ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಯನಗರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ?, ಜೆಡಿಎಸ್ ಪ್ರಚಾರ ಸ್ಥಗಿತ

By Gururaj
|
Google Oneindia Kannada News

ಬೆಂಗಳೂರು, ಜೂನ್ 05 : ಜಯನಗರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆಯೇ?. ಹೌದು ಇಂತಹ ಸುದ್ದಿ ಜಯನಗರದಲ್ಲಿ ಹಬ್ಬಿದೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮೈತ್ರಿ ನಡೆದಿದೆ?.

ಜೂನ್ 11ರಂದು ಜಯನಗರ ಕ್ಷೇತ್ರದ ಚುನಾವಣೆ ನಡೆಯಲಿದೆ. ಆದರೆ, ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ಅವರು ಪ್ರಚಾರವನ್ನು ಸ್ಥಗಿತಗೊಳಿಸಿದ್ದಾರೆ. ಆದ್ದರಿಂದ, ಜೆಡಿಎಸ್ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರಿಗೆ ಪರೋಕ್ಷವಾಗಿ ಬೆಂಬಲ ನೀಡಲಿದೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಕಾಂಗ್ರೆಸ್ ಸೇರಿರುವ ಸುದ್ದಿಗಳನ್ನು ತಳ್ಳಿ ಹಾಕಿದ : ಎನ್.ನಾಗರಾಜುಕಾಂಗ್ರೆಸ್ ಸೇರಿರುವ ಸುದ್ದಿಗಳನ್ನು ತಳ್ಳಿ ಹಾಕಿದ : ಎನ್.ನಾಗರಾಜು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜರಾಜೇಶ್ವರಿ ನಗರ ಚುನಾವಣೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

Jayanagar Elections : JDS may support Congress candidate

ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ.ಎನ್.ವಿಜಯಕುಮಾರ್ ಅವರ ನಿಧನದಿಂದಾಗಿ ಮೇ 12ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿತ್ತು. ಜೂನ್ 11ರಂದು ಚುನಾವಣೆ ನಡೆಯಲಿದ್ದು, ಜೂನ್ 16ರಂದು ಫಲಿತಾಂಶ ಪ್ರಕಟವಾಗಲಿದೆ.

ಜಯನಗರ ವಿಧಾನಸಭಾ ಕ್ಷೇತ್ರ 'ಮಾದರಿ' ಪ್ರಣಾಳಿಕೆಜಯನಗರ ವಿಧಾನಸಭಾ ಕ್ಷೇತ್ರ 'ಮಾದರಿ' ಪ್ರಣಾಳಿಕೆ

ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್.ಪ್ರಹ್ಲಾದ್, ಕಾಂಗ್ರೆಸ್‌ನಿಂದ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಕಣದಲ್ಲಿದ್ದಾರೆ, ಪಕ್ಷೇತರ ಅಭ್ಯರ್ಥಿಯಾಗಿ ರವಿಕೃಷ್ಣಾ ರೆಡ್ಡಿ ಅವರು ಕಣದಲ್ಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ಅವರು ಸೌಮ್ಯಾ ರೆಡ್ಡಿ ಅವರಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಕಾಳೇಗೌಡ ಅವರು ಎರಡು ದಿನಗಳಿಂದ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿಲ್ಲ. ಆದ್ದರಿಂದ, ಅವರು ಕಾಂಗ್ರೆಸ್ ಬೆಂಬಲಿಸಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಆದರೆ, ಕಾಳೇಗೌಡ ಅವರು, 'ನಾನು ಎರಡು ಸುತ್ತಿನ ಪ್ರಚಾರ ನಡೆಸಿದ್ದೇನೆ. ಈಗ ಎರಡು ದಿನದಿಂದ ಪ್ರಚಾರ ನಡೆಸಿಲ್ಲ. ಕಾಂಗ್ರೆಸ್ ಬೆಂಬಲಿಸಿಲ್ಲ' ಎಂದು ಸ್ಪಷ್ಟನೆ ನೀಡಿದ್ದಾರೆ.

English summary
JD(S) may support Congress candidate Sowmya Reddy in Jayanagar elections scheduled on June 11, 2018. Kale Gowda JD(s) candidate in assembly constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X