಿಡ್ ಕೇಂದ್ರವಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದರು.
ಪತ್ರಿಕಾ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿದ ಸಚಿವರು ತಾವು ಈಗಾಗಲೇ ಸಂಬಂಧಪಟ್ಟ ಸಚಿವರಿಗೆ (ರವಿಶಂಕರ್ ಪ್ರಸಾದ್) ಈ ಬಗ್ಗೆ ಪತ್ರ ಬರೆದಿದ್ದು ಅಗತ್ಯ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು.
ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರುವ ಆಸ್ಪತ್ರೆಗಳು ಸಾಲುತ್ತಿಲ್ಲ. ಹೆಚ್ಚೆಚ್ಚು ತಾತ್ಕಾಲಿಕ ಕೋವಿಡ್ ಕೇಂದ್ರಗಳನ್ನು ಕಲ್ಪಿಸುವುದು ಅನಿವಾರ್ಯವಾಗಿದೆ. ಕೆ ಆರ್ ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಐಟಿಐ ಆಸ್ಪತ್ರೆಯು ವಿಸ್ತಾರವಾದ ಸ್ಥಳಾವಕಾಶ ಹೊಂದಿದೆ. ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ ಅವರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ. ಸ್ಥಳೀಯ ಶಾಸಕರೂ ಆಗಿರುವ ಅವರು ಈ ಬಗ್ಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಆಕ್ಸಿಜಿನೇಟೆಡ್ ಹಾಸಿಗೆಗಳು, ತೀವ್ರ ನಿಗಾ ಘಟಕ ಸೇರಿದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಎಲ್ಲ ಶುಶ್ರೂಸಾ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.

ಸ್ಯಾನಿಟೈಸೇಶನ್: ಈ ಮಧ್ಯೆ ಸಚಿವರು ಇಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ರೋಗನಿರೋಧಕ ದ್ರಾವಣ ಸಿಂಪರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಜೆಪಿ ಹೆಬ್ಬಾಳ ಮಂಡಲವು ಸದಾಸ್ಮಿತ ಪ್ರತಿಷ್ಠಾನ (ಡಿವಿಎಸ್ ಪೋಷಿತ) ಮತ್ತು ವೈಏಎನ್ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಈ ಕಾರ್ಯಕ್ರಮ ಕೈಗೊಂಡಿದೆ.
ಕೋವಿಡ್ ಕಿಟ್: ಅದೇ ರೀತಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ 20 ಸಾವಿರ ಕೋವಿಡ್ ಔಷಧ ಕಿಟ್'ಗಳನ್ನು ವಿತರಿಸುವ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು. ಇದರಲ್ಲಿ ಕೋವಿಡ್ ಚಿಕಿತ್ಸೆಗೆ ಬಳಸುವ ಸಾಮಾನ್ಯ ಮಾತ್ರೆಗಳು, ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವ ವಿಟಾಮಿನ್ ಮಾತ್ರಗಳು, ನಾಲ್ಕು ಎನ್-95 ಮಾಸ್ಕುಗಳು, ಸ್ಯಾನಿಟೈಸರ್‌ಗಳು ಇರಲಿದ್ದು ಗೃಹಶುಶ್ರೂಷೆಯಲ್ಲಿ ಇರುವ ಕೋವಿಡ್ ಸೋಂಕಿತರು ಇದನ್ನು ಬಳಸಬಹುದಾಗಿದೆ.

Recommended Video
ಈ ಸಂದರ್ಭದಲ್ಲಿ ಮಾತನಾಡಿದ ಸದಾನಂದ ಗೌಡ - ಮೊದಲ ಹಂತದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ 10 ಸಾವಿರ ಬಡವರಿಗೆ ಈ ಕೋವಿಡ್ ಕಿಟ್'ಗಳನ್ನು ವಿತರಿಸಲಾಗುವುದು. ಎರಡನೇ ಹಂತದಲ್ಲಿಯೂ 10 ಸಾವಿರ ಕಿಟ್'ಗಳನ್ನುವಿತರಿಸಲಾಗುವುದು. ನಿಜಕ್ಕೂ ನೆರವಿನ ಅವಶ್ಯಕತೆ ಇರುವವರು ಇದರ ಲಾಭ ಪಡೆಯಬೇಕು ಎಂದರು. ವಿಧಾನ ಪರಿಷತ್ ಸದಸ್ಯ ಡಾ ವೈ ಎನ್ ನಾರಾಯಣಸ್ವಾಮಿ, ಜಿಲ್ಲಾಧ್ಯಕ್ಷ ಬಿ ನರಾಯಣ, ಮಂಡಲಾಧ್ಯಕ್ಷ ರಿಷಿಕುಮಾರ್ ಪಟೇಲ್, ಬಿಜೆಪಿ ವಾರ್ಡ್ ಅಧ್ಯಕ್ಷರುಗಳು, ಮಾಜಿ ಬಿಬಿಎಂಪಿ ಸದಸ್ಯರು, ಪಕ್ಷದ ಪ್ರಮುಖರು, ಯುವಮೊರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications