ನಿರ್ಭಯ ಕೇಸ್: ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್
''ಆ ಪಾಪಿಗಳ ನೇಣಿಗೇರಿಸಿದರೆ, ನಾನು ಕಲೆಯಿಂದ ದುಡಿದ 1 ಲಕ್ಷ ರೂಪಾಯಿಯನ್ನು ನಿಮಗೆ ದೇಣಿಗೆಯಾಗಿ ನೀಡುವೆ'' - ಹೀಗೆಂದು ಮೂರು ತಿಂಗಳ ಹಿಂದೆಯಷ್ಟೇ ನಟ ಜಗ್ಗೇಶ್ ಹೇಳಿದ್ದರು.
ಇಂದು (ಮಾರ್ಚ್ 20) ಬೆಳಗ್ಗೆ 5.30ಕ್ಕೆ ನಿರ್ಭಯ ಅತ್ಯಾಚಾರಿಗಳನ್ನು ಗಲ್ಲಿಗೇರಿಸಲಾಗಿದೆ. ಪ್ರಕರಣದ ಅಪರಾಧಿಗಳಾದ ಮುಕೇಶ್ ಸಿಂಗ್, ಪವನ್ ಗುಪ್ತಾ, ವಿನಯ್ ಕುಮಾರ್ ಶರ್ಮಾ ಮತ್ತು ಅಕ್ಷಯ್ ಕುಮಾರ್ ನನ್ನು ನೇಣಿಗೇರಿಸಲಾಯಿತು.
ನಿರ್ಭಯ ಪ್ರಕರಣದ ಅಪರಾಧಿಗಳನ್ನು ಗಲ್ಲುಗಂಬಕ್ಕೇರಿಸಿದ ಹ್ಯಾಂಗ್ ಮ್ಯಾನ್ ಉತ್ತರ ಪ್ರದೇಶ ಮೀರತ್ ಮೂಲದ ಪವನ್ ಜಲ್ಲಾದ್ ಗೆ ಬಿಜೆಪಿ ಮುಖಂಡ, ಕನ್ನಡ ಚಲನಚಿತ್ರ ನಟ, ನವರಸ ನಾಯಕ ಜಗ್ಗೇಶ್ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
|
ಇಂದು ಟ್ವೀಟ್ ಮಾಡಿದ್ದಾರೆ ಜಗ್ಗೇಶ್
''ಕೊಟ್ಟ ಮಾತಿನಂತೆ 1 ಲಕ್ಷ ರೂಪಾಯಿ ನಿರ್ಭಯ ಹಂತಕರ ಹ್ಯಾಂಗ್ ಮ್ಯಾನ್ ಗೆ ನನ್ನ ದೇಣಿಗೆ. ದೇವನೊಬ್ಬನಿರುವ ಅವ ಎಲ್ಲ ನೋಡುತ್ತಿರುವ! ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ! ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ! ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ! ಸುದ್ಧಿಕೇಳಲು ನಿದ್ರೆಮಾಡದೆ ಕಾದೆ!'' ಎಂದು ಜಗ್ಗೇಶ್ ಇವತ್ತು ಟ್ವೀಟ್ ಮಾಡಿದ್ದಾರೆ.

ಹ್ಯಾಂಗ್ ಮ್ಯಾನ್ ಗೆ ಜಗ್ಗೇಶ್ ನೆರವು
ಬಡತನದಲ್ಲಿ ಬೆಳೆದಿರುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್ ಗೆ ಜಗ್ಗೇಶ್ ಸಹಾಯ ಹಸ್ತ ಚಾಚಿದ್ದಾರೆ. ''ಅಪರಾಧಿಗಳನ್ನು ಗಲ್ಲಿಗೇರಿಸುವುದರಿಂದ ಸಿಗುವ ದುಡ್ಡಲ್ಲಿ ಮಗಳ ಮದುವೆ ಮಾಡುತ್ತೇನೆ'' ಎಂದು ಈ ಹಿಂದೆ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್ ಹೇಳಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ, ಪವನ್ ಜಲ್ಲಾದ್ ನೆರವಿಗೆ ಜಗ್ಗೇಶ್ ಧಾವಿಸಿದ್ದರು.

ಅಂದು ಟ್ವೀಟ್ ಮಾಡಿದ್ದ ಜಗ್ಗೇಶ್
''ಮಾನ್ಯರೇ ರಾಕ್ಷಸರ ಸಂಹಾರ ದೇವರ ನಿಯಮ! ಆ ಕಾರ್ಯದಿಂದ ಬರುವ ಹಣದಲ್ಲಿ ಮಗಳ ಮದುವೆ ಮಾಡುವೆ ಎಂದ ನಿಮ್ಮ ಅನಿಸಿಕೆ ಕೇಳಿ ಭಾವುಕನಾದೆ. ನೀವೆ ಆ ಪಾಪಿಗಳ ನೇಣಿಗೇರಿಸಿದರೆ, ನಾನು ಕಲೆಯಿಂದ ದುಡಿದ 1ಲಕ್ಷ ರೂ, ನಿಮಗೆ ದೇಣಿಗೆಯಾಗಿ ನಿಮ್ಮ ಮಗಳ ಮದುವೆಗೆ ನೀಡುವೆ. ಇಂದೆ ಆ ಹಣ ನಿಮಗಾಗಿ ಮೀಸಲಿಟ್ಟೆ. ಇದು ದುರುಳ ನಿಗ್ರಹ ದೇವರ ಸೇವೆ. ಹರಿಓಂ. ಎಂದು'' ಮೂರು ತಿಂಗಳ ಹಿಂದೆ ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದರು. ಕೊಟ್ಟ ಮಾತಿನಂತೆ ಇವತ್ತು ಜಗ್ಗೇಶ್ ನಡೆದುಕೊಂಡಿದ್ದಾರೆ.

ಹ್ಯಾಂಗ್ ಮ್ಯಾನ್ ಗೆ ಸಂಭಾವನೆ
ಒಬ್ಬ ಅಪರಾಧಿಗೆ 20 ಸಾವಿರ ರೂಪಾಯಿಯಂತೆ ನಾಲ್ವರು ಅಪರಾಧಿಗಳನ್ನು ಹ್ಯಾಂಗ್ ಮಾಡಿದ್ದಕ್ಕೆ ಸಂಭಾವನೆಯಾಗಿ ಪವನ್ ಜಲ್ಲಾದ್ ಗೆ 80 ಸಾವಿರ ರೂಪಾಯಿ ಸಿಗಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications