ರಿಯಾಯಿತಿ ದರದಲ್ಲಿ ಕೋವ್ಯಾಕ್ಸಿನ್‌ ಲಸಿಕೆ ನೀಡಲಿದೆ ಜಯನಗರದ ಯುನೈಟೆಡ್‌ ಆಸ್ಪತ್ರೆ

ಬೆಂಗಳೂರು, ಆಗಸ್ಟ್‌ 10: ಸುಮಾರು 20 ಸಾವಿರಕ್ಕೂ ಹೆಚ್ಚು ಡೋಸ್‌ ಕೋವ್ಯಾಕ್ಸಿನ್‌ ಕೊರೊನಾ ಲಸಿಕೆಯನ್ನು ಹೊಂದಿರುವ ಜಯನಗರದ ಯುನೈಟೆಡ್‌ ಆಸ್ಪತ್ರೆ, ಸರ್ಕಾರ ನಿಗದಿಪಡಿಸಿರುವ ದರದಲ್ಲಿ (ಕೋವಿನ್ ಆಪ್‌ನಲ್ಲಿ ನಮೂದಿಸಿರುವಂತೆ 1410 ರೂ -210 ರೂ=1200 ರೂ) 210 ರೂಪಾಯಿ ರಿಯಾಯಿತಿ ನೀಡಲಿರುವುದಾಗಿ ತಿಳಿಸಿದೆ.

ಸಾಮಾಜಿಕ ಕಾಳಜಿ ಹಾಗೂ ಕೊರೊನಾ ಲಸಿಕೆಯಿಂದ ಹೆಚ್ಚು ಜನರನ್ನು ರಕ್ಷಣೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದ್ದಾರೆ.

"ಬೆಂಗಳೂರು ನಗರದಲ್ಲೆಡೆ ಲಸಿಕೆಗಳ ಕೊರತೆ ಕಂಡುಬರುತ್ತಿದೆ. ವ್ಯಾಪಕವಾಗಿ ಹರಡುತ್ತಿರುವ ಡೆಲ್ಟಾ ಪ್ಲಸ್‌ ರೂಪಾಂತರ ವಿರುದ್ಧ ಪರಿಣಾಮಕಾರಿಯಾಗಿರುವ ಕೋವ್ಯಾಕ್ಸಿನ್‌ ಲಸಿಕೆ ಕೊರತೆ ಹೆಚ್ಚಾಗಿದೆ. ನಮ್ಮ ಆಸ್ಪತ್ರೆಯ ಮಂಡಳಿ ವತಿಯಿಂದ ಎರಡು ತಿಂಗಳ ಹಿಂದೆ ಕೋವ್ಯಾಕ್ಸಿನ್‌ ಹಾಗೂ ಇತರೆ ಲಸಿಕೆಗಳಿಗೆ ಮುಂಗಡ ಹಣ ನೀಡಿ ಖರೀದಿಸಿದ್ದೆವು. ಈಚೆಗೆ ನಮ್ಮ ಆಸ್ಪತ್ರೆಗೆ 20,000 ಡೋಸ್‌ ಕೋವ್ಯಾಕ್ಸಿನ್‌ ಲಸಿಕೆ ಪೂರೈಕೆಯಾಗಿದೆ. ಇದರಲ್ಲಿ 5000 ಡೋಸ್‌ ಗಳನ್ನು ಕೊರೊನಾ ಎರಡನೇ ಅಲೆಯಲ್ಲಿ ಅತ್ಯುತ್ತಮ ಸೇವೆ ಒದಗಿಸಿದ ನಮ್ಮ ಕಲಬುರ್ಗಿ ಆಸ್ಪತ್ರೆಯಲ್ಲಿ ಬಳಸಲಿದ್ದೇವೆ" ಎಂದು ಮಾಹಿತಿ ನೀಡಿದರು.

Jayanagar United Hospital Giving Covaxin Vaccine At Discounted Rate

"ಇನ್ನುಳಿದ 15 ಸಾವಿರ ಡೋಸ್‌ ಲಸಿಕೆಗಳನ್ನು ನಮ್ಮ 15 ಸಹಯೋಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳ ಮುಖಾಂತರ ಬೆಂಗಳೂರಿನಲ್ಲಿ ಬಳಸಲಿದ್ದು, ಸರ್ಕಾರ ನಿಗದಿಪಡಿಸಿರುವ 1410 ರೂಪಾಯಿಗಳಲ್ಲಿ 210 ರೂಪಾಯಿಗಳ ರಿಯಾಯಿತಿ ನೀಡಿ 1200 ರೂಪಾಯಿ ದರದಲ್ಲಿ ನೀಡಲು ಆಸ್ಪತ್ರೆಯ ಆಡಳಿತ ಮಂಡಳಿ ನಿರ್ಧರಿಸಿದೆ. ಎರಡನೇ ಡೋಸ್‌ ಕೋವ್ಯಾಕ್ಸಿನ್‌ ದೊರೆಯದೇ ತೊಂದರೆ ಪಡುತ್ತಿರುವ ಜನರ ಅನುಕೂಲಕ್ಕಾಗಿ ಈ ಯೋಜನೆ ರೂಪಿಸಿದ್ದೇವೆ" ಎಂದು ಡಾ ವಿಕ್ರಮ್‌ ವಿವರಿಸಿದರು.

ಜಯನಗರದ ಯುನೈಟೆಡ್‌ ಆಸ್ಪತ್ರೆಯನ್ನು ಕೋವಿಡ್‌ ಲಸಿಕೆ ನೀಡುವ ಸಲುವಾಗಿ ಕಾಯ್ದಿರಿಸಲಾಗಿದೆ. ಇದನ್ನು ಲಸಿಕೆ ನೀಡುವ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ. ಲಸಿಕೆ ಪಡೆಯುವವರು ಯಾವುದೇ ಭಯವಿಲ್ಲದೆ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆಯಬಹುದಾಗಿದೆ.

"ಐಸಿಎಂಆರ್‌ ಸಂಸ್ಥೆ ವತಿಯಿಂದ ನಡೆಸಲಾದ ಸಂಶೋಧನೆಯಲ್ಲಿ ಕೋವ್ಯಾಕ್ಸಿನ್‌ ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್‌ ರೂಪಾಂತರದ ವಿರುದ್ಧ ಪರಿಣಾಮಕಾರಿ ಎನ್ನಲಾಗಿದೆ. ನಮ್ಮ ಆಸ್ಪತ್ರೆಯಲ್ಲಿ ಈ ಲಸಿಕೆ ಲಭ್ಯವಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಲಸಿಕೆ ಪಡೆದುಕೊಳ್ಳಲು ಅನುವು ಮಾಡಿಕೊಡುವುದು ನಮ್ಮ ಉದ್ದೇಶ. ಕಡಿಮೆ ಸಮಯದಲ್ಲಿ ಹೆಚ್ಚು ಜನರಿಗೆ ಈ ಲಸಿಕೆ ತಲುಪಿಸುವ ನಿಟ್ಟಿನಲ್ಲಿ ನಮ್ಮ ಸಹಯೋಗಿ ಆಸ್ಪತ್ರೆಗಳ ಮೂಲಕವೂ ಲಸಿಕೆಯನ್ನು ಸಾರ್ವಜನಿಕರಿಗೆ ದೊರಕಿಸಿಕೊಡಲಿದ್ದೇವೆ" ಎಂದು ವಿವರಿಸಿದರು ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಶಾಂತಕುಮಾರ್‌ ಮುರುಡಾ.

Jayanagar United Hospital Giving Covaxin Vaccine At Discounted Rate

ಆಸ್ಪತ್ರೆ ವತಿಯಿಂದ ಕಡಿಮೆ ದರದಲ್ಲಿ ಸದಸ್ಯತ್ವ ಕಾರ್ಡನ್ನು ಪಡೆದುಕೊಳ್ಳುವ ಮೂಲಕ ಎರಡನೇ ಡೋಸ್‌ ಕೋವ್ಯಾಕ್ಸಿನ್ ಲಸಿಕೆಯನ್ನು ಕಾಯ್ದಿರಿಸುವ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಆಸ್ಪತ್ರೆಯ ವತಿಯಿಂದ 4 ಸಾವಿರಕ್ಕೂ ಹೆಚ್ಚು ಸ್ಪುಟ್ನಿಕ್‌-ವಿ ಲಸಿಕೆ ನೀಡಲಾಗಿದ್ದು, ಇನ್ನೂ 12 ಸಾವಿರ ಡೋಸ್‌ಗೆ ಆರ್ಡರ್‌ ನೀಡಿದ್ದೇವೆ ಎಂದು ಹೇಳಿದರು.

ಬೆಂಗಳೂರಿನ ಜಯನಗರದ ಮಾಧವ ಪಾರ್ಕ್‌ನಲ್ಲಿರುವ ಯುನೈಟೆಡ್‌ ಆಸ್ಪತ್ರೆಯಲ್ಲಿ ಈ ಲಸಿಕೆ ಪಡೆದುಕೊಳ್ಳಬಹುದಾಗಿದೆ. ವಾಟ್ಸಾಪ್‌ ಮೂಲಕ ಸುಲಭವಾಗಿ ಸ್ಲಾಟ್‌ ಬುಕ್‌ ಮಾಡುವ ಸೌಲಭ್ಯವಿದೆ.

ಹೆಚ್ಚಿನ ಮಾಹಿತಿಗೆ ವಾಟ್ಸಾಪ್‌ ನಂ: 99169 77777
080 4566 6666 / 080 6933 3333/ ಟೋಲ್ ನಂಬರ್: 1860 419 4444 ಅಥವಾ ಇ ಮೇಲ್ - [email protected]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+