ಅಂಬೇಡ್ಕರ್, ದಲಿತರಿಗೆ ಅವಮಾನ: ಜೈನ್ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ವಿದ್ಯಾರ್ಥಿಗಳ ವಿರುದ್ಧ ಪ್ರಕರಣ
ಕಿರುನಾಟಕ ಪ್ರದರ್ಶಿಸಿ ದಲಿತರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಜೈನ್ ವಿವಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಫೆಬ್ರವರಿ. 12: ದಲಿತರು ಮತ್ತು ಬಿ.ಆರ್ ಅಂಬೇಡ್ಕರ್ ಅವರನ್ನು ಅವಹೇಳನಕಾರಿಯಾಗಿ ತೋರಿಸುವ ಕಿರುನಾಟಕ ಪ್ರದರ್ಶಿಸಿದ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಆರು ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿಯ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ.
ವಿದ್ಯಾರ್ಥಿಗಳು ಜೈನ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ (ಸಿಎಂಎಸ್) ತಮ್ಮ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಸ್ಕಿಟ್‌ನ ಭಾಗವಾಗಿದ್ದ ಆರು ವಿದ್ಯಾರ್ಥಿಗಳನ್ನು ವಿಶ್ವವಿದ್ಯಾನಿಲಯದ ಅಮಾನತುಗೊಳಿಸಿದೆ.
FIR (CR No 0032/2023) has been registered under the SC & ST (Prevention of Atrocities) Act, 1989 at Siddapura PS.
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) February 11, 2023
Further investigation is underway. https://t.co/KWyFgmyuob
ಜೈನ್ ಯೂನಿವರ್ಸಿಟಿಯ ಈ ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಲ್ಲಿ ಮೀಸಲಾತಿ, ದಲಿತರು ಹಾಗೂ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ತೀವ್ರ ಅವಹೇಳನಕಾರಿ ಪದಗಳನ್ನು ಬಳಸಿ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದ ವಿಶ್ವವಿದ್ಯಾಲಯವು, ಈ ಬಗ್ಗೆ ತನಿಖೆ ಮಾಡಲು ಯುಜಿಸಿ ಮಾರ್ಗಸೂಚಿಗಳ ಪ್ರಕಾರ ತಜ್ಞರನ್ನು ಒಳಗೊಂಡ ಶಿಸ್ತು ಸಮಿತಿಯನ್ನು ರಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.

ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿ ವವಿರುದ್ಧ ದೂರು ದಾಖಲಾಗಿರುವ ಬಗ್ಗೆ ಬೆಂಗಳೂರು ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. "ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ, 1989 ರ ಅಡಿಯಲ್ಲಿ ಸಿದ್ದಾಪುರ ಪಿಎಸ್‌ನಲ್ಲಿ ಎಫ್‌ಐಆರ್ (ಸಿಆರ್ ಸಂಖ್ಯೆ 0032/2023) ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ತಿಳಿಸಿದ್ದಾರೆ.
ಪ್ರಕರಣದಲ್ಲಿ ಈವರೆಗೂ ಯಾರನ್ನೂ ಬಂಧಿಸಲಾಗಿಲ್ಲ ಮತ್ತು ವಿದ್ಯಾರ್ಥಿಗಳನ್ನು ವಿಚಾರಣೆಗೆ ಕರೆಯಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A, 149, 295A ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಿಷನ್ ಅಂಬೇಡ್ಕರ್ ಸಂಘಟನೆ ಸಂಸ್ಥಾಪಕ, ಲೇಖಕ ಸೂರಜ್ ಕುಮಾರ್ ಬುದ್ಧ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸರು ದೂರು ದಾಖಲಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವು ಅವಹೇಳನಕಾರಿ ನಾಟಕಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದಿಂದ ವಿವರವಾದ ವರದಿಯನ್ನು ಕೇಳಿದೆ.
ದ ಡೆಲ್ರಾಯ್ಸ್ ಬಾಯ್ಸ್ ಎಂಬ ವಿದ್ಯಾರ್ಥಿಗಳ ಗುಂಪು ಪರಿಶಿಷ್ಟ ಜಾತಿ, ಮೀಸಲಾತಿ ಮತ್ತು ಸ್ವತಃ ಭಾರತೀಯ ಸಂವಿಧಾನದ ಪಿತಾಮಹ ಡಾ ಬಿ.ಆರ್ ಅಂಬೇಡ್ಕರ್ ಅವರನ್ನು ಅಣಕಿಸುವ ಸ್ಕಿಟ್ ಅನ್ನು ಪ್ರದರ್ಶಿಸಿದ್ದಾರೆ. ಅಸ್ಪೃಶ್ಯತ ಯಂತಹ ಗಂಭೀರ ವಿಷಯಗಳನ್ನು ಸಹ ಸ್ಕಿಟ್‌ನಲ್ಲಿ ಅಪಹಾಸ್ಯ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ಭಾರಿ ಆಕ್ರೋಶ ಉಂಟಾದ ನಂತರ ಜೈನ್ ವಿಶ್ವವಿದ್ಯಾಲಯ ಮತ್ತು ಪೊಲೀಸರು ಕ್ರಮ ಕೈಗೊಂಡಿದ್ದಾರೆ.












Click it and Unblock the Notifications