• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಗಳೂರಿನ ಹಿಂಸಾಚಾರಕ್ಕೆ ಯು.ಟಿ. ಖಾದರ್ ನೇರ ಹೊಣೆ: ಶೆಟ್ಟರ್

|

ಬೆಂಗಳೂರು ಡಿಸೆಂಬರ್‌ 22: ಪೌರತ್ವ ಕಾಯ್ದೆ ವಿಚಾರವಾಗಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ನೇರ ಹೊಣೆ ಯು.ಟಿ. ಖಾದರ್ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ್‌ ಆರೋಪಿಸಿದರು.

ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

ಇಂದು ಉದ್ಯೋಗ ಮಿತ್ರ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೌರತ್ವ ಕಾಯ್ದೆ ಅನುಷ್ಠಾನವಾದರೆ ಮಂಗಳೂರಿನಲ್ಲಿ ಹಿಂಸಾಚಾರ ನಯಲಿದೆ ಎಂದು ಖಾದರ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದಲೇ ಅಲ್ಲಿನ ಜನರು ಹಿಂಸಾತ್ಮಕ ಕೃತ್ಯ ನಡೆಸಿ ಗಲಭೆ ನಡೆಸಲು ಪ್ರೇರೇಪಣೆಗೊಂಡರು. ಈ ರೀತಿ ಹೇಳಿಕೆ ನೀಡದೇ ಇರುವ ಬೇರೆ ಜಿಲ್ಲೆಗಳಲ್ಲಿ ಇಷ್ಟು ಪ್ರಮಾಣದಲ್ಲಿ ಗಲಭೆ ನಡೆದಿಲ್ಲ. ಮಂಗಳೂರಿನಲ್ಲಿ ಇಬ್ಬರು ಅಮಾಯಕರ ಸಾವಿಗೆ ಖಾದರ್‌ ಅವರೇ ನೇರ ಹೊಣೆ ಎಂದರು.

ಪ್ರಚೋದನಕಾರಿ ಹೇಳಿಕೆ: ಯುಟಿ ಖಾದರ್ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರಿನಲ್ಲಿನ ವಾತಾವರಣ ಸಂಪೂರ್ಣ ಪ್ರಕ್ಷ್ಯುಬ್ಧವಾಗಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಅಲ್ಲಿಗೆ ತೆರಳಿದರೆ ವಾತಾವರಣ ಇನ್ನಷ್ಟು ಹಾಳಾಗುತ್ತದೆ. ಈ ದೃಷ್ಟಿಯಿಂದ ಅವರು ಮಂಗಳೂರಿಗೆ ತೆರಳಲು ಪೊಲೀಸರು ಅವಕಾಶ ನೀಡಿಲ್ಲ. ಪ್ರತಿಪಕ್ಷ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಇದನ್ನು ಅವರು ತಿಳಿದುಕೊಳ್ಳಲಿ ಎಂದರು

''ಪೌರತ್ವ ಕಾನೂನು ದೇಶದಲ್ಲಿನ ಜನರನ್ನು ಹೊರಗೆ ಹಾಕುವುದಲ್ಲ. ಹೊರಗಿನಿಂದ ಬಂದವರಿಗೆ ಪೌರತ್ವ ಕೊಡುವ ಉದ್ದೇಶಕ್ಕೆ ಈ ಕಾನೂನು ತರಲಾಗಿದೆ. ಆದರೆ ಕಾಂಗ್ರೆಸ್‌ನವರು ಈ ಕಾಯಿದೆ ಬಗ್ಗೆ ಅಪಪ್ರಚಾರ ಮಾಡಿ ಜನರನ್ನು ಆತಂಕಕ್ಕೆ ಒಳಗಾಗುವಂತೆ ಮಾಡುತ್ತಿದ್ದಾರೆ" ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಹೆಸರಿನ ಬದಲು ಭಯೋತ್ಪಾದಕ ಪಕ್ಷ ಅಂತ ಇರಬೇಕಿತ್ತು:ರೇಣುಕಾಚಾರ್ಯ

ಇನ್ನು, ಮಹದಾಯಿ ವಿವಾದ ಬಗೆ ಹರಿಸಲು,ಗೋವಾ ಮತ್ತು ಮಹಾರಾಷ್ಟ್ರ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ಸಂಧಾನಸಭೆ ನಡೆಸಲು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಆಸಕ್ತಿ ತೋರಿಸಿದ್ದಾರೆ. ಅದಕ್ಕೆ ಶೀಘ್ರದಲ್ಲೇ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದಾರೆ. ಮಹದಾಯಿ ವಿಚಾರವಾಗಿ ಈಗಾಗಲೇ ನೀಡಿರುವ ತೀರ್ಪಿನನ್ವಯ ಅದನ್ನು ಅನುಷ್ಠಾನ ಮಾಡಲಾಗುವುದು ಎಂದರು.

English summary
Jagadish Shettar alleges UT Khader is responsible for Mangaluru riot during the protest against Citizenship Amendment Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X