Janaspandana: ಇದು ಕುಸಿದಿರುವ 'ಆಡಳಿತ ಯಂತ್ರ'ಕ್ಕೆ ಜೀವಂತ ನಿದರ್ಶನ: ಆರೋಪ
ಬೆಂಗಳೂರು, ಫೆಬ್ರವರಿ 08: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಗುರುವಾರ ರಾಜ್ಯಮಟ್ಟದ 'ಜನಸ್ಪಂದನ' (Janaspandana) ಕಾರ್ಯಕ್ರಮ ಹಮ್ಮಿಕೊಂಡಿದೆ. ಇದೆನೋ ಮಹಾ ದೊಡ್ಡ ಸಾಧನೆ ಅಂತ ಮೆರೆಯುತ್ತಿದ್ದೀರಲ್ಲ ಎಂದು ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಅವರು ಕಿಡಿ ಕಾರಿದ್ದಾರೆ.
ನಾನು ಅನೇಕ ಬಾರಿ ಹೇಳಿರುವಂತೆ ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ. ಜನರ ಸಂಕಷ್ಟಗಳನ್ನು ಆಲಿಸಿ ಪ್ರಾಮಾಣಿಕವಾಗಿ ಸ್ಪಂದಿಸುವ ಸರ್ಕಾರ. ಕನ್ನಡಿಗರ ಹಿತಾಸಕ್ತಿ ಕಾಪಾಡಲು ಸರ್ವ ರೀತಿಯಲ್ಲೂ ಶ್ರಮಿಸುತ್ತಿರುವ ಸಾರ್ಥಕ ಸರ್ಕಾರ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 8, 2024
ನಿನ್ನೆಯಷ್ಟೆ ದೆಹಲಿಯಲ್ಲಿ ಒಕ್ಕೂಟ ಸರ್ಕಾರದ ಆರ್ಥಿಕ ಅನ್ಯಾಯಗಳ ವಿರುದ್ಧ ಘರ್ಜಿಸಿದ್ದ ನಿಮ್ಮ ಸರ್ಕಾರ,… pic.twitter.com/uZ2tQZGhSA
ಗುರುವಾರ ಈ ಕುರಿತು ಟ್ವೀಟ್ ಮಾಡಿರುವ ಆರ್. ಅಶೋಕ್ ಅವರು, ಬೆಂಗಳೂರಿನ ವಿಧಾನಸೌಧದ ಮುಂದೆ ನಡೆಯುತ್ತಿರುವ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ, ಇದು ಅಸಲಿಗೆ ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದಿರುವ ಆಡಳಿತ ಯಂತ್ರಕ್ಕೆ ಜೀವಂತ ನಿದರ್ಶನವಾಗಿದೆ ಎಂದು ಆರೋಪಿಸಿದರು.

