ಜಯನಗರ ಕ್ಷೇತ್ರದಲ್ಲಿ 16 ಮತಗಳ ಅಂತರದಿಂದ ಬಿಜೆಪಿಗೆ ಗೆಲುವು, ಸೌಮ್ಯ ರೆಡ್ಡಿಗೆ ಸೋಲು: ಸಿ.ಕೆ.ರಾಮಮೂರ್ತಿ
ಜಯನಗರ, ಮೇ, 13: ರಾಜ್ಯ ವಿಧಾನಸಭೆ ಚುನಾಚಣೆಯ ಮತ ಎಣಿಕೆ ಮುಗಿದ್ದು, ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಹೊರಬಿದ್ದಿದೆ. ಅದೇ ರೀತಿ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಮರು ಮತ ಎಣಿಕೆ ಆಗುತ್ತಲೇ ಇತ್ತು. ಆದರೆ ಇದೀಗ 16 ಮತಗಳ ಅಂತರದಿಂದ ಬಿಜೆಪಿ ಗೆಲುವು ಸಾಧಿಸಿದೆ ಎಂದು ಅಭ್ಯರ್ಥಿಯಾದ ಸಿ.ಕೆ.ರಾಮಮೂರ್ತಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಜಯನಗರ ಕ್ಷೇತ್ರದ ಫಲಿತಾಂಶದ ವಿಚಾರವಾಗಿ ಭಾರೀ ಗೊಂದಲ ಏರ್ಪಟ್ಟಿತ್ತು. ಮೊದಲು ಫಲಿತಾಂಶ ಘೋಷಣೆ ಆದಾಗ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಗೆಲುವು ಸಾಧಿಸಿದ್ದಾರೆ ಎನ್ನಲಾಗಿತ್ತು. ನಂತರ ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ವಿರುದ್ಧ ಸೌಮ್ಯಾ ರೆಡ್ಡಿ ಕೇವಲ 160 ಮತಗಳಿಂದ ಗೆಲುವು ಸಾಧಿಸಿದ್ದಾಗಿ ಘೋಷಿಸಲಾಗಿತ್ತು.

ಆದರೆ ಗೆಲುವಿನ ಅಂತರ ಕಡಿಮೆ ಇದ್ದು, ಮರು ಮತ ಎಣಿಕೆಗೆ ಬಿಜೆಪಿ ನಾಯಕರು ಮನವಿ ಮಾಡಿದ್ದರು. ಬಳಿಕ ಮತ್ತೊಮ್ಮೆ ಎಣಿಕೆ ಮಾಡಿದಾಗ, ಗೆಲುವಿನ ಅಂತರ 150ಕ್ಕೆ ಇಳಿಗಿತ್ತು. ಇದೀಗ 60 ಮತಗಳಿಂದ ಬಿಜೆಪಿ ಗೆದ್ದಿರುವುದಾಗಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರೇ ಘೋಷಣೆ ಮಾಡಿದ್ದಾರೆ. ಇನ್ನು ಸೋಲನುಭವಿಸಿದ ಸೌಮ್ಯ ರೆಡ್ಡಿ ಅವರು ಎಣಿಕಾ ಕೇಂದ್ರದಿಂದ ಕಣ್ಣೀರು ಹಾಕುತ್ತಾ ಹೊರನಡೆದಿದ್ದಾರೆ.
ಜಯನಗರ ಕ್ಷೇತ್ರದಲ್ಲಿ 16 ಮತಗಳ ಅಂತರದಿಂದ ಬಿಜೆಪಿಗೆ ಗೆಲುವು, ಸೌಮ್ಯ ರೆಡ್ಡಿಗೆ ಸೋಲು: ಸಿ.ಕೆ.ರಾಮಮೂರ್ತಿ https://t.co/cYkLUS3tZb #jayanagar #bengaluru #karnatakaelectionresults2023 #karnatakaassemblyelections2023 #bjp #sowmyareddy #politics
— oneindiakannada (@OneindiaKannada) May 13, 2023
ಸೌಮ್ಯ ರೆಡ್ಡಿ ಕರ್ನಾಟಕ ಕಾಂಗ್ರೆಸ್ ಪಕ್ಷದ ಪ್ರಮುಖ ಮಹಿಳಾ ನಾಯಕಿಯರಲ್ಲಿ ಒಬ್ಬರು. ವಿದ್ಯಾವಂತ ರಾಜಕಾರಣಿಯಾಗಿರುವ ಇವರು ರಾಜಕೀಯ ಜೊತೆಗೆ ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಸದ್ಯ ಬೆಂಗಳೂರು ನಗರ ವ್ಯಾಪ್ತಿಯ ಜಯನಗರದ ಶಾಸಕಿಯಾಗಿರುವ ಇವರು ಈಗಾಗಲೇ ತಮ್ಮ ಅಭಿವೃದ್ಧಿ ಕೆಲಸ ಹಾಗೂ ಹೋರಾಟಗಳಿಂದ ಜನ ಮನ್ನಣೆ ಗಳಿಸಿದ್ದಾರೆ.

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡ ರಾಮಲಿಂಗ ರೆಡ್ಡಿ ಅವರ ಪುತ್ರಿಯಾಗಿರುವ ಸೌಮ್ಯ ರೆಡ್ಡಿ, ಮಾರ್ಚ್ 18, 1983ರಲ್ಲಿ ಜನಿಸಿದರು. ತಂದೆ ರಾಮಲಿಂಗ ರೆಡ್ಡಿ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಕಾರಣ ಸೌಮ್ಯ ರೆಡ್ಡಿ ಮೊದಲಿನಿಂದಲೂ ನಾಯಕತ್ವದ ಗುಣಗಳನ್ನು ಹೊಂದಿದ್ದರು. ಜೊತೆಗೆ ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು.
ಬೆಂಗಳೂರಿನ ಆರ್‌ವಿ ಇಂಜಿನಿರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಮುಗಿಸಿದ ಬಳಿಕ ಸೌಮ್ಯ ರೆಡ್ಡಿ ನ್ಯೂಯಾರ್ಕ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಎಸ್ ಮುಗಿಸಿದರು. ಅವರು ಮೊದಲಿನಿಂದಲೂ ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗಿಯಾಗಿಯುತ್ತಿದ್ದರು. ಪರಿಸರ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಬಳಕೆಯ ವಿರುದ್ಧ ಅನೇಕ ಹೋರಾಟಗಳನ್ನು ನಡೆಸಿದ್ದಾರೆ.
2014ರಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ಸೌಮ್ಯ ರೆಡ್ಡಿ ಅವರು, ಬಳಿಕ ರಾಜಕೀಯದತ್ತ ಒಲವು ತೋರಿದರು. ತಂದೆಯ ಮಾರ್ಗವನ್ನೇ ಹಿಡಿದ ಸೌಮ್ಯ ರೆಡ್ಡಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ, ಪಕ್ಷದ ಸದಸ್ಯರಾದರು. ಬಳಿಕ 2016ರಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾದರು.
ಕಾಂಗ್ರೆಸ್‌ನಲ್ಲಿ ತಮಗೆ ನೀಡಿದ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದ ಅವರು ವಿಧಾನಸಭೆ ಪ್ರವೇಶಿಸಲು ಜಯನಗರ ವಿಧಾಸಭಾ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗಿಳಿದರು. 2018 ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಅಭ್ಯರ್ಥಿಯಾಗಿ ಕಣಕ್ಕಿಳಿದ ಸೌಮ್ಯರೆಡ್ಡಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು. ಮೊದಲ ಬಾರಿಗೆ ಚುನಾವಣೆ ಕಣಕ್ಕಿಳಿದ ಪುತ್ರಿಗೆ ಕಾಂಗ್ರೆಸ್‌ನ ಹಿರಿಯ ಮುಖಂಡ ರಾಮಲಿಂಗ ರೆಡ್ಡಿ ಸಾಥ್ ನೀಡಿದ್ದರು. ಜೊತೆಗೆ ಇತರ ಕಾಂಗ್ರೆಸ್ ನಾಯಕರು ಸಹ ಸಾಥ್ ನೀಡಿದ್ದರು.












Click it and Unblock the Notifications