ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು
ಬೆಂಗಳೂರು, ಮಾ. 31 : ಒಂದು ಕಡೆ ಲೋಕಸಭೆ ಚುನಾವಣೆ ಕಾವು, ಮತ್ತೊಂದು ಕಡೆ ಬೆಲೆ ಏರಿಕೆ ಬಿಸಿ ಇವುಗಳ ನಡುವೆಯೇ ಸೋಮವಾರ ಜನರು ಯುಗಾದಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಬೇವು ಬೆಲ್ಲ ವಿನಿಮಯದ ಮೂಲಕ ಸಿಹಿ-ಕಹಿಯನ್ನು ಹಂಚಿಕೊಳ್ಳುವ ಮೂಲಕ ಹೊಸವರ್ಷವನ್ನು ಸ್ವಾಗತಿಸುತ್ತಿದ್ದಾರೆ.
"ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ" ಎಂಬ ಸಾಲುಗಳಂತೆ ಹಿಂದೂಗಳ ಹೊಸ ವರ್ಷ ಚಾಂದ್ರಮಾನ ಯುಗಾದಿ ಮರಳಿ ಬಂದಿದೆ. ಭಾನುವಾರ ನಗರದಲ್ಲಿ ಯುಗಾದಿ ಖರೀದಿ ಜೋರಾಗಿಯೇ ನಡೆದಿತ್ತು. ಬೆಲೆ ಏರಿಕೆ ಬಿಸಿಯ ನಡುವೆಯೂ ಜನರು ಹಬ್ಬದ ಖರೀದಿಯಲ್ಲಿ ಬ್ಯುಸಿಯಾಗಿದ್ದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ನಗರದ ಮಾರುಕಟ್ಟೆ, ಬಸ್ ನಿಲ್ದಾಣಗಳ ಅಕ್ಕ-ಪಕ್ಕ ಮಾವು ಮತ್ತು ಬೇವಿನ ಸೊಪ್ಪುಗಳದ್ದೆ ಕಾರುಬಾರು. ಭಾನುವಾರ ಕೆ.ಆರ್. ಮಾರುಕಟ್ಟೆ, ಬಸವನಗುಡಿ, ಮಲ್ಲೇಶ್ವರಂ, ಸುಂಕದಕಟ್ಟೆ, ಮಾಗಡಿ ರಸ್ತೆ, ರಾಜಾಜಿನಗರ, ಜಯನಗರ 4ನೇ ಬಡಾವಣೆ, ಮುಂತಾದ ಮಾರುಕಟ್ಟೆಗಳು ಜನರಿಂದ ತುಂಬಿ ಹೋಗಿದ್ದವು. [ಒನ್ ಇಂಡಿಯಾ ಕನ್ನಡದಿಂದ ಯುಗಾದಿಯ ಶುಭಾಶಯಗಳು]
ಮಾವು ಮತ್ತು ಬೇವು ಪ್ರತಿ ಕಂತೆಗೆ 10 ರಿಂದ 20 ರೂ. ಇದ್ದರೆ, ಮಲ್ಲಿಗೆ ಹೂವು ಮೊಳಕ್ಕೆ 20-25 ರೂ.ಗೆ ಮಾರಾಟವಾಗುತ್ತಿತ್ತು. ಬಾಳೆ ಎಲೆ ಒಂದಕ್ಕೆ 6 ರೂ., ವೀಳ್ಯದೆಲೆ 2 ರೂ. ಆಗಿದ್ದು ಜನರ ಜೇಬಿಗೆ ಕತ್ತರಿ ಹಾಕಿದೆ. ಆದರೂ ಜನರು ಉತ್ಸಾಹದಿಂದ ಹಬ್ಬದ ಖರೀದಿ ಮುಗಿಸಿ ಸೋಮವಾರ ಹೊಸ ವರ್ಷವನ್ನು ಬೇವು-ಬೆಲ್ಲದೊಂದಿಗೆ ಸ್ವಾಗತಿಸುತ್ತಿದ್ದಾರೆ.
ಒಂದು ಕಡೆ ಲೋಕಸಭೆ ಚುನಾವಣೆ ಕಾವು ಏರುತ್ತಿದೆ ಮತ್ತೊಂದು ಕಡೆ ಬೆಲೆ ಏರಿಕೆ ಬಿಸಿಯ ನಡುವೆಯೇ ಜನರು ಯುಗಾದಿಯನ್ನು ಬರಮಾಡಿಕೊಳ್ಳುತ್ತಿದ್ದಾರೆ. ಜಯನಾಮ ಸಂವತ್ಸರವು ನಾಡಿನ ಸಕಲ ಪ್ರಜೆಗಳ ಬದುಕಿನಲ್ಲಿ ಜಯ ತರಲಿ, ಸುಖ-ಸಮೃದ್ಧಿ ನೆಲೆಸಲಿ ಎಂದು ನಾವು ಹಾರೈಸುತ್ತೇವೆ. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications