ವಿಜಯ್ ಕುಮಾರ್ ವಿಧಿವಶ: ಜಯನಗರ ಚುನಾವಣೆ ಮುಂದೂಡಿಕೆ?
Recommended Video

ಜಯನಗರ, ಮೇ 04: ಜಯನಗರ ಶಾಸಕ ಬಿ.ಎನ್.ವಿಜಯ್ ಕುಮಾರ್ ಅವರು ನಿನ್ನೆ ರಾತ್ರಿ ವಿಧಿವಶವಾಗಿದ್ದಾರೆ. ಜಯನಗರದಿಂದ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿದಿದ್ದರು.
ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿ ವಿಧಿವಶರಾಗಿರುವ ಜಯನಗರ ಚುನಾವಣೆ ಮುಂದೂಡಿಕೆ ಆಗುವುದು ಬಹುತೇಕ ಖಚಿತ. ಈ ಬಗ್ಗೆ ಚುನಾವಣಾ ಆಯೋಗ ಅಧಿಕೃತ ಘೋಷಣೆ ಹೊರಡಿಸಬೇಕಿದೆಯಷ್ಟೆ.
ಜಯನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಅವರು ಕಣಕ್ಕಿಳಿದಿದ್ದರು. ಜೆಡಿಎಸ್‌ನಿಂದ ಕಾಳೇಗೌಡ ಅವರು ಕಣಕ್ಕಿಳಿದಿದ್ದರು. ಕ್ಷೇತ್ರದ ಮತ್ತೊಬ್ಬ ಪ್ರಮುಖ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಅವರು ಪಕ್ಷೇತರವಾಗಿ ಕಣಕ್ಕಿಳಿದಿದ್ದರು.
ಚಿತ್ರಗಳಲ್ಲಿ: ಸಜ್ಜನ ರಾಜಕಾರಣಿ ವಿಜಯಕುಮಾರ್ ಗೆ ಅಂತಿಮ ನಮನ

ಜಯನಗರದಲ್ಲಿ ಈ ಬಾರಿ ವಿಜಯ್ ಕುಮಾರ್ ಹಾಗೂ ಸೌಮ್ಯರೆಡ್ಡಿ ನಡುವೆ ನೇರ ಸ್ಪರ್ಧೆ ಎಂದೇ ಬಿಂಬಿಸಲಾಗುತ್ತಿತ್ತು. ಇದೀಗ ವಿಜಕುಮಾರ್ ಅವರು ನಿಧನ ಹೊಂದಿದ್ದು, ಚುನಾವಣೆ ನಡೆದಾಗ ಬಿಜೆಪಿ ಯಾರಿಗೆ ಟಿಕೆಟ್ ನೀಡಲಿದೆ ಹಾಗೂ ಸಜ್ಜನ ರಾಜಕಾರಣಿ ಎಂದು ಹೆಸರಾಗಿದ್ದ ವಿಜಯಕುಮಾರ್ ಅವರ ಸಾವು ಕಾಂಗ್ರೆಸ್ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆಯೇ ಕಾದು ನೋಡಬೇಕಿದೆ.












Click it and Unblock the Notifications