ಬೆಂಗಳೂರು: ಜೈ ಶ್ರೀರಾಮ್ ಅನ್ನಂಗಿಲ್ಲ; ಅಲ್ಲಾ ಹು ಅಕ್ಬರ್ ಹೇಳಬೇಕು ಎಂದ ಪುಂಡರು: ಎಫ್‌ಐಆರ್ ದಾಖಲು
ಶ್ರೀರಾಮ ನವಮಿ ಘೋಷಣೆ ದಿನ ರಸ್ತೆಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಕಾರು ಅಡ್ಡಗಟ್ಟಿದ ಪುಂಡರು ಗಲಾಟೆ ಮಾಡಿದ್ದು, ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಕಾರಿನಲ್ಲಿ ಹೋಗುವಾಗ ಜೈಶ್ರೀರಾಮ್ ಘೋಷಣೆ ಕೂಗುತ್ತಿದ್ದವರನ್ನು ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ಅಡ್ಡಗಟ್ಟಿದ ಮುಸ್ಲಿಂ ಯುವಕರು ಜೈಶ್ರೀರಾಮ್ ಹೇಳಬಾರದು, ಅಲ್ಲಾ ಹು ಅಕ್ಬರ್ ಹೇಳಬೇಕು ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತಮ್ಮ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಕಾರಿನಲ್ಲಿದ್ದ ಯುವಕರು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಅಡ್ಡಗಟ್ಟಿ ಪುಂಡರಿಂದ ಗಲಾಟೆ. ಜೈಶ್ರೀರಾಮ್ ಹೇಳಬಾರದು, ಅಲ್ಲಾ ಹು ಅಕ್ಬರ್ ಹೇಳಬೇಕು ಎಂದು ಒತ್ತಾಯ. ತಮ್ಮ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಕಾರಿನಲ್ಲಿದ್ದ ಯುವಕರು ದೂರು ನೀಡಿದ್ದಾರೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್‌ಐಆರ್ ದಾಖಲಾಗಿದೆ. #Bengaluru #JaiSreeRam pic.twitter.com/ntiDntksOp
— Shashi Shekara 🇮🇳 (@shashi_shekara) April 17, 2024
ವಿಡಿಯೋ ವೈರಲ್
ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. . ಫರ್ಮಾನ್, ಸಮೀರ್ ಹಾಗೂ ಓರ್ವ ಅಪ್ರಾಪ್ತರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ಬಗ್ಗೆ ಮಾಹಿತಿ ನೀಡಿದ ಈಶಾನ್ಯ ಡಿಸಿಪಿ ಲಕ್ಷ್ಮೀ ಪ್ರಸಾದ್, ಘಟನೆ ಸಂಬಂಧ ಐಪಿಎಸ್ ಸೆಕ್ಷನ್ 295a, 298, 143, 147, 504,324, 326, 149, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಕಾರಿನಲ್ಲಿ ಬಾವುಟ ಹಿಡಿದು ಜೈಶ್ರೀರಾಮ್ ಎಂದು ಹೋಗುವಾಗ ಕಾರು ಅಡ್ಡಗಟ್ಟಿರುವ ಪುಂಡರು, ಅಲ್ಲಾ ಹು ಅಕ್ಬರ್ ಅನ್ನುವಂತೆ ಗಲಾಟೆ ಮಾಡಿದ್ದಾರೆ. ಬಳಿಕ ಮತ್ತಷ್ಟು ಜನರನ್ನು ಕರೆದುಕೊಂಡು ಬಂದು ಕಾರಿನಲ್ಲಿದ್ದ ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರು, ಇದೀಗ ಶ್ರೀ ರಾಮನವಮಿ ದಿನದಂದು ಜೈ ಶ್ರೀ ರಾಮ್ ಘೋಷಣೆ ಕೂಗಿದವರ ಮೇಲೆ ಜನನಿಬಿಡ ರಸ್ತೆಯಲ್ಲಿ ಹಲ್ಲೆ ನಡೆಸಿದ್ದಾರೆ.
— R. Ashoka (ಮೋದಿ ಅವರ ಕುಟುಂಬ) (@RAshokaBJP) April 17, 2024
ಇದೆಲ್ಲಾ ಕಾಂಗ್ರೆಸ್ ಸರಕಾರದ ತುಷ್ಟೀಕರಣದ ಅತಿರೇಕ ಪ್ರತಿಕ್ರಿಯೆಗಳು.
ಇದನ್ನು ಗಮನಿಸುತ್ತಿರುವ ರಾಜ್ಯದ ಜನತೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ… pic.twitter.com/fAAmTev5bL
ಆರ್ ಅಶೋಕ ಕಿಡಿ
ಘಟನೆ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಪಕ್ಷ ನಾಯಕ ಆರ್. ಅಶೋಕ, "ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರು, ಇದೀಗ ಶ್ರೀ ರಾಮನವಮಿ ದಿನದಂದು ಜೈ ಶ್ರೀ ರಾಮ್ ಘೋಷಣೆ ಕೂಗಿದವರ ಮೇಲೆ ಜನನಿಬಿಡ ರಸ್ತೆಯಲ್ಲಿ ಹಲ್ಲೆ ನಡೆಸಿದ್ದಾರೆ. ಇದೆಲ್ಲಾ ಕಾಂಗ್ರೆಸ್ ಸರಕಾರದ ತುಷ್ಟೀಕರಣದ ಅತಿರೇಕ ಪ್ರತಿಕ್ರಿಯೆಗಳು. ಇದನ್ನು ಗಮನಿಸುತ್ತಿರುವ ರಾಜ್ಯದ ಜನತೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ." ಎಂದು ಕಿಡಿ ಕಾರಿದ್ದಾರೆ.












Click it and Unblock the Notifications