ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನಸೇವಕ ಯೋಜನೆಗೆ ಸಕಾಲ ಸಚಿವ ಸುರೇಶ್ ಕುಮಾರ್ ಚಾಲನೆ

|
Google Oneindia Kannada News

ಬೆಂಗಳೂರು, ಫೆ. 20: ಸಕಾಲ ಯೋಜನೆಯ 'ಜನಸೇವಕ ಕಾರ್ಯಕ್ರಮ'ಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ. ಯಶವಂತಪುರ ಕ್ಷೇತ್ರದ ಉಳ್ಳಾಲ ವಾರ್ಡ್‍ನಲ್ಲಿ ದಲ್ಲಿ ಯೋಜನೆಗೆ ಚಾಲನೆ ನೀಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ಅವರು, ಸಾರ್ವಜನಿಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನು ತಲುಪಿಸುವುದು ಯೋಜನೆಯ ಉದ್ದೇಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಯೋಜನೆಯನ್ನು ರಾಜಧಾನಿ ಬೆಂಗಳೂರಿನ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಜಾರಿಗೊಳಿಸಲಾಗಿದ್ದು, ನಂತರ ರಾಜ್ಯದ ಇತರೆಡೆಗಳಲ್ಲಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು. ಹಿರಿಯ ನಾಗರೀಕರು ಸೇರಿದಂತೆ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆಯುವುದು ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಿ ಮನೆ ಬಾಗಿಲಿಗೆ ಈ ಯೋಜನೆಯ ಸೇವೆಗಳು ತಲುಪಲಿವೆ ಎಂದು ಸುರೇಶ್ ಕುಮಾರ್ ಭರವಸೆ ನೀಡಿದರು.

Jana Sevaka Program of Sakal Mission launched in the Yashwantpur Assembly constituency

Recommended Video

ಶಾಸಕ ಯತ್ನಾಳ್ ವಿರುದ್ಧ ಸಚಿವ ಬಿ.ಸಿ ಪಾಟೀಲ್ ಕಿಡಿ | Oneindia Kannada

ಸಚಿವರಾದ ಎಸ್.ಟಿ. ಸೋಮಶೇಖರ್ ಹಾಗೂ ಸುರೇಶ್ ಕುಮಾರ್ ಅವರು ಸಾಂಕೇತಿಕವಾಗಿ ಯಶವಂತಪುರ ಕ್ಷೇತ್ರದ ಮೂವರು ಫಲಾನುಭವಿಗಳ ಮನೆಗೆ ಹೋಗಿ ಅವರು ಕೋರಿದ್ದ ಸೇವೆಗಳ ದಾಖಲಾತಿಗಳನ್ನು ನೀಡಿದರು. ಜನಸೇವಕ ಯೋಜನೆ ರಾಜಾಜಿನಗರ, ಮಹದೇವಪುರ, ಬೊಮ್ಮನಹಳ್ಳಿ, ದಾಸರಹಳ್ಳಿ, ಯಶವಂತಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಅನುಷ್ಠಾನಗೊಂಡಿದೆ.

English summary
The Jana Sevaka Program of Sakal Mission was launched on Friday in the Yashwantpur Assembly constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X