ಆನೇಕಲ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಜನತಾ ದರ್ಶನ
ಬೆಂಗಳೂರು: ಸಾರ್ವಜನಿಕರ ಸಮಸ್ಯೆ ಆಲಿಸಿ ಬಗೆಹರಿಸಲು ಸೆಪ್ಟೆಂಬರ್ 25ರ ಸೋಮವಾರ ಜಿಲ್ಲಾ ಮಟ್ಟದ ಜನತಾ ದರ್ಶನ ಆಯೋಜಿಸಲಾಗಿದೆ. ಬೆಂಗಳೂರಿನ ಆನೇಕಲ್‌ನಲ್ಲಿ ವಿಶೇಷ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದ್ದು, ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆನೇಕಲ್ ಪಟ್ಟಣದ ಹೊಸ ಮಾಧ್ಯಮಿಕ ಪಾಠಶಾಲೆ ಆಟದ ಮೈದಾನದಲ್ಲಿ ಜನತಾ ದರ್ಶನ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನತಾ ದರ್ಶನ ಕಾರ್ಯಕ್ರಮ ಮಧ್ಯಾಹ್ನ 3.00 ಗಂಟೆಗೆ ಆರಂಭವಾಗಲಿದೆ. ಇನ್ನು ಈ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ಆನೇಕಲ್ ಶಾಸಕ ಬಿ. ಶಿವಣ್ಣ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಆನೇಕಲ್ ತಾಲೂಕಿನ ರೈತರು, ಸಾಹಿತಿಗಳು ಮತ್ತು ಸ್ವತಂತ್ರ ಹೋರಾಟಗಾರರು, ಮಾಜಿ ಸೈನಿಕರು ಎಲ್ಲಾ ಸಮುದಾಯದ ಸಂಘಟನೆ, ಸಂಘ ಸಂಸ್ಥೆಗಳು ತಾಲೂಕಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಅಹವಾಲನ್ನು ಈ ಜನತಾ ದರ್ಶನದ ವೇಳೆ ಸಲ್ಲಿಸಿ ಪರಿಹಾರ ಪಡೆಯಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಮನವಿ ಮಾಡಿದ್ದಾರೆ.
ಅಭಿವೃದ್ಧಿ ಹೊಂದುತ್ತಿರುವ ಪ್ರದೇಶ
ಆನೇಕಲ್ ಪ್ರದೇಶ ರಾಜಧಾನಿ ಬೆಂಗಳೂರಿನ ಹೊರವಲಯ ಹಾಗೂ ತಮಿಳುನಾಡಿನ ಗಡಿ ಹಂಚಿಕೆ ಮಾಡಿಕೊಂಡಿರುವ ಭಾಗ. ಕೆಲವು ವರ್ಷಗಳಿಂದ ಇಲ್ಲಿ ಅಭಿವೃದ್ಧಿ ಕೆಲಸಗಳು ವೇಗವಾಗಿ ನಡೆಯುತ್ತಿದ್ದು, ಸಮಸ್ಯೆಗಳು ಕೂಡ ಇವೆ. ಪ್ರಮುಖವಾಗಿ ನೀರಿನ ಸಮಸ್ಯೆ ಈ ಭಾಗದಲ್ಲಿ ಜನರನ್ನು ಕಾಡುತ್ತಿದೆ. ಅದರಲ್ಲೂ ಕಾವೇರಿ ನೀರಿನ ಸಂಪರ್ಕ ಇಲ್ಲದ ಕಾರಣ ಇಲ್ಲಿ ಬೋರ್‌ವೆಲ್ ನೀರನ್ನೇ ನಂಬಿ ಜನ ಬದುಕಬೇಕು. ಹೆಚ್ಚಾಗಿ ಕೈಗಾರಿಕಾ ಪ್ರದೇಶಗಳು ಇರುವ ಕಾರಣ, ಬೋರ್‌ವೆಲ್ ನೀರಿಗೂ ಪರದಾಟ ಇದೆ.

ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಜನತಾ ದರ್ಶನ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಹೀಗಾಗಿ ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಅಹವಾಲು ಸಲ್ಲಿಸಲು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ಗ್ರಾಂ. ಲೋಕಸಭಾ ಕ್ಷೇತ್ರಕ್ಕೆ ಆನೇಕಲ್ ಸೇರುತ್ತದೆ. ಹೀಗಾಗಿ ಸ್ಥಳೀಯ ಸಂಸದರು & ಸ್ಥಳೀಯ ಶಾಸಕರು ಪಾಲ್ಗೊಳ್ಳಲಿದ್ದಾರೆ. ಭಾರಿ ಸಂಖ್ಯೆಯಲ್ಲಿ ಜನ ಸೇರುವ ಹಾಗೂ ಅಹವಾಲು ಸಲ್ಲಿಸುವ ನಿರೀಕ್ಷೆ ಕೂಡ ಇದೆ.
-
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications