ಜಯನಗರ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಫೈಟ್ ನಡುವೆ ಕೊನೆಗೂ ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ
ಬೆಂಗಳೂರು, ಮೇ, 13: ರಾಜ್ಯ ವಿಧಾನಸಭೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು, ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು 57,429 ಮತಗಳನ್ನಯ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಮತ್ತೊಂದೆಡೆ ಇವರಿಗೆ ಭಾರಿ ಪೈಪೋಟಿ ನೀಡಿದ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ 56,956 ಮತಗಳನ್ನು ಪಡೆದು ಸೋಲುಂಡಿದ್ದಾರೆ.
ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಫಲಿತಾಂಶ ಹೊಬಿದ್ದಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿಗಳು ಕಡಿವೆ ಮತಗಳನ್ನು ಪಡೆಯುವ ಸೋಲುಂಡಿದ್ದಾರೆ.

ಸೌಮ್ಯ ರೆಡ್ಡಿ ಕರ್ನಾಟಕ ಕಾಂಗ್ರೆಸ್ ಪಕ್ಷದ ಪ್ರಮುಖ ಮಹಿಳಾ ನಾಯಕಿಯರಲ್ಲಿ ಒಬ್ಬರು. ವಿದ್ಯಾವಂತ ರಾಜಕಾರಣಿಯಾಗಿರುವ ಇವರು ರಾಜಕೀಯ ಜೊತೆಗೆ ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಸದ್ಯ ಬೆಂಗಳೂರು ನಗರ ವ್ಯಾಪ್ತಿಯ ಜಯನಗರದ ಶಾಸಕಿಯಾಗಿರುವ ಇವರು ಈಗಾಗಲೇ ತಮ್ಮ ಅಭಿವೃದ್ಧಿ ಕೆಲಸ ಹಾಗೂ ಹೋರಾಟಗಳಿಂದ ಜನ ಮನ್ನಣೆ ಗಳಿಸಿದ್ದಾರೆ.
ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡ ರಾಮಲಿಂಗ ರೆಡ್ಡಿ ಅವರ ಪುತ್ರಿಯಾಗಿರುವ ಸೌಮ್ಯ ರೆಡ್ಡಿ, ಮಾರ್ಚ್ 18, 1983ರಲ್ಲಿ ಜನಿಸಿದರು. ತಂದೆ ರಾಮಲಿಂಗ ರೆಡ್ಡಿ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಕಾರಣ ಸೌಮ್ಯ ರೆಡ್ಡಿ ಮೊದಲಿನಿಂದಲೂ ನಾಯಕತ್ವದ ಗುಣಗಳನ್ನು ಹೊಂದಿದ್ದರು. ಜೊತೆಗೆ ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು.
ಬೆಂಗಳೂರಿನ ಆರ್‌ವಿ ಇಂಜಿನಿರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಮುಗಿಸಿದ ಬಳಿಕ ಸೌಮ್ಯ ರೆಡ್ಡಿ ನ್ಯೂಯಾರ್ಕ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಎಸ್ ಮುಗಿಸಿದರು. ಅವರು ಮೊದಲಿನಿಂದಲೂ ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗಿಯಾಗಿಯುತ್ತಿದ್ದರು. ಪರಿಸರ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಬಳಕೆಯ ವಿರುದ್ಧ ಅನೇಕ ಹೋರಾಟಗಳನ್ನು ನಡೆಸಿದ್ದಾರೆ.
2014ರಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ಸೌಮ್ಯ ರೆಡ್ಡಿ ಅವರು, ಬಳಿಕ ರಾಜಕೀಯದತ್ತ ಒಲವು ತೋರಿದರು. ತಂದೆಯ ಮಾರ್ಗವನ್ನೇ ಹಿಡಿದ ಸೌಮ್ಯ ರೆಡ್ಡಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ, ಪಕ್ಷದ ಸದಸ್ಯರಾದರು. ಬಳಿಕ 2016ರಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾದರು.
ಕಾಂಗ್ರೆಸ್‌ನಲ್ಲಿ ತಮಗೆ ನೀಡಿದ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದ ಅವರು ವಿಧಾನಸಭೆ ಪ್ರವೇಶಿಸಲು ಜಯನಗರ ವಿಧಾಸಭಾ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗಿಳಿದರು. 2018 ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಅಭ್ಯರ್ಥಿಯಾಗಿ ಕಣಕ್ಕಿಳಿದ ಸೌಮ್ಯರೆಡ್ಡಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು. ಮೊದಲ ಬಾರಿಗೆ ಚುನಾವಣೆ ಕಣಕ್ಕಿಳಿದ ಪುತ್ರಿಗೆ ಕಾಂಗ್ರೆಸ್‌ನ ಹಿರಿಯ ಮುಖಂಡ ರಾಮಲಿಂಗ ರೆಡ್ಡಿ ಸಾಥ್ ನೀಡಿದ್ದರು. ಜೊತೆಗೆ ಇತರ ಕಾಂಗ್ರೆಸ್ ನಾಯಕರು ಸಹ ಸಾಥ್ ನೀಡಿದ್ದರು.












Click it and Unblock the Notifications