ವ್ಯವಸ್ಥೆ ಇದ್ದರೂ ಜನ ದುಡ್ಡು ಖರ್ಚು ಮಾಡಿ ಬರಬೇಕು
ರಾಜ್ಯದಲ್ಲಿ 34 ಸಂಪುಟ ಸಚಿವರಿದ್ದಾರೆ. ಪ್ರತೀ ಜಿಲ್ಲೆಗೆ ಒಬ್ಬ ಉಸ್ತುವಾರಿ ಸಚಿವರುಗಳು ಇದ್ದಾರೆ. ಸಂಪುಟ ದರ್ಜೆ ಸ್ಥಾನಮಾನದ 34 ನಿಗಮ ಮಂಡಳಿಗಳ ಅಧ್ಯಕ್ಷರಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಇದ್ದಾರೆ. ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಪಂಚಾಯಿತಿಗಳು ಇವೆ.
ಇಷ್ಟೆಲ್ಲಾ ವ್ಯವಸ್ಥೆ ಇದ್ದರೂ ಒಬ್ಬ ಬಡ ವ್ಯಕ್ತಿ ತನ್ನ ಸಮಸ್ಯೆ ಬಗೆಹರಿಸಿಕೊಳ್ಳಲು ದೂರದ ಊರುಗಳಿಂದ ಬಸ್ಸು, ರೈಲು ಚಾರ್ಜ್ ಕೊಟ್ಟು ಅರ್ಜಿ ಹಿಡಿದುಕೊಂಡು ವಿಧಾನಸೌಧಕ್ಕೆ ಬಂದು ದಿನವೆಲ್ಲಾ ಕಾದು ಸಿಎಂ ಮುಂದೆ ಕೈಚಾಚಬೇಕಾದ ಪರಿಸ್ಥಿತಿ ಇದೆ ಎಂದರೆ ಅದು ನಿಮ್ಮ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ ಎಂದು ಅವರು ದೂರಿದರು.
ಜನರ ಗೋಳು ಬಿಟ್ಟಿ ಪ್ರಚಾರಕ್ಕೆ ಬಳಕೆ?: ಆರೋಪ
ಅರ್ಜಿ ಹಿಡಿದು ಕೈಚಾಚುವ ಜನರ ಗೋಳನ್ನು ನಿಮ್ಮ ಬಿಟ್ಟಿ ಪ್ರಚಾರದ ಗೀಳಿಗೆ ಬಳಸಿಕೊಳ್ಳುತ್ತಿದ್ದೀರಿ. ಇದ ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಮುಖ್ಯಮಂತ್ರಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ ಮಾಡಿದರು.

ಜನಸ್ಪಂದನ ಎಂದು ಪ್ರಚಾರಕ್ಕಾಗಿ ನಾಟಕ ಆಡುವ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಉಸ್ತುವಾರಿ ಮಂತ್ರಿಗಳಿಗೆ ಆಯಾ ಜಿಲ್ಲಾ ಕೇಂದ್ರಗಳಿಗೆ, ತಾಲ್ಲೂಕು ಕೇಂದ್ರಗಳಿಗೆ ಹೋಗಿ ಜನರ ಸಮಸ್ಯೆ ಆಲಿಸುವಂತೆ ಸೂಚನೆ ನೀಡಬೇಕು.
ಅಲ್ಲದೇ ಸ್ಥಳೀಯರ ಶಾಸಕರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಸಮ್ಮುಖದಲ್ಲಿ ಸ್ಥಳೀಯ ಮಟ್ಟದಲ್ಲೇ ಜನತಾ ದರ್ಶನ ನಡೆಸಿ ಅಲ್ಲೇ ಜನರ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದರು.
10 ಸಾವಿರಕ್ಕೂ ಅಧಿಕ ಜನ ಭಾಗಿ?
ಸಿಎಂ ಸಿದ್ದರಾಮಯ್ಯ ಅವರು ಖುದ್ದು ಈ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆ ಇದೆ. ರಾಜ್ಯದ ಮೂಲೆ ಮೂಲೆಗಳಿಂದ ಜನರು ಸರ್ಕಾರದ ಮುಂದೆ ತಮ್ಮ ಸಮಸ್ಯೆ, ಕುಂದು ಕೊರತೆ ಹೇಳಿಕೊಳ್ಳಲು ರಾಜಧಾನಿಯತ್ತ ಆಗಮಿಸಿದ್ದಾರೆ.
ಜನಸ್ಪಂದನ ಪ್ರಯುಕ್ತ ರಾಜಧಾನಿ ಸುತ್ತಮುತ್ತ ಬಿಗಿ ಭದ್ರತೆ ನಡೆಸಲಾಗಿದೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಿದ್ದು, ಮುಖ್ಯಮಂತ್ರಿಗಳ ಜತೆ ಎಲ್ಲ ಇಲಾಖೆಗಳ ಸಚಿವರು, ಉಸ್ತುವಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಜನರು ಮನವಿ ಪತ್ರ ಪಡೆದು ಸಿಎಂ ಪರಿಹಾರದ ಭರವಸೆ ನೀಡಿದರು.












Click it and Unblock the Notifications