ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನತಾ ಜಲಧಾರೆ ಸಮಾರೋಪ ಸಮಾವೇಶಕ್ಕೆ ಭರ್ಜರಿ ಸಿದ್ಧತೆ

|
Google Oneindia Kannada News

ಬೆಂಗಳೂರು: ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿಯಾಗಿ ನಡಿದಿದ್ದು, ನಾಳೆ (ಮೇ 13) ನೆಲಮಂಗಲ ಸಮೀಪ 'ಜನತಾ ಜಲಧಾರೆ' ಕಾರ್ಯಕ್ರಮದ ಸಮಾರೋಪ ಸಮಾವೇಶ ನಡೆಯಲಿದೆ.

ಈ ಸಮಾವೇಶದಲ್ಲಿ 4-5 ಲಕ್ಷ ಜನರು ಸೇರಲಿದ್ದು, ರಾಜ್ಯದ ನೀರಾವರಿ ಯೋಜನೆಗಳನ್ನೂ ಜಾರಿ ಮಾಡುವ ನಿಟ್ಟಿನಲ್ಲಿ ಗಂಗಾ ಮಾತೆಯ ಸಾಕ್ಷಿಯಾಗಿ ಸಂಕಲ್ಪ ಮಾಡಲಾಗುವುದು. ಪಕ್ಷಕ್ಕೆ ಪೂರ್ಣ ಪ್ರಮಾಣದ ಅಧಿಕಾರ ನೀಡಿದರೆ ಎಲ್ಲ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ನೆಲಮಂಗಲ ಸಮೀಪದ ಬಾವಿಕೆರೆ ಬಳಿಯ ಬೆಂಗಳೂರು - ಹಾಸನ ಹೆದ್ದಾರಿಯ ಪಕ್ಕದ ಬೃಹತ್ ಮೈದಾನದಲ್ಲಿ ಮೇ ನಾಳೆ ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Janata Jaladhare closing function in Nelemangala on May 13

ಸಮಾವೇಶದಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ್, ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮುಖಂಡರು, ಮುಂದಿನ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಭಾಗಿಯಾಗಲಿದ್ದಾರೆ.

ಸಮಾವೇಶದಲ್ಲಿ ಭಾಗಿಯಾಗುವ ಎಲ್ಲರಿಗೂ ದಾಸೋಹದ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್, ಊಟ ಇತ್ಯಾದಿಗಳ ವ್ಯವಸ್ಥೆಯನ್ನು ಒದಗಿಸಲಾಗಿದೆ.

Janata Jaladhare closing function in Nelemangala on May 13

ಗಂಗಾ ಆರತಿ:
ಜನತಾ ಜಲಧಾರೆ ಸಮಾವೇಶದಲ್ಲಿ ಗಂಗಾ ಪೂಜೆ ಮತ್ತು ಗಂಗಾ ಆರತಿ ಕಾರ್ಯಕ್ರಮದಲ್ಲಿ ಪ್ರಮುಖ ಹೈಲೆಟ್ ಆಗಿದೆ. ನಮ್ಮ ನೆಲದ ಪರಂಪರೆಗೆ ಧಕ್ಕೆ ಆಗದಂತೆ ಸಮಾವೇಶವನ್ನು ಆಯೋಜಿಸಲಾಗಿದೆ. ಜಲಧಾರೆ ಕಾರ್ಯಕ್ರಮದಲ್ಲಿ ಸಂಜೆ 6.30 ಗಂಟೆಗೆ ಗಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ 20 ಜನ ಪಂಡಿತರ ವಿಶೇಷ ತಂಡ ವಾರಣಾಸಿಯಿಂದ ಬರುತ್ತಿದ್ದಾರೆ .

180 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಾಗಿದೆ. ಅಷ್ಟೂ ಕಡೆ ಜಲಧಾರೆ ಕಾರ್ಯಕ್ರಮ ನಡೆದಿದೆ. 15 ಗಂಗಾರಥಗಳು ಯಶಸ್ವಿಯಾಗಿ ಸಂಚರಿಸಿವೆ. ಇವುಗಳ ಮೂಲಕ ರಾಜ್ಯದ ಎಲ್ಲಾ ಜೀವ ನದಿಗಳಿಂದ ಸಂಗ್ರಹ ಮಾಡಲಾಗಿರುವ ಪುಣ್ಯಜಲವನ್ನು ಒಂದು ಬೃಹತ್ ಕಲಶಕ್ಕೆ ತುಂಬಿಸಿ ಸಮಾವೇಶದಲ್ಲಿ ಪೂಜೆ ನೆರವೇರಿಸಲಾಗುವುದು ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

