• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking News: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲ್ಲ ಎಂದ ಶೆಟ್ಟರ್!

|
Google Oneindia Kannada News

ಬೆಂಗಳೂರು, ಜುಲೈ 28: ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಿ ಕೆಲಸ ಮಾಡುವುದಕ್ಕೆ ಇಚ್ಛಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸುವುದಕ್ಕಾಗಿ ರಾಜ್ಯಾದ್ಯಂತ ಸುತ್ತಿದ್ದೇವೆ. ವರಿಷ್ಠರು ಹೆಚ್ಚಿನ ಜವಾಬ್ದಾರಿಯನ್ನು ನೀಡಿದರೆ ನಿರ್ವಹಿಸುವುದಕ್ಕೆ ನಾನು ಸಿದ್ಧನಿದ್ದೇನೆ. ಆದರೆ ಸಚಿವನಾಗಲು ಬಯಸುವುದಿಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಶೆಟ್ಟರ್ ಉತ್ತರಿಸಿದ್ದಾರೆ.

"ಬಿ ಎಸ್ ಯಡಿಯೂರಪ್ಪ ತಮಗಿಂತ ಹಿರಿಯ ನಾಯಕರು ಎಂಬ ಕಾರಣಕ್ಕಾಗಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನಾನು ಸಚಿವರಾಗಿ ಸಂಪುಟದಲ್ಲಿ ಕಾರ್ಯ ನಿರ್ವಹಿಸಿದ್ದೇವೆ. ಆದರೆ ಈ ಹಂತದಲ್ಲಿ ನಾನು ಸಂಪುಟ ಸೇರಲು ಇಚ್ಛಿಸುವುದಿಲ್ಲ. ಅದರ ಬದಲಿಗೆ ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಿದ್ಧನಿದ್ದೇನೆ," ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಆಡಿಯೋಗೂ ನನ್ನ ನಿರ್ಧಾರಕ್ಕೂ ಸಂಬಂಧವಿಲ್ಲ:

ಕರ್ನಾಟಕದಲ್ಲಿ ಮುಂದೆ ರಚನೆಯಾಗಲಿರುವ ಸಂಪುಟದಲ್ಲಿ ಸಚಿವನಾಗಿ ಕಾರ್ಯ ನಿರ್ವಹಿಸುವುದಿಲ್ಲ ಎಂಬುದರ ಬಗ್ಗೆ ಈಗಾಗಲೇ ಬಿ ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿಗೆ ತಿಳಿಸಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋಗೂ ನನ್ನ ನಿರ್ಧಾರಕ್ಕೂ ಯಾವುದೇ ಸಂಬಂಧವಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರವಾಗಿದೆ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ 20ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ:

   ಬೊಮ್ಮಾಯಿ ಹಿಂದೆ ಗಿರಕಿ ಹೊಡಿಯುತ್ತಿರುವ ವಲಸಿಗರು! | Oneindia Kannada
   ಜಗದೀಶ್ ಶೆಟ್ಟರ್
   Know all about
   ಜಗದೀಶ್ ಶೆಟ್ಟರ್

   ಬಿ ಎಸ್ ಯಡಿಯೂರಪ್ಪ ನಂತರ ಉತ್ತರಾಧಿಕಾರಿಯಾಗಿ ಬಸವರಾಜ ಬೊಮ್ಮಾಯಿ ಪಟ್ಟಕ್ಕೇರಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಸವರಾಜ ಬೊಮ್ಮಾಯಿರನ್ನು ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಹ್ವಾನಿಸಿದ ಹಿನ್ನೆಲೆ ಕರ್ನಾಟಕ ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

   English summary
   I will not join Basavaraj Bommai cabinet, will continue in party work says Jagadish Shettar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X