ಜೂನ್ 11ಕ್ಕೆ ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆ
ಬೆಂಗಳೂರು,
ಮೇ 17: ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಜಯನಗರ ಶಾಸಕ ಬಿಜೆಪಿ ಅಭ್ಯರ್ಥಿ ಬಿಎನ್ ವಿಜಯಕುಮಾರ್ ಹೃದಯಾಘಾತದಿಂದ ನಿಧನರಾದ ಕಾರಣಕ್ಕೆ ಮುಂದೂಡಲಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಜೂನ್ 11 ರಂದು ನಡೆಯಲಿದೆ. ಜೂನ್ 16ರಂದು ಮತ ಎಣಿಕೆ ನಡೆಯಲಿದೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಚುನಾವಣೆ
ಆಯೋಗ ಈ ಕುರಿತು ಶುಕ್ರವಾರ ಅಧಿಸೂಚನೆ ಪ್ರಕಟಿಸಲಿದೆ.ಮೇ 18 ರಿಂದ ನಾಮಪತ್ರ ಸಲ್ಲಿಸಬಹುದಾಗಿದೆ. ಕಾಂಗ್ರೆಸ್ ನಿಂದ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಕಣದಲ್ಲಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ಕೂಡ ಘೋಷಣೆಯಾಗಿಲ್ಲ. ಅದೇ ರೀತಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಾಲಹಳ್ಳಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮತದಾರರ ಚೀಟಿ ದೊರೆತ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ರಾಜರಾಜೇಶ್ವರಿ ವಿಧಾನಭಾ ಕ್ಷೇತ್ರಕ್ಕೆ ಮೇ 28ರಂದು ಚುನಾವಣೆ ನಿಗದಿಯಾಗಿದೆ. id='are-slot-2' class='oiad oi-axt oiadv'>












Click it and Unblock the Notifications