ಜಲಧಾರೆಯ ಉದ್ದೇಶ:
ನಮ್ಮ ರಾಜ್ಯದಲ್ಲಿ ನೀರನ್ನು ಸಂಪೂರ್ಣವಾಗಿ ಬಳಕೆ ಮಾಡಲು ಗಂಗಾ ತಾಯಿ ಆಶೀರ್ವಾದ ಪಡೆಯಲು ಈ‌ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಸಮಾವೇಶದಲ್ಲಿ ರಾಜ್ಯದ ಜನತೆ ಐದು ವರ್ಷಗಳ ಸ್ವತಂತ್ರ ಸರಕಾರ ನೀಡಿದರೆ ನಮ್ಮ ಪಕ್ಷದಿಂದ ಕೈಗೊಳ್ಳಲಾಗುವ ನೀರಾವರಿ ಯೋಜನೆಗಳ ಬಗ್ಗೆ ಸಂಕಲ್ಪ ಮಾಡಲಾಗುವುದು ಎನ್ನುವುದು ಹೆಚ್‌ಡಿಕೆ ಅವರ ಮಾತು.

Janata Jaladhare closing function in Nelemangala on May 13

ನೀರಾವರಿ ವಿಷಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ರಾಜ್ಯಕ್ಕೆ ಅನ್ಯಾಯ ಮಾಡಿವೆ. ಕಳೆದ 75 ವರ್ಷಗಳಲ್ಲಿ ಎರಡೂ ಪಕ್ಷಗಳೂ ಜನತೆಗೆ ವಂಚಿಸಿವೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಿ ಎಂದು ಸರಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಎತ್ತಿನಹೊಳೆ, ಮಹದಾಯಿ ಯೋಜನೆಗೂ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಯೋಜನೆಗಳನ್ನು ಜಾರಿಗೊಳಿಸದೆ ಸಬೂಬು ಕೊಟ್ಟು ತಳ್ಳುತ್ತಿದ್ದಾರೆ. ರಾಜ್ಯದ ಸಂಪತ್ತು ದುರ್ಬಳಕೆ ಆಗುತ್ತಿದೆ. ನಮ್ಮ ರಾಜ್ಯದಲ್ಲಿ ಸರ್ಕಾರಕ್ಕೆ ಯಾವುದೂ ಅಸಾಧ್ಯ ಇಲ್ಲ. ಸರಿಯಾದ ರೀತಿಯಲ್ಲಿ ನದಿ ನೀರು ಉಪಯೋಗಿಸುವ ಸಂಕಲ್ಪ ಬರಬೇಕು. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಸ್ವತಂತ್ರ ಸರ್ಕಾರ ಬಂದರೆ ಐದು ವರ್ಷದಲ್ಲಿ ಎಲ್ಲ ನದಿ ನೀರು ಬಳಕೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ನೀರಿನ ಸಮಸ್ಯೆಯನ್ನು ಸರ್ಕಾರಗಳು ಗಂಭೀರವಾಗಿ ತೆಗೆದುಕೊಂಡಿಲ್ಲ. ಹೀಗೆ ಮುಂದುವರೆದರೆ ಬೆಂಗಳೂರು ನಗರದ ಜನರಿಗೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದೆ. ಅರ್ಕಾವತಿ ನದಿ ಪುನಶ್ಚೇತನ ಅಂದರು. ಅದು ನಿಂತು ಹೋಯಿತು. ಬೆಂಗಳೂರು ಹಲವು ಕೆರೆಗಳನ್ನು, ರಾಜ ಕಾಲುವೆಗಳನ್ನು ನುಂಗಿ ಹಾಕಿದ್ದಾರೆ. ಅದನ್ನು ಸರಿಪಡಿಸಬೇಕು. ಕಳೆದ ಎರಡು ಮೂರು ವರ್ಷಗಳಿಂದ ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರು ಲಘುವಾಗಿ ಚರ್ಚೆ ಮಾಡಿದ್ದಾರೆ. ಅವರಿಗೆ ಉತ್ತರ ಕೊಡುವ ಕಾರ್ಯಕ್ರಮ ಇದಾಗಿದೆ‌ ಎಂದು ಹೇಳಿದರು.

Recommended Video

ಎಲ್ಲಾ ವದಂತಿಗೆ ಬ್ರೇಕ್ ಹಾಕಿದ ಸುನಿಲ್ ಶೆಟ್ಟಿ! | Oneindia Kannada

English summary
He Janata Jaladhare program will be held on the eve of tomorrow (May 13) at the closing ceremony of the 'Janata Jaladhare' program near Nelmangala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X