ಜಯ ಕರ್ನಾಟಕ ಸಂಘಟನೆಯ ಸ್ಥಾಪಕ ಮುತ್ತಪ್ಪ ರೈ ಸ್ಥಿತಿ ಗಂಭೀರ

ಬೆಂಗಳೂರು, ಮೇ 13: ಜಯ ಕರ್ನಾಟಕ ಸಂಘಟನೆಯ ಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮಾಜಿ ಭೂಗತ ಪಾತಕಿ, ರಿಯಲ್ ಎಸ್ಟೇಟ್ ಉದ್ಯಮಿ ಮುತ್ತಪ್ಪ ರೈ ನಿಧನರಾಗಿದ್ದಾರೆ ಎಂಬ ಸುದ್ದಿ ಹಬ್ಬಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಪೂರ್ವ ವಲಯ ಡಿಸಿಪಿ ಈಶ್ವರಪ್ಪ, ರೈ ಸಾವಿನ ಸುದ್ದಿ ಸುಳ್ಳು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

Recommended Video

      ಕಣ್ಣೀರು ಹಾಕುತ್ತ 1,165 Km ಸೈಕಲ್ ನಲ್ಲಿ ಹೊರಟ ಯುವಕ..! Gurugram To Bihar

      ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿಎನ್. ಮುತ್ತಪ್ಪ ರೈಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಪುತ್ತೂರಿನಲ್ಲಿರುವ ಅವರ ಸಂಬಂಧಿಕರು ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಜಯ ಕರ್ನಾಟಕ ಸಂಘಟನೆಯ ವಕ್ತಾರರಾದ ಪ್ರಕಾಶ್ ರೈ ಹೇಳಿದ್ದಾರೆ.

      ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ರೈ, ಕಳೆದ ತಿಂಗಳು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಪುತ್ತೂರು ತಾಲೂಕಿನ ಕೆಯ್ಯೂರಿನ ಎನ್.ಮುತ್ತಪ್ಪ ರೈಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.

      Jaya Karnataka founder, Real Estate Baron Muthappa Rai is in critical condition

      ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ನ‌ ನಿಕಟಪೂರ್ವ ಅಧ್ಯಕ್ಷರೂ ಆಗಿರುವ ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದಾರೆ. ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಏಪ್ರಿಲ್ 28ರಂದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 13ರ ರಾತ್ರಿ ವೇಳೆಗೆ ಎನ್. ಮುತ್ತಪ್ಪ ರೈಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

      ಕಳೆದ ಎರಡು ವರ್ಷಗಳಿಂದ ಮೆದುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ಅವರು ಇತ್ತೀಚೆಗೆ ಅತ್ಯಂತ ಕೃಶಕಾಯರಾಗಿ ತಮ್ಮ ಬಿಡದಿ ಮನೆಯಲ್ಲಿ ಕಾಣಿಸಿಕೊಂಡಿದ್ದರು.

      ನವದೆಹಲಿ, ಚೆನ್ನೈ, ಬೆಂಗಳೂರು ಸೇರಿದಂತೆ ವಿವಿಧ ಕಡೆ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಲಿವರ್ ಕ್ಯಾನ್ಸರ್ ಗುಣವಾಯಿತು ಆದರೆ ಮೆದುಳಿನಲ್ಲಿ ಕ್ಯಾನ್ಸರ್ ಗಡ್ಡೆ ಪತ್ತೆ ಆಯಿತು. ಕೆಲವು ತಿಂಗಳಷ್ಟೆ ಬದುಕುವುದಾಗಿ ವೈದ್ಯರು ಹೇಳಿಬಿಟ್ಟಿದ್ದಾರೆ ಹಾಗಾಗಿ ಕೊನೆಯ ದಿನಗಳನ್ನು ಕಳೆಯಲು ಬಿಡದಿಗೆ ಬಂದಿದ್ದೇನೆ' ಎಂದು ಜನವರಿ ತಿಂಗಳಿನಲ್ಲಿ ಸುದ್ದಿಗೋಷ್ಠಿ ಹೇಳಿದ್ದನ್ನು ಇಲ್ಲಿಸ್ಮರಿಸಬಹುದು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+