ನನ್ನ ವಿರುದ್ಧ ಸ್ವಪಕ್ಷೀಯರಿಂದಲೇ ಷಡ್ಯಂತ್ರ: ರಮೇಶ್ ಜಾರಕಿಹೊಳಿ

ಬೆಂಗಳೂರು, ನವೆಂಬರ್ 30: ನನ್ನ ವಿರುದ್ಧ ಕಾಂಗ್ರೆಸ್‌ನ ಕೆಲವು ಪ್ರಭಾವಿ ನಾಯಕರು ಷಡ್ಯಂತ್ರ ರಚಿಸುತ್ತಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ದೂರಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಬಿಟ್ಟು ಎಲ್ಲಿಯೂ ಹೋಗಿಲ್ಲ. ಹೋಗುವುದೂ ಇಲ್ಲ. ನನ್ನ ತೇಜೋವಧೆ ಮಾಡಲು ನಮ್ಮ ಪಕ್ಷದ ಕೆಲವು ಸ್ವಯಂಘೋಷಿತ ನಾಯಕರೇ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

ಇದೇ ಸಮಯದಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಕಿತ್ತಾಟ ಇತ್ತು ಎನ್ನುವುದನ್ನು ಒಪ್ಪಿಕೊಂಡ ಜಾರಕಿಹೊಳಿ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರು ಮಧ್ಯಸ್ತಿಕೆ ವಹಿಸಿಕೊಂಡು ಸಮಸ್ಯೆ ಬಗೆಹರಿಸಿದ್ದಾರೆ ಎಂದು ತಿಳಿಸಿದರು.

Jarkiholi alleges that some congress leaders are working against him

ನಮ್ಮ ನಡುವೆ ಭಿನ್ನಮತ ಇದದ್ದು ನಿಜ. ಅದನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರು ಬಗೆಹರಿಸಿದ್ದಾರೆ. ಅಲ್ಲಿಗೆ ಅದು ಮುಗಿದ ಅಧ್ಯಾಯ. ಆದರೂ ಪದೇ ಪದೇ ನನ್ನ ಮೇಲೆ ಅಪಪ್ರಚಾರ ಮಾಡುವಂತಹ ಕೃತ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ನಾನು ಸಹಿಸುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಸಚಿವ ಸಂಪುಟ ಸಭೆಯಲ್ಲಿ ರಮೇಶ್ ಜಾರಕಿಹೊಳಿ ಅರ್ಧಕ್ಕೆ ಸಭೆಯಿಂದ ಎದ್ದು ಹೊರಹೋಗಿದ್ದರು. ಕೆಲ ದಿನಗಳ ಹಿಂದೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್ ಅವರ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+